8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

Date:

ಭಾರತಕ್ಕೆ ಆಗಮಿಸಿ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶ ದ ಜೆನಾಯ್‌ದೇಹ್‌-4 ಕ್ಷೇತ್ರದ ಸಂಸದ ಅನ್ವುರುಲ್ ಅಜೀಮ್‌ ಅನಾರ್ ಅವರ ಛಿದ್ರಗೊಂಡ ದೇಹವನ್ನು ಕೋಲ್ಕತ್ತಾ ಪೊಲೀಸರು ಹೊರತೆಗೆದಿದ್ದಾರೆ.

ಸಂಸದರನ್ನು ಮೊದಲೇ ಕೊಲೆ ಮಾಡಿರಬಹುದು ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ. ಅನ್ವರ್‌ ಅವರ ದೇಹ ಛಿದ್ರಗೊಂಡಿದ್ದು,ಸಂಜೀವಾ ಗಾರ್ಡನ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಹೊರತೆಗೆಯಲಾಗಿದೆ. ಕಟ್ಟಡವು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಗೃಹ ಸಚಿವರಾದ ಅಸ್ಸಾದುಜ್ಜಾಮಾನ್ ಖಾನ್‌, “ಭಾರತದ ಡಿಐಜಿ ಒಬ್ಬರನ್ನು ಉಲ್ಲೇಖಿಸಿ, ನಮ್ಮ ಪೊಲೀಸರು ಕೋಲ್ಕತ್ತಾದಲ್ಲಿ ಅಜೀಮ್‌ ಅವರ ದೇಹವನ್ನು ಹೊರತೆಗೆದಿದ್ದಾರೆ. ನಾವು ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇನ್ನಷ್ಟೆ ದೃಢೀಕರಿಸಬೇಕಿದೆ. ನಮ್ಮ ಐಜಿ ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎಲ್ಲವೂ ದೃಢೀಕರಿಸಿದ ಬಳಿಕ ನಾನು ಮಾಧ್ಯಮಕ್ಕೆ ಮಾಹಿತಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಮೃತ ಸಂಸದರ ಆಪ್ತ ಕಾರ್ಯದರ್ಶಿ ಅಬ್ದುರ್ ರಾಫ್, ಭಾರತ ಸರ್ಕಾರದಿಂದ ಸಂಸದರ ಮರಣದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಸ್ವೀಕರಿಸಿಲ್ಲ. ಆದರೆ ಸಂಸದರ ಕುಟುಂಬ ವೀಸಾ ಅನುಮತಿಗಾಗಿ ಢಾಕಾದಲ್ಲಿ ಕಾಯುತ್ತಿದೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದ ಐಜಿ ಮಾತನಾಡಿ, ನಾವು ಕೋಲ್ಕತ್ತಾದ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಮಾಧ್ಯಮಗಳ ವರದಿಯಂತೆ ಸಂಸದರ ಕೊಲೆಯ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದರು.

ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಉಪ ರಾಯಭಾರಿಯ ಪ್ರಕಾರ ಸಂಸದ ಅನ್ವರ್‌ ಅವರು ವೈದ್ಯಕೀಯ ಚಿಕಿತ್ಸೆಗೆಂದು ಮೇ 13ರಂದು ಕೋಲ್ಕತ್ತಾಗೆ ಆಗಮಿಸಿದ ನಂತರ ನಾಪತ್ತೆಯಾಗಿದ್ದಾರೆ. ಪರಿಚಿತರನ್ನು ಭೇಟಿ ಮಾಡಲು ತೆರಳಿದ್ದವರು ವಾಪಸಾಗಿರಲಿಲ್ಲ. ನಂತರ ಅವರ ನಾಪತ್ತೆಯ ಬಗ್ಗೆ ಸಂಸದರ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...