ಚೀನಾದ ಒಪ್ಪಂದ ರದ್ದು; ಭಾರತದೊಂದಿಗೆ ಶ್ರೀಲಂಕಾ ಇಂಧನ ಒಪ್ಪಂದ

Date:

ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್‌ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು ಪವನ ಶಕ್ತಿಯಿಂದ ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣದ ಟೆಂಡರ್‌ಅನ್ನು ಭಾರತೀಯ ಕಂಪನಿಗೆ ನೀಡಿದೆ.

ಭಾರತವು ತನ್ನ ಪ್ರಭಾವದ ವ್ಯಾಪ್ತಿ ಹಾಗೂ ಪ್ರಮುಖ ಜಾಗತಿಕ ಹಡಗು ಮಾರ್ಗಗಳ ಬಳಿ ಇರುವ ಶ್ರೀಲಂಕಾದಲ್ಲಿ ಚೀನೀ ಪ್ರಭಾವ ಬೆಳೆಯುತ್ತಿರುವ ಬಗ್ಗೆ ಭಾರತ ಹಿಂದಿನಿಂದಲೂ ಚಿಂತಿಸುತ್ತಿದೆ. ಎರಡು ವರ್ಷಗಳ ಹಿಂದೆ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ (ಎಡಿಬಿ) ಸಾಲ ಪಡೆದು ವಿದ್ಯುತ್‌ ಘಟಕ ನಿರ್ಮಾಣ ಯೋಜನೆಯನ್ನು ಚೀನಾ ಕಂಪನಿಗೆ ಶ್ರೀಲಂಕಾ ಟೆಂಡರ್‌ ನೀಡಿತ್ತು. ಈ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ಆದರೆ, ಇತ್ತೀಚೆಗೆ ಆ ಟೆಂಡರ್‌ಅನ್ನು ರದ್ದುಪಡಿಸಿದ್ದ ಶ್ರೀಲಂಕಾ, ಯೋಜನೆಯನ್ನು ಸ್ಥಗಿತಗೊಳಿಸಿತ್ತು.

ಈಗ, ಆ ಯೋಜನೆಯನ್ನು ಪುನರುಜ್ಜೀವನಗೊಳಿಸಿದೆ. ಭಾರತದ ಕಂಪನಿಗೆ ಟೆಂಡರ್‌ ನೀಡಿದೆ. ಯೋಜನೆಗೆ 11 ದಶಲಕ್ಷ ಡಾಲರ್‌ನಷ್ಟು ಹಣವನ್ನು ಭಾರತ ಸರ್ಕಾರದ ಅನುದಾನದಿಂದ ನೀಡಲಾಗಿದೆ ಎಂದು ಶ್ರೀಲಂಕಾದ ಇಂಧನ ಸಚಿವಾಲಯ ಶುಕ್ರವಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಟೆಕ್ ಹಬ್ ಎಂದೇ ಹೆಸರಾಗಿರುವ ಬೆಂಗಳೂರು ಮೂಲದ ‘ಯು-ಸೋಲಾರ್’ ಕಂಪನಿಗೆ ಕಟ್ಟಡದ ಗುತ್ತಿಗೆ ನೀಡಲಾಗಿದೆ ಎಂದು ಅದು ಹೇಳಿದೆ.

“ಭಾರತದ ನೆರವು ದ್ವಿಪಕ್ಷೀಯ ಇಂಧನ ಪಾಲುದಾರಿಕೆಗೆ ಹೊಸ ಮಹತ್ವ ನೀಡುತ್ತದೆ” ಎಂದು ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ಮೂರು ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕಗಳ ಮೂಲಕ 2,230 ಕಿಲೋವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಶ್ರೀಲಂಕಾ ಹೊಂದಿದೆ. ಈ ಘಟಕಗಳನ್ನು ಶ್ರೀಲಂಕಾದ ಜಾಫ್ನಾ ನಗರದ ಸಮೀಪದ ದ್ವೀಪಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಚೀನಾ ಮತ್ತು ಭಾರತವು ಶ್ರೀಲಂಕಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಒಪ್ಪಂದಗಳಿಗಾಗಿ ಪೈಪೋಟಿ ನಡೆಸುತ್ತಿವೆ. ಆದರೆ, ಶ್ರೀಲಂಕಾ 1948ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಪ್ರಸ್ತುತದ ದಿನಗಳಲ್ಲಿ ಎದುರಿಸುತ್ತಿದ್ದು, ಬಿಕ್ಕಟ್ಟಿನಿಂದ ಹೊರ ಬರಲು ಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...