ಭಾರತದ ಜತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಪಾಕ್‌ನಲ್ಲಿ ಔಷಧ ಪೂರೈಕೆಗೆ ವ್ಯತ್ಯಯ

Date:

ಪಹಲ್ಗಾಮ್’ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜತೆಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬೆನ್ನಲ್ಲೇ,ಭಾರತದ ಜತೆಗಿನ ಎಲ್ಲ ವ್ಯಾಪಾರ ಒಪ್ಪಂದಗಳನ್ನು ಪಾಕಿಸ್ತಾನ ಕಡಿದುಕೊಂಡಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟದಿಂದ ಜರ್ಜರಿತವಾಗಿರುವ ದೇಶದಲ್ಲಿ ಔಷಧಿಗಳ ಪೂರೈಕೆ ವ್ಯತ್ಯಯವಾಗಿದೆ.

ಭಾರತದ ಜತೆಗೆ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಔಷಧೀಯ ಅಗತ್ಯತೆಗಳ ಪೂರೈಕೆಗೆ ಪಾಕಿಸ್ತಾನ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಆರೋಗ್ಯ ಅಧಿಕಾರಿಗಳು ಔಷಧಿಗಳನ್ನು ಪಡೆದುಕೊಳ್ಳಲು ತುರ್ತು ಸರ್ವಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವ್ಯಾಪಾರ ವಹಿವಾಟು ಸ್ಥಗಿತದಿಂದ ಔಷಧ ಉದ್ಯಮದ ಮೇಲೆ ಉಂಟಾಗಿರುವ ನೇರ ಪರಿಣಾಮದ ಬಗ್ಗೆ ಯಾವುದೇ ಅಧಿಕೃತ ಅಧಿಸೂಚನೆ ಇಲ್ಲ; ಆದರೆ ತುರ್ತು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ ಎಂದು ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರ ದೃಢಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

2019ರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂತಹ ತುರ್ತು ಸನ್ನಿವೇಶಗಳಿಗಾಗಿ ನಾವು ಸಜ್ಜಾಗಿದ್ದೇವೆ. ನಮ್ಮ ಔಷಧಿ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಕ್ರಿಯರಾಗಿದ್ದೇವೆ ಎಂದು ಡಿಆರ್ಎಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಪಿಐ (ಆ್ಯಕ್ಟಿವ್ ಫಾರ್ಮಸ್ಯೂಟಿಕಲ್ ಇಂಗ್ರೀಡಿಯೆಂಟ್ಸ್) ಮತ್ತು ವಿವಿಧ ಅತ್ಯಾಧುನಿಕ ಚಿಕಿತ್ಸಾ ಉತ್ಪನ್ನಗಳು ಸೇರಿದಂತೆ ಪಾಕಿಸ್ತಾನದ ಔಷಧೀಯ ಕಚ್ಚಾವಸ್ತುಗಳ ಪೈಕಿ ಶೇಕಡ 30 ರಿಂದ 40ರಷ್ಟು ಪಾಲು ಭಾರತದಿಂದ ಪೂರೈಕೆಯಾಗುತ್ತಿದೆ. ಆದರೆ ಈ ಪೂರೈಕೆ ಸರಣಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಡಿಆರ್ಎಪಿ, ಚೀನಾ, ರಷ್ಯಾ ಮತ್ತು ಇತರ ಹಲವು ಯೂರೋಪಿಯನ್ ದೇಶಗಳಿಂದ ಪರ್ಯಾಯ ಮೂಲಗಳ ಹುಡುಕಾಟದಲ್ಲಿದೆ.

ರೇಬಿಸ್ ತಡೆ ಲಸಿಕೆ, ಹಾವಿನ ವಿಷ, ಕ್ಯಾನ್ಸರ್ ಚಿಕಿತ್ಸೆ, ಮೊನೊಕ್ಲೊನಾಲ್ ಆಂಟಿಬಾಡಿಗಳು ಮತ್ತು ಇತರ ಪ್ರಮುಖ ಜೈವಿಕ ಉತ್ಪನ್ನಗಳು ಸೇರಿದಂತೆ ಅಗತ್ಯ ವೈದ್ಯಕೀಯ ಪೂರೈಕೆಯ ಲಭ್ಯತೆಯ ನಿರಂತರತೆಯನ್ನು ಕಾಪಾಡಿಕೊಳ್ಳಲು ಏಜೆನ್ಸಿ ಪ್ರಯತ್ನ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...