ಲಾರೆನ್ಸ್‌ ಬಿಷ್ಣೋಯ್ ಗುಂಪಿನ ಜೊತೆ ಭಾರತ ಸರ್ಕಾರವೇ ಕೈಜೋಡಿಸಿದೆ: ಕೆನಡಾ ಆರೋಪ

Date:

ಕೆನಡಾದಲ್ಲಿ ಖಲಿಸ್ತಾನಿ ಗುಂಪುಗಳನ್ನು ಮಟ್ಟ ಹಾಕಲು ಭಾರತ ಸರ್ಕಾರ ಕುಖ್ಯಾತ ಗ್ಯಾಂಗ್‌ಸ್ಟಾರ್ ಲಾರೆನ್ಸ್‌ ಬಿಷ್ಣೋಯ್ ಗುಂಪಿನೊಂದಿಗೆ ಕೈಜೋಡಿಸಿದೆ ಎಂದು ಕೆನಡಾ ಸರ್ಕಾರ ಗಂಭೀರ ಆರೋಪ ಮಾಡಿದೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್‌ನ ಸಹಾಯಕ ಆಯುಕ್ತ ಬ್ರಿಗಿಟ್ಟೆ ಗೌವಿನ್, “ಭಾರತವು ನಿರ್ದಿಷ್ಟವಾಗಿ ಬಿಷ್ಣೋಯ್ ಗ್ಯಾಂಗ್‌ನಂತಹ ಸಂಘಟಿತ ಅಪರಾಧ ಗುಂಪುಗಳನ್ನು ಬಳಸಿಕೊಂಡು ಕೆನಡಾದಲ್ಲಿ ಖಲಿಸ್ತಾನಿ ಪರ ಗುಂಪುಗಳನ್ನು ಗುರಿಯಾಗಿಸಿಕೊಂಡಿದೆ. ಸಂಘಟಿತ ಅಪರಾಧ ಮಾಡುತ್ತಿರುವ ಬಿಷ್ಣೋಯ್ ಗುಂಪಿನೊಂದಿಗೆ ಭಾರತದ ಏಜೆಂಟರು ಕೈಜೋಡಿಸಿರುವುದನ್ನು ಕೆನಡಾ ಪೊಲೀಸರು ಪತ್ತೆಹಚ್ಚಿದ್ದಾರೆ. ಭಾರತವು ದಕ್ಷಿಣ ಏಷ್ಯಾದ ಸಮುದಾಯವನ್ನು ಗುರಿಯಾಗಿಸುತ್ತಿದೆ. ಪ್ರಮುಖವಾಗಿ ಕೆನಡಾದಲ್ಲಿ ಖಲಿಸ್ತಾನಿ ಗುಂಪುಗಳನ್ನು ಗುರಿಯಾಗಿಸುತ್ತಿದೆ” ಎಂದು ಹೇಳಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಗುಂಪಿನ ಸದಸ್ಯರು ಮುಂಬೈನಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ 66 ವರ್ಷದ ಬಾಬಾ ಸಿದ್ದೀಕಿ ಅವರನ್ನು ಗುಂಡಿಕ್ಕಿ ಕೊಂದ ನಂತರ ಕೆನಡಾ ಸರ್ಕಾರ ಭಾರತದ ವಿರುದ್ಧ ಮತ್ತೊಂದು ಗುರುತರವಾದ ಆರೋಪ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

31 ವರ್ಷದ ಬಿಷ್ಣೋಯ್ ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದಾನೆ. ಜೈಲಿನಲ್ಲಿದ್ದರೂ 2022 ರಲ್ಲಿ ಪಂಜಾಬಿ ಗಾಯಕ ಸಿದ್ದು ಮೂಸೆವಾಲಾ, 2023 ರಲ್ಲಿ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಸೇರಿದಂತೆ ಅನೇಕ ಪ್ರಮುಖ ಗಣ್ಯರನ್ನು ಹತ್ಯೆ ಮಾಡಿಸಿದ ಆರೋಪ ಹೊತ್ತಿದ್ದಾನೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಈ ನಡುವೆ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ಎರಡೂ ದೇಶಗಳು ತಲಾ 6 ಮಂದಿ ರಾಜತಾಂತ್ರಿಕರನ್ನು ಉಚ್ಚಾಟಿಸಿವೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸುರ್ರೆ ನಗರದ ಗುರುದ್ವಾರದ ಬಳಿ ಖಲಿಸ್ತಾನಿ ಉಗ್ರ ನಿಜ್ಜಾರ್‌ ಆಗುಂತಕರ ಗುಂಡೇಟಿಗೆ ಬಲಿಯಾಗಿದ್ದ. ಕೃತ್ಯದಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಆರೋಪ ಮಾಡಿದ ಬಳಿಕ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಸರಿಯಾಗಿ ಒಂದು ವರ್ಷದ ಬಳಿಕ ಪ್ರಕರಣಕ್ಕೆ ಮತ್ತೆ ಜೀವ ನೀಡಿರುವ ಕೆನಡಾ ಸರ್ಕಾರ, ಹತ್ಯೆಯ ಹಿಂದೆ ಭಾರತೀಯ ರಾಯಭಾರಿ ಸಂಜಯ್‌ಕುಮಾರ್‌ ವರ್ಮಾ ಅವರ ಪಾತ್ರವಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹೇಳಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...