ಮ್ಯಾನ್ಮಾರ್‌ನಲ್ಲಿ ಅಂತರ್ಯುದ್ಧ: ಆಸ್ಪತ್ರೆ ಮೇಲೆ ಮಿಲಿಟರಿ ದಾಳಿ; 31 ಮಂದಿ ಸಾವು

Date:

ಮ್ಯಾನ್ಮಾರ್‌ನಲ್ಲಿ ಅಂತರ್ಯುದ್ಧ ತೀವ್ರಗೊಂಡಿದೆ. ಪಶ್ಚಿಮ ರಾಖೈನ್ ರಾಜ್ಯದ ಮ್ರೌಕ್-ಯು ಜನರಲ್ ಆಸ್ಪತ್ರೆ ಮೇಲೆ ಮ್ಯಾನ್ಮಾರ್ ಮಿಲಿಟರಿ ವಾಯುದಾಳಿ ನಡೆಸಿದ್ದು, ಕನಿಷ್ಠ 31 ಮಂದಿ ಬಲಿಯಾಗಿದ್ದಾರೆ. ಸುಮಾರು 68 ಜನರು ಗಾಯಗೊಂಡಿದ್ದಾರೆ.

ಇದೇ ತಿಂಗಳ ಅಂತ್ಯದಲ್ಲಿ ಮ್ಯಾನ್ಮಾರ್‌ನಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರಗಳು ನಡೆಯುತ್ತಿರುವ ಸಮಯದಲ್ಲಿಯೇ ಅಂತರ್ಯುದ್ಧವೂ ಭುಗಿಲೆದ್ದಿದೆ.

ಮ್ಯಾನ್ಮಾರ್‌ನಲ್ಲಿ 2021ರಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಂತ್ಯಗೊಳಿಸಿ, ದೇಶದ ಅಧಿಕಾರವನ್ನು ಮಿಲಿಟರಿ ಕಸಿದುಕೊಂಡಿತ್ತು. ಮಿಲಿಟರಿ ಆಡಳಿತದ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಯುತ್ತಲೇ ಇವೆ. ಜನಾಕ್ರೋಶವನ್ನು ಹತ್ತಿಕ್ಕಲು ಜುಂಟಾ (ಮ್ಯಾನ್ಮಾರ್‌ ಸೇನೆ) ವಾಯುದಾಳಿಗಳನ್ನು ನಡೆಸುತ್ತಿದೆ ಎಂದು ಸ್ಥಳೀಯ ನೆರವು ಕಾರ್ಯಕರ್ತ ವೈ ಹುನ್ ಆಂಗ್ ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೆಲ್ಲದರ ನಡುವೆ, ಮಿಲಿಟರಿಯು ಡಿಸೆಂಬರ್ 28ರಿಂದ ಚುನಾವಣೆ ನಡೆಸಲು ನಿರ್ಧರಿಸಿದೆ. ಹೋರಾಟವನ್ನು ಬದಿಗಿಟ್ಟು, ಮತದಾನ ಮಾಡಬೇಕೆಂದು ಹೇಳುತ್ತಿದೆ.

“ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈಗಾಗಲೇ 31 ಸಾವುಗಳು ಸಂಭವಿಸಿವೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಬಹುದು. 68 ಮಂದಿ ಗಾಯಗೊಂಡಿದ್ದಾರೆ. ರಕ್ಷಣೆ ಮತ್ತು ನೆರವು ಕಾರ್ಯಗಳು ನಡೆಯುತ್ತಿವೆ” ಎಂದು ಆಂಗ್ ಹೇಳಿದ್ದಾರೆ.

ಕಳೆದ ವಾರ, ಮ್ಯಾನ್ಮಾನ್‌ನ ಅಪ್ಪರ್‌-ಮಿಡ್ಲ್‌ ಸಾಗಿಂಗ್ ಪ್ರದೇಶದಲ್ಲಿ ಚಹಾ ಅಂಗಡಿಯ ಮೇಲೆ ಮ್ಯಾನ್ಮಾರ್ ಸೇನೆ ದಾಳಿ ನಡೆಸಿ, 18 ನಾಗರಿಕರನ್ನು ಕೊಂದಿತು. ದಾಳಿಯಲ್ಲಿ 20 ಮಂದಿ ಗಾಯಗೊಂಡಿದ್ದರು.

2021ರ ಫೆಬ್ರವರಿಯಲ್ಲಿ ಆಂಗ್ ಸಾನ್ ಸೂಕಿ ಅವರ ನೇತೃತ್ವದ ಚುನಾಯಿತ ಸರ್ಕಾರವನ್ನು ಮ್ಯಾನ್ಮಾರ್‌ ಸೇನೆಯು ಉರುಳಿಸಿತು. ಅಧಿಕಾರವನ್ನು ತನ್ನ ವಶಕ್ಕೆ ಪಡೆದುಕೊಂಡಿತು. ಅಂದಿನಿಂದ, ಮ್ಯಾನ್ಮಾರ್ ಪ್ರಕ್ಷುಬ್ಧತೆಯಿಂದ ಕೂಡಿದೆ. ವ್ಯಾಪಕವಾದ ಜನಾಕ್ರೋಶಕ್ಕೆ ಗುರಿಯಾಗಿದೆ. ಸೇನೆಯ ದಮನದ ವಿರುದ್ಧ ಕೆಲವು ಗುಂಪುಗಳು ಶಸ್ತ್ರಾಸ್ತ್ರ ಹೋರಾಟವನ್ನೂ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...