ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕ್ರಿಸ್ಟಿಯಾನೋ ರೊನಾಲ್ಡೊ; ಒಂದೇ ದಿನದಲ್ಲಿ ‘ಡೈಮಂಡ್ ಬಟನ್’

Date:

ಪೋರ್ಚುಗಲ್‌ನ ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಯೂಟ್ಯೂಬ್ ಚಾನೆಲ್‌ ಆರಂಭಿಸಿದ ಒಂದು ದಿನದಲ್ಲೇ ಡೈಮಂಡ್ ಬಟನ್ ಪಡೆದುಕೊಂಡಿದ್ದಾರೆ.

ಚಾನೆಲ್ ಆರಂಭಿಸಿದ 90 ನಿಮಿಷಕ್ಕೆ 1 ಮಿಲಿಯನ್ ಅಂದರೆ 10 ಲಕ್ಷ ಹಾಗೂ 12 ಗಂಟೆಯಲ್ಲೇ 10 ಮಿಲಿಯನ್ ಅಂದರೆ ಒಂದು ಕೋಟಿಗೂ ಅಧಿಕ ಚಂದಾದಾರರನ್ನು ಹೊಂದಿದ್ದಾರೆ. ಈ ಸಮಯಕ್ಕೆ ಚಂದಾದಾರರ ಸಂಖ್ಯೆ 30.8 ಮಿಲಿಯನ್ ಅಂದರೆ ಮೂರು ಕೋಟಿಗೂ ಅಧಿಕವಾಗಿದೆ. ಕ್ಷಣಕ್ಷಣಕ್ಕೂ ಚಂದಾದಾರರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ.

ರೊನಾಲ್ಡೊಗೆ ಜಗತ್ತಿನಾದ್ಯಂತ ಲಕ್ಷಾಂತರ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಅವರ ಯೂಟ್ಯೂಬ್ ಚಾನೆಲ್ ಸಾಕ್ಷಿಯಾಗಿದೆ. ಫುಟ್ಬಾಲ್ ಪ್ರೇಮಿಗಳ ನೆಚ್ಚಿನ ಆಟಗಾರರಾದ ರೊನಾಲ್ಡೊ ಖ್ಯಾತಿಯು ಬರೀ ಒಂದು ಯೂಟ್ಯೂಬ್ ಚಾನೆಲ್‌ನಿಂದ ಮತ್ತಷ್ಟು ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಯೂಟ್ಯೂಬರ್‌ಗಳಿಗೆ ಸಿಲ್ವರ್, ಗೋಲ್ಡ್, ಡೈಮಂಡ್ ಬಟನ್‌ಗಳನ್ನು ಪಡೆಯುವುದು ಒಂದು ಕನಸಾಗಿರುತ್ತದೆ. ಈ ಎಲ್ಲ ಬಟನ್‌ಗಳು ಚಂದಾದಾರರ ಸಂಖ್ಯೆಯ ಆಧಾರದಲ್ಲಿ ಸಿಗುತ್ತದೆ. 100,000 ಚಂದಾದಾರರಾದರೆ ಸಿಲ್ವರ್ ಬಟನ್, 1,000,000 ಚಂದಾದಾರರಾದರೆ ಗೋಲ್ಡ್ ಬಟನ್, 10,000,000 ಚಂದಾದಾರರಾದರೆ ಡೈಮಂಡ್ ಬಟನ್ ಲಭ್ಯವಾಗುತ್ತದೆ.

ಇದನ್ನು ಓದಿದ್ದೀರಾ? ಜಗತ್ತಿನ ದೃಶ್ಯ ಮಾಧ್ಯಮವನ್ನು ಸಂಪೂರ್ಣವಾಗಿ ಆವರಿಸಿಕೊಂಡ ಯೂಟ್ಯೂಬ್

ಯೂಟ್ಯೂಬರ್‌ಗಳು ತಮ್ಮ ಕನಸನ್ನು ನನಸಾಗಿಸಲು ಹಲವಾರು ವರ್ಷಗಳ ಪರಿಶ್ರಮದಿಂದ ಪಡೆಯುವಾಗ 39 ವರ್ಷ ವಯಸ್ಸಿನ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಬರೀ 10 ಗಂಟೆಗಳಲ್ಲಿ ಸಾಧಿಸಿದ್ದಾರೆ.

ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಪತ್ನಿ ಜಾರ್ಜಿನಾ ರೊಡ್ರಿಗಸ್ ಅವರ ಹಿರಿಯ ಮಗ ಕ್ರಿಸ್ಟಿಯಾನೊ ರೊನಾಲ್ಡೊ ಜೂನಿಯರ್ ಜೊತೆಗೆ ವಿಡಿಯೋಗಳನ್ನು ಮಾಡಿ ಈ ಯೂಟ್ಯೂಬ್‌ ಚಾನೆಲ್‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಈ ಹಿಂದೆ ಮಿಸ್ಟರ್ ಬೀಸ್ಟ್ 132 ದಿನಗಳಲ್ಲಿ ಮಿಲಿಯನ್ ಚಂದಾದಾರರನ್ನು ಪಡೆಯುವ ಸಾಧನೆ ಮಾಡಿದ್ದರು. ಪ್ರಸ್ತುತ 311 ಮಿಲಿಯನ್ ಚಂದಾದಾರರನ್ನು ಮಿಸ್ಟರ್ ಬೀಸ್ಟ್ ಹೊಂದಿದ್ದಾರೆ. ಕ್ರಿಸ್ಟಿಯಾನೋ ರೊನಾಲ್ಡೊ ಚಂದಾದಾರರ ಪ್ರಮಾಣ ಹೆಚ್ಚಾಗುತ್ತಿರುವ ವೇಗವನ್ನು ನೋಡಿದರೆ ಶೀಘ್ರವೇ ಮಿಸ್ಟರ್ ಬೀಸ್ಟ್‌ಗಿಂತ ಅಧಿಕ ಚಂದಾದಾರರನ್ನು ಕ್ರಿಸ್ಟಿಯಾನೋ ರೊನಾಲ್ಡೊ ಹೊಂದುವ ನಿರೀಕ್ಷೆಯಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ....

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...