ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಆಯ್ಕೆ

Date:

ಕೆನಡಾದ ಕೇಂದ್ರೀಯ ಬ್ಯಾಂಕಿನ ಮಾಜಿ ಗವರ್ನರ್ ಮಾರ್ಕ್ ಕಾರ್ನಿ ಅವರನ್ನು ಪ್ರಧಾನಿ ಹುದ್ದೆಗೆ ಭಾನುವಾರ(ಮಾ.09) ಆಡಳಿತಾರೂಢ ಲಿಬರಲ್ ಪಕ್ಷ ಆಯ್ಕೆ ಮಾಡಿದೆ. ಹಾಲಿ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಕಾರ್ನಿ ಅವರನ್ನು ಆಯ್ಕೆ ಮಾಡಲಾಗಿದೆ.

ಏಪ್ರಿಲ್ 2ರಿಂದ ದೇಶದ ಆರ್ಥಿಕತೆಯ ಮೇಲೆ ಹೇರಲು ಉದ್ದೇಶಿಸಿರುವ ಸುಂಕದ ಆತಂಕದ ಹಿನ್ನೆಲೆಯಲ್ಲಿ ಅಮೆರಿಕ ಜತೆ ಸಂಘರ್ಷ ಏರ್ಪಟ್ಟಿರುವ ನಡುವೆಯೇ ಈ ಆಯ್ಕೆ ನಡೆದಿದೆ.

ಕಾರ್ನಿ ಬ್ಯಾಂಕ್ ಆಫ್ ಕೆನಡಾದ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಕಠಿಣ ಆರ್ಥಿಕ ಸಂಘರ್ಷವನ್ನು ಸಮರ್ಥವಾಗಿ ನಿಭಾಯಿಸಿದ್ದರು.ಬಳಿಕ 2013ರಲ್ಲಿ ಬ್ಯಾಂಕ್ ಆಫ್ ಇಂಗ್ಲೆಂಡ್ ಗೆ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಇತರ ಹಲವು ದೇಶಗಳಿಗೆ ಹೋಲಿಸಿದರೆ 2008ರ ಆರ್ಥಿಕ ಸಂಕಷ್ಟದಿಂದ ಶೀಘ್ರವಾಗಿ ಕೆನಡಾ ಹೊರಬಂದ ಹಿನ್ನೆಲೆಯಲ್ಲಿ ದೇಶದ ಪ್ರಜೆಯಲ್ಲದ ಕಾರ್ನಿ ಅವರ ನೇಮಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ದಿನ ಕೇವಲ ಆಚರಣೆ ಮಾತ್ರವಲ್ಲ ಹಿರಿಮೆ

ಕಳೆದ ವಾರ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ್ದ ಕಾರ್ನಿ, ಸುಂಕದ ಬೆದರಿಕೆಯನ್ನು “ನಮ್ಮ ಜೀವಿತಾವಧಿಯ ಅತ್ಯಂತ ಗಂಭೀರ ಸಂಕಷ್ಟ” ಎಂದು ಬಣ್ಣಿಸಿದ್ದರು.”ನಾವು ಏನು ನಿರ್ಮಿಸಲು ಹೊರಟಿದ್ದೇವೆಯೋ ಅದರ ವಿರುದ್ಧ ಟ್ರಂಪ್ ದಾಳಿ ನಡೆಸುತ್ತಿದ್ದಾರೆ. ನಮ್ಮ ಮಾರಾಟದ ಮೇಲೆ, ನಮ್ಮ ಜೀವನಾಧಾರದ ಮೇಲೆ ಟ್ರಂಪ್ ದಾಳಿ ಮಾಡುತ್ತಿದ್ದಾರೆ.ನಾವು ನಮ್ಮ ಜೀವಿತಾವಧಿಯ ಅತ್ಯಂತ ಕಠಿಣ ಸಂಕಷ್ಟವನ್ನು ಎದುರಿಸುತ್ತಿದ್ದೇವೆ” ಎಂದು ಹೇಳಿದ್ದರು.

ಟ್ರಂಪ್ ವಿಧಿಸಿರುವ ಸುಂಕಕ್ಕೆ ಪ್ರತಿಯಾಗಿ ಕೆನಡಾ ಈಗಾಗಲೇ ಸುಂಕ ವಿಧಿಸಿದ್ದು, ವಿಶ್ವ ವ್ಯಾಪಾರ ಸಂಸ್ಥೆಯ ಬಳಿಯೂ ದೂರು ದಾಖಲಿಸಿದೆ. ಕಾರ್ನಿ ಅವರು ಸಂಸತ್ತಿನಲ್ಲಿ ಹಾಗೂ ಚುನಾಯಿತ ಸಂಸ್ಥೆಗಳಲ್ಲಿ ಯಾವುದೇ ಅನುಭವವನ್ನೂ ಹೊಂದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...