ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ–ಅಮೆರಿಕಾ ಸಂಬಂಧದ ಕುರಿತು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಬಿಎಸ್ ನ್ಯೂಸ್ ಚಾನಲ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಅವರು, “ಚೀನಾ ನಮ್ಮನ್ನು ಸದಾ ಗಮನಿಸುತ್ತಿದೆ, ಆದರೆ ನಾವೂ ಅವರ ಮೇಲೆ ಕಣ್ಣಿಟ್ಟಿದ್ದೇವೆ,” ಎಂದು ಹೇಳಿದ್ದಾರೆ.
ಪಾಕಿಸ್ತಾನ , ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದರೆ ಯಾರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಆದರೆ ನಮ್ಮದು ಮುಕ್ತ ಸಮಾಜ, ಎಲ್ಲವನ್ನೂ ಮಾತನಾಡ್ತೀವಿ. ಇಲ್ಲದಿದ್ದರೆ ನೀವು ನಾಳೆ ಹೇಳಿದ್ದನ್ನೂ ಮೀರಿ ವರದಿ ಮಾಡುತ್ತಿರಿ ಎಂದು ಪತ್ರಕರ್ತರಿಗೆ ಹೇಳಿದ್ದಾರೆ.
ಅವರೆಲ್ಲರೂ ಪರಮಾಣು ಪರೀಕ್ಷೆ ನಡೆಸುತ್ತಿವೆ. ಆದರೆ ಇತರ ಎಲ್ಲ ದೇಶಗಳಿಗಿಂತ ಅಮೆರಿಕ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನ ಹೊಂದಿದೆ. ಇಡೀ ಜಗತ್ತನ್ನು 150 ಬಾರಿ ಸ್ಫೋಟಿಸುವಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ನಾವು ಹೊಂದಿದ್ದೇವೆ. ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಇಬ್ಬರೊಂದಿಗೂ ಈ ವಿಷಯ ಚರ್ಚಿಸಿದ್ದೇನೆ. ಆದಾಗ್ಯೂ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಪರಿಸ್ಥಿತಿ ಅನುಗುಣವಾಗಿ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.
ಇದನ್ನು ಓದಿದ್ದೀರಾ? 2 Grand Slam ಗೆದ್ದಿದ್ದ ಕನ್ನಡಿಗ ರೋಹನ್ ಬೋಪಣ್ಣ ಟೆನಿಸ್‌ಗೆ ವಿದಾಯ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ತಮ್ಮ ನಿಗದಿತ ಸಭೆಗೂ ಮುಂಚೆಯೇ ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿ, ರಕ್ಷಣಾ ಇಲಾಖೆಗೆ ತಕ್ಷಣ ಪರಮಾಣು ಪರೀಕ್ಷೆ ಪ್ರಾರಂಭಿಸಲು ನಿರ್ದೇಶಿಸಿದ್ದರು. ಬಳಿಕ ಸಂದರ್ಶನದಲ್ಲಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.
ನಾವು ಅವರನ್ನು ಬೀಳಿಸುವುದರ ಬದಲು ಸಹಕರಿಸುವುದರಿಂದ ದೊಡ್ಡವರಾಗುತ್ತೇವೆ, ಉತ್ತಮ ಮತ್ತು ಬಲಿಷ್ಠರಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ ಅಕ್ಟೋಬರ್ 30ರಂದು ನಡೆದ 32ನೇ ಏಪೆಕ್ ಆರ್ಥಿಕ ಸಚಿವರ ಸಭೆಯಲ್ಲಿ ಟ್ರಂಪ್ ಹಾಗೂ ಕ್ಸಿ ಜಿನ್‌ಪಿಂಗ್ ಅವರಿಬ್ಬರೂ ಆರು ವರ್ಷಗಳ ನಂತರ ಮುಖಾಮುಖಿಯಾಗಿ ಭೇಟಿಯಾಗಿದ್ದರು.





