ಮೂರು ಜನನಾಂಗ ಹೊಂದಿದ್ದ ವ್ಯಕ್ತಿ; ಇಂಗ್ಲೆಂಡ್‌ನಲ್ಲಿ ಬೆಳಕಿಗೆ ಬಂದ ವಿರಳ ಪ್ರಕರಣ

Date:

ವ್ಯಕ್ತಿಯೊಬ್ಬರು ಮೂರು ಜನನಾಂಗಗಳನ್ನು ಹೊಂದಿದ್ದರು ಎಂಬ ಅಪರೂಪದ ಪ್ರಕರಣ ಇಂಗ್ಲೆಂಡ್‌ನಲ್ಲಿ ಬೆಳಕಿಗೆ ಬಂದಿದೆ. ವಿಶೇಷ ಎಂದರೆ, ಆತ ಮೂರು ಜನನಾಂಗ ಹೊಂದಿದ್ದ ಎಂಬುದು ಆ ವ್ಯಕ್ತಿ ಸಾವನ್ನಪ್ಪಿದ ಬಳಿಕವಷ್ಟೇ ಗೊತ್ತಾಗಿದೆ.

ಆ ವ್ಯಕ್ತಿ ತಾವು ಮೃತಪಟ್ಟ ಬಳಿಕ, ತಮ್ಮ ದೇಹವನ್ನು ‘ಯುನಿವರ್ಸಿಟಿ ಆಫ್ ಬರ್ಮಿಂಗ್‌ಹ್ಯಾಮ್‌’ನ ಮೆಡಿಕಲ್ ಕಾಲೇಜಿಗೆ ದಾನ ಮಾಡಬೇಕೆಂದು ಹೇಳಿಕೊಂಡಿದ್ದರು. ಅಲ್ಲದೆ, ದೇಹದಾನ ಮಾಡುವುದಾಗಿ ಕಾಲೇಜಿನ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಕೊಟ್ಟಿದ್ದರು.

78 ವರ್ಷದ ವಯಸ್ಸಾಗಿದ್ದ ಆ ವ್ಯಕ್ತಿ ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ದೇಹವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಲಾಗಿತ್ತು. ಅವರ ದೇಹವನ್ನಿಟ್ಟುಕೊಂಡು ಸಂಶೋಧನೆ ನಡೆಸುವಾಗ ಅವರಿಗೆ ಮೂರು ಜನನಾಂಗ ಇರುವುದು ಪತ್ತೆಯಾಗಿದೆ ಎಂಧು ಕಾಲೇಜಿನ ಸಂಶೋಧಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕಾಲೇಜಿನ ‘ದಿ ಜರ್ನಲ್ ಆಫ್ ಮೆಡಿಕಲ್ ಕೇಸ್ ರಿಪೋರ್ಟ್ಸ್‌’ನಲ್ಲಿ ಪ್ರಕಟಿಸಲಾಗಿದ್ದು, “ವ್ಯಕ್ತಿಯು ಬಾಹ್ಯವಾಗಿ ಒಂದು ಜನನಾಂಗ ಹೊಂದಿದ್ದರೆ, ಇನ್ನೆರಡು ಜನನಾಂಗಗಳು ಆಂತರಿಕವಾಗಿ (ದೇಹದೊಳಗೆ) ಇರುವುದು ಕಂಡುಬಂದಿದೆ” ಎಂದು ಹೇಳಲಾಗಿದೆ.

ಪ್ರಕರಣದಲ್ಲಿ ಅಚ್ಚರಿಯ ಸಂಗತಿ ಎಂದರೆ, ತಮಗೆ ಮೂರು ಜನನಾಂಗಗಳು ಇದ್ದದ್ದು ಸ್ವತಃ ಆ ವ್ಯಕ್ತಿಗೇ ತಿಳಿದಿರಲಿಲ್ಲ ಎಂದೂ ಸಂಶೋಧಕರು ತಿಳಿಸಿದ್ದಾರೆ.

2020ರಲ್ಲಿಯೂ ಇಂಥದ್ದೇ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಯುರೋಪ್‌ನಲ್ಲಿ ಮೂರು ಜನನಾಂಗಗಳನ್ನು ಹೊಂದಿದ್ದ ಮಗುವೊಂದು ಜನಿಸಿತ್ತು. ಬಳಿಕ, ಅಗತ್ಯ ಶಸ್ತ್ರಚಿಕಿತ್ಸೆ ಮಾಡಿ, ಎರಡು ಜನನಾಂಗಗಳನ್ನು ತೆಗೆಯಲಾಗಿತ್ತು. ಇದೀಗ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...