ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ: ಭಾರತ ಆಕ್ರೋಶ

Date:

ಖಲಿಸ್ತಾನಿ ಉಗ್ರಗಾಮಿ ಹರ್‌ದೀಪ್‌ ಸಿಂಗ್‌ ನಿಜ್ಜರ್ ಸಾವಿನ ಮೊದಲ ವರ್ಷದ ನೆನಪಿಗಾಗಿ ಕೆನಡಾ ಸಂಸತ್ತಿನ ಕೆಳಮನೆ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಮಂಗಳವಾರ ಮೌನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಕೆನಡಾದ ಮೌನಾಚರಣೆಗೆ ಭಾರತದ ರಾಯಭಾರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. 1985ರಲ್ಲಿ ಏರ್‌ ಇಂಡಿಯಾ ಕಾನಿಷ್ಕ ವಿಮಾನ ಸ್ಫೋಟದಲ್ಲಿ ಮೃತಪಟ್ಟ 329 ಜನರಿಗೆ ಗೌರವ ಸೂಚಿಸಲು ಇದೇ ಭಾನುವಾರ ಸ್ಮರಣಾರ್ಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಜೂ.22 ರಂದು ಸ್ಟ್ಯಾನ್ಲಿ ಪಾರ್ಕ್‌ನ ಕೇಪರ್‌ಲೇ ಮೈದಾನದಲ್ಲಿ ಸಂಜೆ 6.30 ಕ್ಕೆ ಸ್ಮರಣಾರ್ಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತೀಯ ರಾಯಭಾರಿ ಕಚೇರಿ, “ಭಯೋತ್ಪಾದನೆಯನ್ನು ನಿಗ್ರಹಿಸುವ ಭಾರತ ತನ್ನ ನಿಲುವಿನಲ್ಲಿ ಮುಂಚೂಣಿಯಲ್ಲಿದೆ. ಈ ಜಾಗತಿಕ ಬೆದರಿಕೆಯನ್ನು ನಿಗ್ರಹಿಸಲು ಎಲ್ಲ ರಾಷ್ಟ್ರಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಕಾನಿಷ್ಕಾದ ಏರ್‌ ಇಂಡಿಯಾ ವಿಮಾನ ಸ್ಫೋಟಿಸಿ 86 ಮಕ್ಕಳು ಒಳಗೊಂಡು 329 ಅಮಾಯಕರನ್ನು ಹೇಡಿತನದ ಭಯೋತ್ಪಾದನೆಯ ಮೂಲಕ ಅತ್ಯಂತ ಹೀನವಾಗಿ ಹತ್ಯೆ ಮಾಡಲಾಗಿತ್ತು. ಇದರ 39ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮ ಜೂನ್‌ 23, 2014ರಂದು  ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಹರ್‌ದೀಪ್‌ ಸಿಂಗ್‌ ನಿಜ್ಜರ್ ಖಲಿಸ್ತಾನಿ ಟೈಗರ್‌ ಫೋರ್ಸ್‌ನ ಮುಖ್ಯಸ್ಥನಾಗಿದ್ದು,ಕಳೆದ ವರ್ಷ ಕೆನಡಾದ ಸರ್ರೆಯ ಬ್ರಿಟಿಷ್ ಕೊಲಂಬಿಯಾ ಗುರುದ್ವಾರದ ಹೊರಭಾಗದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಭಾರತ ಸರ್ಕಾರ ಈತನು ಒಳಗೊಂಡಂತೆ 40 ಮಂದಿಯನ್ನು ‘ನಿಯೋಜಿತ ಉಗ್ರಗಾಮಿಗಳು’ ಎಂದು ಘೋಷಿಸಿತ್ತು.

ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಮೂಲದ ನಾಲ್ವರು ಭಾಗಿಯಾಗಿದ್ದಾರೆ ಎಂದು ಕೆನಡಾ  ಆರೋಪಿಸಿದೆ. ನಿಜ್ಜರ್‌ ಕೊಲೆಯಲ್ಲಿ ಭಾರತ ಸರ್ಕಾರ ನೇರವಾಗಿ ಭಾಗಿಯಾಗಿದೆ ಕೆನಡಾ ಆರೋಪಿಸಿದ್ದು, ಎರಡೂ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆಯುಂಟಾಗಿದೆ.

ಈ ನಡುವೆ ಇತ್ತೀಚಿಗಷ್ಟೆ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೇಯು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...