ಕೆನಡಾ ಚಿತ್ರಮಂದಿರಗಳಿಗೆ ಬೆಂಕಿ, ಗುಂಡು; ಕಾಂತಾರ ಸಿನಿಮಾ ಪ್ರದರ್ಶನಕ್ಕೆ ತಡೆ!

Date:

ಕನ್ನಡದ ಬಹುನಿರೀಕ್ಷಿತ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಚಿತ್ರವು ಕೆನಡಾದಲ್ಲಿ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ಎದುರಿಸಿದೆ. ಓಕ್‌ವಿಲ್‌ನ ಫಿಲ್ಮ್.ಕಾ ಚಿತ್ರಮಂದಿರವು ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಗಳ ನಂತರ ಈ ನಿರ್ಧಾರಕ್ಕೆ ಬಂದಿದೆ. ಸೆಪ್ಟೆಂಬರ್ 25ರಂದು ಬೆಳಗಿನ ಜಾವ ಅಪರಿಚಿತರು ಪೆಟ್ರೋಲ್ ಡಬ್ಬಿಗಳೊಂದಿಗೆ ಚಿತ್ರಮಂದಿರದ ಬಾಗಿಲಿಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಗಳಲ್ಲಿ ಎರಡು ಕಾರುಗಳಲ್ಲಿ ಬಂದ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕ್ಷಣಗಳು ದಾಖಲಾಗಿವೆ. ಬೆಂಕಿ ಹೊರಗಡೆಯಲ್ಲೇ ಸೀಮಿತವಾದರೂ, ಚಿತ್ರಮಂದಿರಕ್ಕೆ ಹಾನಿಯಾಗಿದೆ.

ಅದೇ ವೇಳೆ ಅಕ್ಟೋಬರ್ 2ರಂದು ಬೆಳಿಗ್ಗೆ ಮತ್ತೊಂದು ಭಯಾನಕ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿ ಚಿತ್ರಮಂದಿರದ ಬಾಗಿಲಿನತ್ತ ಹಲವು ಸುತ್ತು ಗುಂಡು ಹಾರಿಸಿದ್ದಾನೆ. ಕಪ್ಪು ಬಟ್ಟೆ ಧರಿಸಿದ್ದ, ದಪ್ಪ ಮೈಕಟ್ಟುಳ್ಳ ವ್ಯಕ್ತಿ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಘಟನೆಗಳೂ ನೇರವಾಗಿ ದಕ್ಷಿಣ ಏಷ್ಯಾ ಸಿನಿಮಾಗಳ ಪ್ರದರ್ಶನಕ್ಕೆ ಸಂಬಂಧಿತವಾಗಿವೆ ಎಂದು ಚಿತ್ರಮಂದಿರದ ಆಡಳಿತ ಮಂಡಳಿ ಹೇಳಿದೆ.

ಇದನ್ನು ಓದಿದ್ದೀರಾ? ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಫಿಲ್ಮ್.ಕಾ ಚಿತ್ರ ಮಂದಿರವು ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಹಾಗೂ ಪವನ್ ಕಲ್ಯಾಣ್ ನಟನೆಯ ದೆ ಕಾಲ್‌ ಇಮ್‌ ಒಜಿ ಚಿತ್ರಗಳ ಪ್ರದರ್ಶನವನ್ನು ಹಿಂಪಡೆಯುವುದಾಗಿ ಪ್ರಕಟಿಸಿದೆ. “ನಮ್ಮ ಸಮುದಾಯದ ಭದ್ರತೆ ಮುಖ್ಯವಾದ್ದರಿಂದ ತಾತ್ಕಾಲಿಕವಾಗಿ ಪ್ರದರ್ಶನ ನಿಲ್ಲಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಯಾರ್ಕ್ ಸಿನೆಮಾಸ್ ಕೂಡ ಭಾರತೀಯ ಚಿತ್ರಗಳ ಪ್ರದರ್ಶನವನ್ನು ನಿಲ್ಲಿಸುವ ತೀರ್ಮಾನ ಕೈಗೊಂಡಿದೆ.

ಹಾಲ್ಟನ್ ಪೊಲೀಸರು ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಈ ಘಟನೆಗಳ ಹಿಂದೆ ಖಾಲಿಸ್ತಾನಿ ಅತಿರೇಕಿಗಳ ಕೈ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಆದಾಗ್ಯೂ, ಈವರೆಗೆ ಯಾವುದೇ ಅಧಿಕೃತ ದೃಢೀಕರಣ ದೊರೆತಿಲ್ಲ. ಈ ಬೆಳವಣಿಗೆಯಿಂದ ಕೆನಡಾದ ಕನ್ನಡಿಗರು ಹಾಗೂ ಭಾರತೀಯ ಸಮುದಾಯದಲ್ಲಿ ಆತಂಕ ಮೂಡಿದೆ.

ಅಕ್ಟೊಬರ್‌ 2 ರಂದು ಬಿಡುಗಡೆಯಾಗಿರುವ ಕಾಂತಾರ ಸಿನಿಮಾ ಮೂಲ ಕನ್ನಡ ಸೇರಿದಂತೆ ಹಲವು ಅವತರಣಿಕೆಗಳಲ್ಲಿ ತೆರೆಕಂಡಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...