ಅಫ್ಘಾನಿಸ್ತಾನದಿಂದ ಭಾರತಕ್ಕೆ ಸರಕು ಸಾಗಾಟ; ಪಾಕಿಸ್ತಾನ ಅನುಮತಿ

Date:

ಭಾರತಕ್ಕೆ ಸರಕು ಸೇವೆಗಳನ್ನು ಸಾಗಿಸುವುದಕ್ಕೆ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಅನುಮತಿ ನೀಡಿದೆ. ವಾಘಾ – ಅಟ್ಟಾರಿ ಗಡಿಯ ಮೂಲಕ ಸರಕು ಸಾಗಾಟಕ್ಕೆ ಅನುಮತಿ ನೀಡಲಾಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನಿಸ್ತಾನ ರಾಯಬಾರಿ ಕಚೇರಿಗೆ ಈ ಬಗ್ಗೆ ಪತ್ರ ಬರೆದಿದೆ. 150 ಅಫ್ಘಾನ್ ಟ್ರಕ್‍ಗಳಿಗೆ ವಾಘಾ ಗಡಿಯ ಮೂಲಕ ಭಾರತ ಪ್ರವೇಶಿಸಲು ಅನುಮತಿ ಸಿಕ್ಕಿದೆ.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಇದಾದ ಬಳಿಕ ವಾಘಾ ಗಡಿಯನ್ನು ಎರಡೂ ದೇಶಗಳು ಬಂದ್ ಮಾಡಿದ್ದವು. ಇದರಿಂದ ಭಾರತಕ್ಕೆ ಅಫ್ಘಾನಿಸ್ತಾನದಿಂದ ಬರುತ್ತಿದ್ದ ಸರಕುಗಳು ನಿಂತಿದ್ದವು. ಸರಕು ಸಾಗಾಟ ಮಾಡಲು ಅನುಮತಿ ನೀಡುವಂತೆ ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ಮನವಿ ಮಾಡಿತ್ತು. ಈ ಮನವಿ ಮೇರೆಗೆ ಪಾಕ್ ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಏ.22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ನಂತರ ಭಾರತ ಪಾಕ್‌ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿಯಲಾಗಿತ್ತು.

ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ಆದೇಶಿಸಿತ್ತು. ಇದಲ್ಲದೆ ಸಾರ್ಕ್ ವೀಸಾ ವಿನಾಯಿತಿ ಯೋಜನೆ ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ ಎಸ್‌ವಿಇಎಸ್ ವೀಸಾಗಳನ್ನು ರದ್ದುಗೊಳಿಸಿ, ಭಾರತ ತೊರೆಯುವಂತೆ ಸೂಚಿಸಲಾಗಿತ್ತು. ಇದಕ್ಕೆ ತಕ್ಕಂತೆ ಪಾಕ್ ಸಹ ಪ್ರತಿ ತಂತ್ರಗಳನ್ನು ರೂಪಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...