ಇರಾನ್-ಇಸ್ರೇಲ್ ಸಂಘರ್ಷ | ಇಸ್ರೇಲ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

Date:

ಇಸ್ರೇಲ್ ಹಾಗೂ ಇರಾನ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಕದನಕ್ಕೆ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ್ದರೂ ದಾಳಿ ನಿಂತಿರಲಿಲ್ಲ. ಈ ಸಂಘರ್ಷದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಮಾಧ್ಯಮಗಳ ಎದುರು ಇಸ್ರೇಲ್‌ ದೇಶದ ನಡೆಯಿಂದ ಬಾಯಿಗೆ ಬಂದಂತೆ ಬಹಿರಂಗ ವಾಗ್ದಾಳಿ ನಡೆಸಿದ ಬೆಳವಣಿಗೆ ನಡೆದಿದೆ.

ಸದ್ಯ ನಡೆಯುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಬಗ್ಗೆ ಅಧ್ಯಕ್ಷ ಟ್ರಂಪ್ ತಮ್ಮ ಹತಾಶೆಯನ್ನು ಹೊರಹಾಕಿದ್ದು, “ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳು ತಮ್ಮ ಕದನ ವಿರಾಮ ಘೋಷಣೆಯನ್ನು ತ್ವರಿತವಾಗಿ ಧಿಕ್ಕರಿಸಿದ್ದಾರೆ. ಅವರು ಮತ್ತೊಮ್ಮೆ ಪರಸ್ಪರ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಹಗೆತನವನ್ನು ಮುಂದುವರೆಸಿದ್ದಾರೆ. ತಮ್ಮ ಮಿತ್ರರಾಷ್ಟ್ರಗಳ ನಡೆಯ ಬಗ್ಗೆ ಸಂತೋಷವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಇಸ್ರೇಲ್ ಮೇಲೆ ದಾಳಿ ನಡೆಸಿ ‘ಈಗ ಕದನ ವಿರಾಮ’ ಜಾರಿಯಾಗಿದೆ ಎಂದ ಇರಾನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಮಿತ್ರರಾಷ್ಟ್ರಗಳು ಬಹಳ ಸಮಯದಿಂದ ಸಂಘರ್ಷ ನಡೆಸುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆಂದು ಅವರಿಗೇ ತಿಳಿದಿಲ್ಲ” ಎಂದು ಕೋಪದಿಂದಲೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

“ಇರಾನ್ ಮಾತ್ರವಲ್ಲದೇ ಇಸ್ರೇಲ್‌ ಕೂಡ ಕದನ ವಿರಾಮ ಉಲ್ಲಂಘಿಸಿದೆ. ಕದನ ವಿರಾಮದ ಬಗ್ಗೆ ಮಾತನಾಡಲು ಕರೆದಿದ್ದು ಇಸ್ರೇಲ್. ಆ ಬಳಿಕ ದಾಳಿ ನಡೆಸಿರುವುದು ಕೂಡ ಅವರೇ. ಇಷ್ಟೊಂದು ಪ್ರಮಾಣದಲ್ಲಿ ಬಾಂಬ್‌ಗಳನ್ನು ಇಸ್ರೇಲ್‌ ಸುರಿಸಿರುವುದನ್ನು ನಾನು ಈ ಮೊದಲು ಕಂಡಿರಲಿಲ್ಲ. ಇಸ್ರೇಲ್‌ನ ನಡೆಯ ಬಗ್ಗೆ ನಾನು ಸಂತೋಷಗೊಂಡಿಲ್ಲ” ಎಂದು ಕೋಪದಿಂದಲೇ ಡೊನಾಲ್ಡ್ ಟ್ರಂಪ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕದ ಈವರೆಗಿನ ಅಧ್ಯಕ್ಷರುಗಳ ಪೈಕಿ ಈ ರೀತಿಯಾಗಿ ಯಾರೂ ಕೂಡ ಈ ಹಿಂದೆ ಈ ರೀತಿಯಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿರಲಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...