ಗಾಜಾದಲ್ಲಿ ಯುದ್ಧ ಕೊನೆಗೊಳಿಸುವುದು ‘ತಕ್ಷಣದ ಅಗತ್ಯ’ ಎಂದ ಅಮೆರಿಕ, ಯುಕೆ, ಜರ್ಮನಿ, ಫ್ರಾನ್ಸ್ ನಾಯಕರು

Date:

ಗಾಜಾದಲ್ಲಿ ಯುದ್ಧ ಕೊನೆಗೊಳಿಸುವುದು ‘ಅಗತ್ಯ’ ಎಂದು ಯುಎಸ್‌ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಜರ್ಮನ್, ಯುಕೆ, ಫ್ರಾನ್ಸ್ ನಾಯಕರು ಒತ್ತಿ ಹೇಳಿದ್ದಾರೆ. ಒಂದು ವರ್ಷಕ್ಕೂ ಅಧಿಕ ಕಾಲದಿಂದ ಗಾಜಾದಲ್ಲಿ ಯುದ್ಧ ನಡೆಯುತ್ತಿದ್ದು ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್, ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸುವುದು, ಮಾನವೀಯ ನೆರವು ನಾಗರಿಕರನ್ನು ತಲುಪುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು, ಒತ್ತೆಯಾಳುಗಳನ್ನು ಅವರ ಕುಟುಂಬಗಳಿಗೆ ಮರಳಿಸುವುದು ತಕ್ಷಣದ ಅಗತ್ಯ” ಎಂದು ನಾಲ್ಕು ದೇಶಗಳ ನಾಯಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ | ಹಿಜ್ಬುಲ್ಲಾ ಉಗ್ರ ಸಂಘಟನೆಯೇ, ಹೀಗೆ ಬಿಂಬಿಸುತ್ತಿರುವುದೇಕೆ?

“ನಾಲ್ವರು ನಾಯಕರು ಬರ್ಲಿನ್‌ನಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರಾಚ್ಯದಲ್ಲಿನ ಘಟನೆಗಳನ್ನು ಚರ್ಚಿಸಿದ್ದಾರೆ. ನಿರ್ದಿಷ್ಟವಾಗಿ ಅಕ್ಟೋಬರ್ 7ರ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಯಾಹ್ಯಾ ಸಿನ್ವಾರ್‌ನ ಸಾವಿನ ಪರಿಣಾಮಗಳನ್ನು ಚರ್ಚಿಸಿದ್ದಾರೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಮತ್ತು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಸುಮಾರು 200 ಕ್ಷಿಪಣಿಗಳನ್ನು ಹಾರಿಸಿದೆ. ಗಾಜಾದಲ್ಲಿ 2023ರಲ್ಲಿ ಯುದ್ಧ ಆರಂಭವಾಗಿದೆ. ಪ್ಯಾಲೆಸ್ತೀನ್‌ನ ರಾಜಕೀಯ ಸಂಘಟನೆ ಹಮಾಸ್ ಯುದ್ದ ಆರಂಭಿಸಿದೆ. ಈ ದಾಳಿಯಲ್ಲಿ 1,206 ಜನರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ನಿರಂತರವಾಗಿ ದಾಳಿ, ಪ್ರತಿ ದಾಳಿಗಳು ನಡೆಯುತ್ತಿದೆ.

ಇಸ್ರೇಲ್ ಮಿಲಿಟರಿ ಪಡೆಯುವ ಗಾಜಾದಲ್ಲಿ ಸುಮಾರು 42,500 ಪ್ಯಾಲೇಸ್ತೇನಿಯನ್ನರನ್ನು ಕೊಂದಿದೆ. ಈ ಪೈಕಿ ಅಧಿಕ ಮಂದಿ ನಾಗರಿಕರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...