ಮೂವರಿಗೆ 2024ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ ಪ್ರಕಟ

Date:

ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಆರ್ಥಿಕ ಕ್ಷೇತ್ರದಲ್ಲಿನ ಕೊಡುಗೆಗಾಗಿ 2024ರ ನೊಬೆಲ್
ಪ್ರಶಸ್ತಿಯನ್ನು ಘೋಷಿಸಿದೆ.

ಟರ್ಕಿಯ  ಡೇರಾನ್ ಅಸೆಮೊಗ್ಲು ಹಾಗೂ ಇಂಗ್ಲೆಂಡಿನ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಆರ್ಥಿಕ ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಅವು ಸಮೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬ ಅಧ್ಯಯನಕ್ಕಾಗಿ ವಿಜೇತರಿಗೆ ಗೌರವವನ್ನು ನೀಡಲಾಯಿತು ಎಂದು ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ತಿಳಿಸಿದೆ.

ಕಳೆದ ವರ್ಷದ 2023ರ ಸಾಲಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ‘ಕ್ಲಾಡಿಯಾ ಗೋಲ್ಡಿನ್’ ಅವರನ್ನು
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಮಹಿಳಾ ಕಾರ್ಮಿಕ ಮಾರುಕಟ್ಟೆಯ ಫಲಿತಾಂಶಗಳ ಬಗ್ಗೆ
ನಮ್ಮ ತಿಳುವಳಿಕೆಯನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಅವರಿಗೆ ಈ ಗೌರವವನ್ನು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

ಅರ್ಥಶಾಸ್ತ್ರದಲ್ಲಿ ನೊಬೆಲ್‌ ಪ್ರಶಸ್ತಿ ನೀಡುವುದನ್ನು 1968ರಲ್ಲಿ ಪ್ರಾರಂಭಿಸಲಾಯಿತು. ಇಲ್ಲಿಯವರೆಗೂ ಒಟ್ಟು ಮೂವರು ಮಹಿಳೆಯರನ್ನು ಒಳಗೊಂಡು 93 ಮಂದಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಭಾರತದ ಅಮರ್ತ್ಯ ಸೇನ್ ಅವರು 1998ರಲ್ಲಿ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...