ಭಾರತ-ಪಾಕ್ ಸೇರಿ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ನೀಡಬೇಕು: ಡೊನಾಲ್ಡ್ ಟ್ರಂಪ್

Date:

“ಭಾರತ ಪಾಕಿಸ್ತಾನ ಸೇರಿದಂತೆ ಒಟ್ಟು ಏಳು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಅದಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆಯಲು ನಾನು ಅರ್ಹ. ಈ ವರ್ಷದ ಆರಂಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷವನ್ನು ವ್ಯಾಪಾರವನ್ನು ಮಧ್ಯಕ್ಕೆ ತರುವ ಮೂಲಕ ಪರಿಹರಿಸಿದ್ದೇನೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ದೀರ್ಘ ರಾತ್ರಿ ಮಾತುಕತೆ ನಡೆಸಿ ನಂತರ ಪೂರ್ಣ ಮತ್ತು ತಕ್ಷಣದ ಕದನ ವಿರಾಮದ ಬಗ್ಗೆ ಸಾಮಾಜಿಕ ಮಾಧ್ಯಮ ಘೋಷಣೆ ಮಾಡಿದ್ದ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದು ಎಂದು ಪದೇ ಪದೇ ಹೇಳಿಕೊಂಡಿದ್ದಾರೆ. ಒಟ್ಟು ಏಳು ಯುದ್ಧಗಳನ್ನು ನಿಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಭಾರತ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ನಿರಂತರವಾಗಿ ನಿರಾಕರಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಮೇ 10ರಂದು ಈ ಬಗ್ಗೆ ಸ್ಪಷ್ಟಣೆ ನೀಡಿದ್ದಾರೆ. ಪಾಕಿಸ್ತಾನದ ಡಿಜಿಎಂಒ ಸಂಪರ್ಕಿಸಿದ ಬಳಿಕ ಎರಡೂ ಕಡೆಯವರು ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ನಡೆದ ಅಮೇರಿಕನ್ ಕಾರ್ನರ್‌ಸ್ಟೋನ್ ಇನ್‌ಸ್ಟಿಟ್ಯೂಟ್ ಸಂಸ್ಥಾಪಕರ ಭೋಜನ ಕೂಟದಲ್ಲಿ ಟ್ರಂಪ್, “ವಿಶ್ವ ವೇದಿಕೆಯಲ್ಲಿ, ನಾವು ಮತ್ತೊಮ್ಮೆ ನಮ್ಮನ್ನು ಗೌರವಿಸುವ ಕೆಲಸಗಳನ್ನು ಮಾಡುತ್ತಿದ್ದೇವೆ. ನಾವು ಶಾಂತಿ ಒಪ್ಪಂದಗಳನ್ನು ಮಾಡಿದ್ದೇವೆ, ನಾವು ಯುದ್ಧಗಳನ್ನು ನಿಲ್ಲಿಸುತ್ತಿದ್ದೇವೆ. ನಾವು ಭಾರತ ಮತ್ತು ಪಾಕಿಸ್ತಾನ, ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಯುದ್ಧಗಳನ್ನು ನಿಲ್ಲಿಸಿದ್ದೇವೆ” ಎಂದಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ನಾನು ವ್ಯಾಪಾರದೊಂದಿಗೆ ಆ ಯುದ್ಧವನ್ನು ಹೇಗೆ ನಿಲ್ಲಿಸಿದೆ ಎಂದು ನಿಮಗೆ ತಿಳಿದಿದೆ. ಅವರು ವ್ಯಾಪಾರ ಮಾಡಲು ಬಯಸುತ್ತಾರೆ. ನನಗೆ ಇಬ್ಬರೂ ನಾಯಕರ ಬಗ್ಗೆ ಅಪಾರ ಗೌರವವಿದೆ. ಭಾರತ, ಪಾಕಿಸ್ತಾನ, ಥೈಲ್ಯಾಂಡ್, ಕಾಂಬೋಡಿಯಾ, ಅರ್ಮೇನಿಯಾ, ಅಜೆರ್ಬೈಜಾನ್, ಕೊಸೊವೊ ಮತ್ತು ಸೆರ್ಬಿಯಾ, ಇಸ್ರೇಲ್ ಮತ್ತು ಇರಾನ್, ಈಜಿಪ್ಟ್ ಮತ್ತು ಇಥಿಯೋಪಿಯಾ, ರುವಾಂಡಾ ಮತ್ತು ಕಾಂಗೋ ಹೀಗೆ ಹಲವು ಯುದ್ಧಗಳನ್ನು ನಿಲ್ಲಿಸಿದ್ದೇವೆ. ಶೇಕಡ 60ರಷ್ಟು ಯುದ್ಧಗಳನ್ನು ವ್ಯಾಪಾರ ನಿಲ್ಲಿಸುವ ಬೆದರಿಕೆ ಮೂಲಕ ನಿಲ್ಲಿಸಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...