ಅಮೆರಿಕ | ಊಟ, ನಿದ್ದೆ, ಶೌಚ ಬಿಟ್ಟು ಸಂಸತ್‌ನಲ್ಲಿ 25 ಗಂಟೆ ನಿರಂತರ ಭಾಷಣ ಮಾಡಿದ ಸಂಸದ; ಟ್ರಂಪ್‌ ವಿರುದ್ಧ ವಾಗ್ದಾಳಿ

Date:

ಡೆಮಾಕ್ರಟಿಕ್ ಪಕ್ಷದ ಸಂಸದ ಕೋರಿ ಬುಕರ್ ಅಮೆರಿಕ ಸಂಸತ್ತಿನಲ್ಲಿ ಸತತ 25 ಗಂಟೆಗಳಿಗೂ ಹೆಚ್ಚು ಕಾಲ ಮಾತನಾಡುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ್ದಾರೆ.

55 ವರ್ಷದ ಕೋರಿ ಬುಕರ್ ಕೋರಿ ಬುಕರ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಸೆನೆಟ್‌ನಲ್ಲಿ ಸತತ 25 ಗಂಟೆಗಳಿಗೂ ಹೆಚ್ಚು ಕಾಲ ಮಾತನಾಡಿದರು. ಬುಕರ್ ಸೋಮವಾರ ಸಂಜೆ ತಮ್ಮ ಭಾಷಣವನ್ನು ಪ್ರಾರಂಭಿಸಿ, ಮಂಗಳವಾರ ಸಂಜೆ ಮುಗಿಸಿದರು.

ಭಾಷಣದ ನಡುವೆ ಅವರು ಒಂದೇ ಒಂದು ವಿರಾಮ ತೆಗೆದುಕೊಳ್ಳಲಿಲ್ಲ, ಕುಳಿತುಕೊಳ್ಳಲಿಲ್ಲ, ಶೌಚಾಲಯಕ್ಕೂ ಹೋಗಲಿಲ್ಲ, ಏನನ್ನೂ ಸೇವಿಸಿಲ್ಲ, ಕನಿಷ್ಠ ನೀರನ್ನೂ ಕುಡಿದಿಲ್ಲ. ಮಾತನಾಡಲು ಪ್ರಾರಂಭಿಸಿದ 25 ಗಂಟೆ 5 ನಿಮಿಷಗಳ ನಂತರ ಟ್ರಂಪ್ ಆಡಳಿತವನ್ನು ಖಂಡಿಸಿ ತಮ್ಮ ಭಾಷಣವನ್ನು ಬುಕರ್ ಮುಕ್ತಾಯಗೊಳಿಸಿದರು. ತಮ್ಮ ಭಾಷಣದ ಕೊನೆಯಲ್ಲಿ ಅವರು ಅಮೆರಿಕನ್ ನಾಗರಿಕ ಹಕ್ಕುಗಳ ಐಕಾನ್ ಜಾನ್ ಲೂಯಿಸ್ ಅವರನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಸಿ ಆರಿಸಿದವರನ್ನೇ ಮೂರ್ಖರನ್ನಾಗಿಸುತ್ತಿರುವ ಸರ್ಕಾರಗಳು

ಟ್ರಂಪ್ ಅವರ ನೀತಿಗಳನ್ನು ವಿರೋಧಿಸುವ ತಮ್ಮ ಈ ಭಾಷಣದ ಉದ್ದಕ್ಕೂ ಅವರು ಸಹಿಷ್ಣುತೆ ಪ್ರದರ್ಶಿಸಿದರು. ಈ ದೀರ್ಘ ಭಾಷಣದೊಂದಿಗೆ ಅವರು 67 ವರ್ಷಗಳ ಹಿಂದಿನ ಸ್ಟ್ರೋಮ್ ಥರ್ಮಂಡ್ ಅವರ ಭಾಷಣದ ದಾಖಲೆ ಮುರಿದಿದ್ದಾರೆ. 1957 ರಲ್ಲಿ ಬಲಪಂಥೀಯ ರಿಪಬ್ಲಿಕನ್ ಸ್ಟ್ರೋಮ್ ಥರ್ಮಂಡ್ ನಾಗರಿಕ ಹಕ್ಕುಗಳ ಕಾಯ್ದೆಯನ್ನು ವಿರೋಧಿಸಿ 24 ಗಂಟೆ 18 ನಿಮಿಷಗಳ ಕಾಲ ಮಾತನಾಡಿದ್ದರು.

ಕೋರಿ ಬುಕರ್ ನ್ಯೂಜೆರ್ಸಿಯ ಡೆಮಾಕ್ರಟಿಕ್ ಸಂಸದರಾಗಿದ್ದಾರೆ. 2006 ರಿಂದ 2013 ರವರೆಗೆ ಅವರು ನೇವಾರ್ಕ್ ಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಕ್ಟೋಬರ್ 2013 ರಲ್ಲಿ ಯುಎಸ್ ಸೆನೆಟ್‌ನಲ್ಲಿ ನ್ಯೂಜೆರ್ಸಿಯನ್ನು ಪ್ರತಿನಿಧಿಸಲು ವಿಶೇಷ ಚುನಾವಣೆಯಲ್ಲಿ ಜಯಗಳಿಸಿದರು. ನವೆಂಬರ್ 2014 ರಲ್ಲಿ ಅವರು ಪೂರ್ಣ ಆರು ವರ್ಷಗಳ ಅವಧಿಗೆ ಮರು ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...