ಕೊಲಂಬಿಯಾ | ವಿಮಾನ ದುರಂತ: ಸಂಸದ ಸೇರಿ 15 ಮಂದಿ ಸಾವು

Date:

ಸಂಸತ್ ಸದಸ್ಯ ಸೇರಿದಂತೆ 15 ಮಂದಿ ಪ್ರಮಾಣಿಸುತ್ತಿದ್ದ ವಿಮಾನ ಕೊಲಂಬಿಯಾ- ವೆನೆಜುವೆಲಾ ಗಡಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ.

ವಿಮಾನದಲ್ಲಿ 13 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾಗೆ ಸೇರಿದ ಈ ವಿಮಾನ ಗಡಿಭಾಗದ ಕುಕುಟಾದಿಂದ ಟೇಕಾಫ್ ಆಗಿತ್ತು. ಪಕ್ಕದ ಒಕಾನೊ ಬಳಿ ಸಂಜೆ ಇಳಿಯಬೇಕಿದ್ದ ವಿಮಾನ ಲ್ಯಾಂಡಿಂಗ್‌ಗಿಂತ ಮೊದಲು ನಿಯಂತ್ರಣ ಗೋಪುರದ ಜತೆ ಸಂಪರ್ಕ ಕಡಿದುಕೊಂಡಿದೆ ಎಂದು ತಿಳಿದು ಬಂದಿದೆ.

“ವಿಮಾನದಲ್ಲಿದ್ದ ಯಾರೂ ಉಳಿದುಕೊಂಡಿಲ್ಲ” ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ಕುಕುಟಾ ಪರ್ವತ ಪ್ರದೇಶವಾಗಿದ್ದು, ಸವಾಲುದಾಯಕ ಹವಾಮಾನವಿದೆ. ಜತೆಗೆ ಕಾಂಬೋಡಿಯಾದ ಅತಿದೊಡ್ಡ ಗೆರಿಲ್ಲಾ ಗುಂಪು ಎನಿಸಿದ ನ್ಯಾಷನಲ್ ಲಿಬರೇಶನ್ ಆರ್ಮಿಯ ನಿಯಂತ್ರಣದಲ್ಲಿದೆ. ವಿಮಾನದ ಅವಶೇಷಗಳನ್ನು ಪತ್ತೆ ಮಾಡಲು ಮತ್ತು ದೇಹಗಳ ಪತ್ತೆಗೆ ಸರ್ಕಾರ ವಾಯುಪಡೆಯನ್ನು ನಿಯೋಜಿಸಿದೆ. ಒಬ್ಬರು ಸಂಸತ್ ಸದಸ್ಯರು ಹಾಗೂ ಒಬ್ಬರು ಶಾಸನಸಭೆ ಅಭ್ಯರ್ಥಿ ಈ ವಿಮಾನದಲ್ಲಿದ್ದರು ಎಂದು ಹೇಳಲಾಗಿದೆ.

“ವಿಮಾನ ಅಪಘಾತದ ಬಗೆಗಿನ ಆತಂಕಕಾರಿ ಮಾಹಿತಿ ನಮಗೆ ಬಂದಿದೆ. ಇದರಲ್ಲಿ ನಮ್ಮ ಸಹೋದ್ಯೋಗಿ ಡಯಾಗೊನೆಸ್ ಕ್ವಿಂಟೆರೊ, ಕಾರ್ಲೋಸ್ ಸೆಲ್ಸೆಡೊ ಮತ್ತು ಅವರ ತಂಡದವರು ಪ್ರಯಾಣಿಸುತ್ತಿದ್ದರು” ಎಂದು ಸ್ಥಳೀಯ ಸಂಸದ ವಿಲ್ಮರ್ ಕರಿಲೊ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...