ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ವಿಧಿಸಿದ ಅಪರಾಧ ನ್ಯಾಯಮಂಡಳಿ

Date:

ಕಳೆದ ವರ್ಷ (2024ರ) ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿದೆ.

ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶೇಖ್‌ ಹಸೀನಾ, ಮಾಜಿ ಗೃಹ ಸಚಿವ ಅಸಾದುಜ್ಜಾಮಾನ್‌ ಖಾನ್‌ ಕಮಲ್‌ ಹಾಗೂ ಮಾಜಿ ಐಜಿ‍‍‍‍ಪಿ ಚೌಧರಿ ಅಬ್ದುಲ್ಲಾ ಅಲ್‌–ಮುಮುನ್‌ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮಂಡಳಿಯು 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು (ಸೋಮವಾರ) ತೀರ್ಪು ಪ್ರಕಟಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಆತ್ಮಾವಲೋಕನದ ಕಾಲ ಮಾತ್ರವಲ್ಲ, ಪ್ರಬಲವಾಗಿ ಸಜ್ಜುಗೊಳ್ಳುವ ಸಮಯ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‌ಹಸೀನಾ ಅವರ ಸರ್ಕಾರ ಪ್ರತಿಭಟನಕಾರರ ಮೇಲೆ ಭದ್ರತಾ ಕ್ರಮ ಕೈಗೊಳ್ಳಲು ಆದೇಶಿಸಿದ್ದರಿಂದ 2024ರ ಜುಲೈ 15ರಿಂದ ಆಗಸ್ಟ್ 15ರವರೆಗೆ 1,400 ಜನರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿ ಹೇಳಿದೆ.

ತೀರ್ಪಿಗೂ ಮುನ್ನ ಬಾಂಗ್ಲಾದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು, ಯಾವುದೇ ಅಹಿತಕರ ಘಟನೆ, ಸಂಘರ್ಷಗಳು ನಡೆಯದಂತೆ ಎಚ್ಚರ ವಹಿಸಲು ಸೇನಾ ಪಡೆಗಳು, ಬಾಂಗ್ಲಾದೇಶ ಗಡಿ ಭದ್ರತಾ ಪಡೆ ಹಾಗೂ ಅರೆ ಸೇನಾ ಪಡೆಯ ತುಕಡಿಗಳನ್ನು ರಾಜಧಾನಿ ಢಾಕಾದಲ್ಲಿ ನಿಯೋಜಿಸಲಾಗಿದೆ. ಅಲ್ಲದೇ ಹಿಂಸಾತ್ಮಕ ಪ್ರತಿಭಟನೆ ನಡೆಸುವವರ ವಿರುದ್ಧ ಕಂಡಲ್ಲಿ ಗುಂಡು ಹಾರಿಸುವ ಆದೇಶ ಹೊರಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...