ದುಬೈ | ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ‘ಕನ್ನಡಿಗಾಸ್ ಹೆಲ್ಪ್ ಲೈನ್’ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ

Date:

ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ ‘ಕನ್ನಡಿಗಾಸ್ ಹೆಲ್ಪ್ ಲೈನ್’ ತಂಡವು, ಯುಎಇಯಲ್ಲಿ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಮತ್ತು ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳಲು ಝೂಮ್ ಸಭೆಯನ್ನು ಆಯೋಜಿಸಿತು.

ಯುಎಇಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಸುರಕ್ಷಿತವಾಗಿದ್ದು, ಇಲ್ಲಿನ ಸರ್ಕಾರ ಎಲ್ಲ ಅನಿವಾಸಿಗಳ ಸುರಕ್ಷತೆಯನ್ನು ಸಮರ್ಪಕವಾಗಿ ಕಾಪಾಡುತ್ತಿದೆ, ಯಾವುದೇ ಆತಂಕಕ್ಕೆ ಒಳಗಾಗದೆ, ಅನಧಿಕೃತ ಅಥವಾ ಅಪಪ್ರಚಾರದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಬಾರದು ಎಂದು ಯುಎಇಯ ಅನಿವಾಸಿ ಕನ್ನಡಿಗರಿಗೆ ಕರ್ನಾಟಕ ಎನ್ಆರೈ ಫೋರಂ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕರೆನೀಡಿದರು.

ಯುಎಇ ಅತ್ಯಂತ ಸುರಕ್ಷಿತ ದೇಶ, ಪರಿಸ್ಥಿತಿ ಶೀಘ್ರದಲ್ಲೇ ಮೊದಲಿನಂತೆ ಆಗುತ್ತದೆ. ಎಲ್ಲರೂ ಯುಎಇ ಸರ್ಕಾರದ ಮಾರ್ಗದರ್ಶನ ಪಾಲಿಸಿ ಸಹಕರಿಸಬೇಕು ಎಂದರು, ಈಗ ಸಂಕಷ್ಟದಲ್ಲಿರುವ ಪ್ರವಾಸಿಗರ ತುರ್ತು ವ್ಯವಸ್ಥೆಯನ್ನು ನಿರ್ವಹಿಸಲು ಬೇಕಾದ ವೆಚ್ಚವನ್ನು ಭರಿಸಲು ನಾನು ತಯಾರಿದ್ದೇನೆ, ಅದೇ ರೀತಿ ಕರ್ನಾಟಕ ಸರ್ಕಾರ ತುರ್ತು ಪರಿಹಾರ ಸಹಾಯಧನ ಘೋಷಣೆ ಮಾಡಲು ಒತ್ತಾಯಿಸುತ್ತೇನೆ ಎಂದು ರೊನಾಲ್ಡ್ ಕೊಲಸೋ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಬೈನಲ್ಲಿ ಸಿಲುಕಿರುವ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡರು ಮಾತನಾಡಿ, ಪರಿಸ್ಥಿತಿ ಬೇಗನೇ ತಿಳಿಯಾಗಲಿದೆ, ಸಂಕಷ್ಟದಲ್ಲಿರುವ ಪ್ರವಾಸಿ ಕನ್ನಡಿಗರಿಗೆ ಸಹಾಯಹಸ್ತವಾಗಿ ಸಚಿವ ಕೃಷ್ಣಭೈರೇಗೌಡ ಅವರೊಂದಿಗೆ ರೂ.2 ಕೋಟಿ ತುರ್ತು ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದೇವೆ. ಅವರು ಮುಖ್ಯಮಂತ್ರಿ ಜೊತೆ ಕೂಡಲೇ ಮಾತನಾಡಿ ಪರಿಹಾರ ಘೋಷಿಸುವ ಭರವಸೆ ನೀಡಿದ್ದಾರೆ.

ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಎಲ್ಲಾ ಧೂತಾವಾಸಗಳೊಂದಿಗೆ, ಅಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರೊಂದಿಗೆ ನಾನು ನಿರಂತರ ಸಂಪರ್ಕದಲ್ಲಿ ಇದ್ದೇನೆ, ರಾಜ್ಯ ಸರ್ಕಾರದೊಂದಿಗೂ ಮಾಹಿತಿ ಹಂಚಿಕೊಳ್ಳುತ್ತಿರುವೆ, ಕನ್ನಡಿಗಾಸ್ ಹೆಲ್ಪ್ ಲೈನ್ ತಂಡಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ವಿಧಾನ ಪರಿಷತ್ ಸದಸ್ಯೆ, ಕೆಎನ್ಆರ್‌ಐ ಉಪಾಧ್ಯಕ್ಷೆ ಆರತಿ ಕೃಷ್ಣ ಹೇಳಿದರು.

ಸಂಕಷ್ಟದಲ್ಲಿದ್ದ ಹಲವಾರು ಪ್ರವಾಸಿ ಕನ್ನಡಿಗರನ್ನು ಭೇಟಿಯಾಗಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದು, ತಾಯ್ನಾಡಿಗೆ ವಾಪಸ್ ತೆರಳದೇ ಸಿಲುಕಿರುವ ಕನ್ನಡಿಗರಿಗೆ ಯಾವುದೇ ವೈದ್ಯಕೀಯ ಸೇವೆ ಬೇಕಿದ್ದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ಸಂಪೂರ್ಣವಾಗಿ ಮಾಡಿಕೊಡಲಿದೆ ಎಂದು ಕನ್ನಡಿಗಾಸ್ ಹೆಲ್ಪ್ ಲೈನ್ ಸಂಯೋಜಕರು, ಬಿಸಿಸಿಐ ಯುಎಇ ಅಧ್ಯಕ್ಷರಾದ ಹಿದಾಯತ್ ಅಡ್ಡೂರು ತಿಳಿಸಿದರು.

ಯುಎಇಯಲ್ಲಿ ಸಿಲುಕಿರುವ ಕನ್ನಡಿಗರು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವನ್ನು ಸಂಪರ್ಕಿಸಿ, ನೀವು ದುಬೈ, ಶಾರ್ಜ, ಅಬುಧಾಬಿ, ಅಜ್ಮಾನ್ ಎಲ್ಲೇ ಇದ್ದರೂ ನಮ್ಮ ತಂಡ ನಿಮ್ಮನ್ನು ಸಂಪರ್ಕಿಸಿ, ಸಹಕರಿಸಲಿದೆ. ಈಗಾಗಲೇ ಈ ಕೆಲಸದಲ್ಲಿ ನಿರತವಾಗಿದೆ ಎಂದು ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ ತಿಳಿಸಿದರು.

ಸಭೆಯಲ್ಲಿ ಹೆಲ್ಪ್ ಲೈನ್ ತಂಡದ ದಯಾ ಕಿರೋಡಿಯನ್, ಚಂದ್ರು ಲಿಂಗದಳ್ಳಿ, ಮಲ್ಲಿಕಾರ್ಜುನ ಗೌಡ, ಇಮ್ರಾನ್ ಖಾನ್, ಶ್ವೇತಾ ಜಾಧವ್, ಮನೋಹರ್ ಹೆಗ್ಡೆ, ನಾಗರಾಜ ರಾವ್, ಸಮದ್ ಬಿರಾಲಿ, ಸಲೀಂ ಮೂಡಬಿದ್ರೆ, ಸಂಶುದ್ದೀನ್ ಪಿಲಿಗೂಡು, ರಾಕ್ ಕರ್ನಾಟಕ ಸಂಘದ ಅಧ್ಯಕ್ಷ ರಮೇಶ್ ರಂಗಪ್ಪ, ಕನ್ನಡ ಪಾಠಶಾಲೆ ದುಬೈಯ ಗಿರೀಶ್ ವೊರಟೆ, ಗಿರೀಶ್ ಪಟ್ವಾರಿ, ಗವಾಸ್ಕರ್, ಸಿದ್ಧಲಿಂಗೇಶ್, ರೂಪ ಶಶಿಧರ್, ಫಿರೋಜ್, ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...