ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಸಂಬಂಧ ಮುಗಿದ ಅಧ್ಯಾಯ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ.
“ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಹುಶಃ ಅತ್ಯಂತ ಕೆಟ್ಟ ಹಂತದ ಸಂಬಂಧ ಇದಾಗಿದೆ. ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿ ಜಾರಿಯಿಂದ ಒಂದು ಕಾಲದ ಆಪ್ತಮಿತ್ರರ ನಡುವೆ ಎಲ್ಲವೂ ಮುಗಿದ ಅಧ್ಯಾಯವಾಗಿದೆ” ಎಂದಿದ್ದಾರೆ.
“ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕ ನಾಯಕರೊಂದಿಗಿನ ಅವರ ವೈಯಕ್ತಿಕ ಸಂಬಂಧಗಳನ್ನು ದಿನದಿಂದ ದಿನಕ್ಕೆ ಅಳಸಿಕೊಳ್ಳುತ್ತಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದ ಹಿಡಿದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ತನಕ ಸಂಬಂಧ ಹಳಸಿಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ.
“ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಅದು ಈಗ ಮುಗಿದ ಹೋದ ಅಧ್ಯಾಯವಾಗಿದೆ.ಇದು ಇತರೆ ಜಾಗತಿಕ ನಾಯಕರಿಗೆ ಉತ್ತಮ ಪಾಠವಾಗಿದೆ. ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್ಮರ್, ಉತ್ತಮ ವೈಯಕ್ತಿಕ ಸಂಬಂಧವೂ ಈಗ ಹಳಸುವ ಹಂತಕ್ಕೆ ಬಂದಿದೆ” ಎಂದಿದ್ದಾರೆ.
“ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ 17 ರಿಂದ 19 ರವರೆಗೆ ಇಂಗ್ಲೆಂಡ್‍ಗೇ ಭೇಟಿ ನೀಡಲಿದ್ದು ಅಮೇರಿಕಾ ಮತ್ತು ಇಂಗ್ಲೆಂಡ್ ನಡುವಿನ ಸಂಬಂಧವನ್ನು ಸುಧಾರಿಸುವ ನಿಟ್ಟಿನಲ್ಲಿ ಗಮನ ಹರಿಸುವ ಸಾಧ್ಯತೆ ಇದೆ” ಎನ್ನಲಾಗಿದೆ.
ಈ ಮೊದಲ ಟ್ರಂಪ್ ಆಡಳಿತದಲ್ಲಿ NSA ಆಗಿ ಬೋಲ್ಟನ್ ಸೇವೆ ಸಲ್ಲಿಸಿದ್ದರು. ಈಗ ಟ್ರಂಪ್ ಅವರನ್ನೇ ನೇರವಾಗಿ ಟೀಕಿಸುತ್ತಿದ್ದಾರೆ. ಟ್ರಂಪ್ ಅವರು ಮೋದಿ ಅವರೊಂದಿಗೆ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಅದು ಈಗ ಇಲ್ಲವಾಗಿದೆ. ಇದು ಎಲ್ಲರಿಗೂ ಒಂದು ಪಾಠವಾಗಿದೆ. ಉದಾಹರಣೆಗೆ (ಯುಕೆ ಪ್ರಧಾನಿ) ಕೀರ್ ಸ್ಟಾರ್ಮರ್, ಒಳ್ಳೆಯ ವೈಯಕ್ತಿಕ ಸಂಬಂಧವು ಕೆಲವೊಮ್ಮೆ ಸಹಾಯ ಮಾಡಬಹುದು. ಆದರೆ ಅದು ನಿಮ್ಮನ್ನು ಕೆಟ್ಟದ್ದರಿಂದ ರಕ್ಷಿಸುವುದಿಲ್ಲ ಎಂದು ಟ್ರಂಪ್‌ಗೆ ಎಚ್ಚರಿಕೆ ಕೂಡ ನೀಡಿದ್ದಾರೆ.





