ಭಾರತಕ್ಕೆ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ: ವಿಮಾನ ಸಂಚಾರ ವ್ಯತ್ಯಯ

Date:

ಇಥಿಯೋಪಿಯಾದಲ್ಲಿ ಸ್ಫೋಟಗೊಂಡ ಜ್ವಾಲಾಮುಖಿಯ ಬೂದಿ ಗಾಳಿಯ ಮೂಲಕ ವಾಯುವ್ಯ ಭಾರತವನ್ನು ತಲುಪಿದ್ದು, ಬೂದಿಯುಕ್ತ ಮಬ್ಬು ವಾತಾವರಣದಿಂದಾಗಿ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ದೆಹಲಿ-ಎನ್‌ಸಿಆರ್ ಮತ್ತು ಪಂಜಾಬ್ ನಲ್ಲಿ ಗೋಚರತೆ ಸಮಸ್ಯೆ ಕಾರಣದಿಂದ ವಿಮಾನ ಸಂಚಾರ ವ್ಯತ್ಯಯಗೊಂಡಿದೆ. ಭಾರತದಲ್ಲಿ ಈ ದಟ್ಟ ಮಬ್ಬು ವಾತಾವರಣ ಪೂರ್ವಾಭಿಮುಖ ಚಲನೆಯಲ್ಲಿದೆ.

ಸುಮಾರು 12 ಸಾವಿರ ವರ್ಷದಲ್ಲಿ ಮೊದಲ ಬಾರಿಗೆ ಚಿಮ್ಮಿದ ಹ್ಯಾಲಿ ಗುಬ್ಬಿ ಜ್ವಾಲಾಮುಖಿಯಿಂದ ಸಿಡಿದ ಬೂದಿ ಎಲ್ಲೆಡೆ ವ್ಯಾಪಿಸುತ್ತಿದ್ದು, 10 ಕಿಲೋಮೀಟರ್ ಎತ್ತರದಲ್ಲಿ ಬೂದಿಯುಕ್ತ ಮೋಡ ಕವಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿ ಪ್ರದೇಶಕ್ಕೆ ಈ ಬೂದಿಯುಕ್ತ ಗಾಳಿ ರಾತ್ರಿ 11 ಗಂಟೆ ವೇಳೆಯಲ್ಲಿ ತಲುಪಿದ್ದು, ಭಾರಿ ತೊಂದರೆಗೀಡಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಭಾರತೀಯ ನಗರಗಳ ಮೇಲೆ ಕೆಲ ಗಂಟೆಗಳ ಕಾಲ ಇದರ ಪರಿಣಾಮ ಇರಲಿದ್ದು, ಪೂರ್ವಾಭಿಮುಖವಾಗಿ ಚಲಿಸುತ್ತಿದೆ ಎಂದು ವಿವರಿಸಿದೆ.

ಇದನ್ನು ಓದಿದ್ದೀರಾ? ಪ್ರಜ್ವಲ್‌ ರೇವಣ್ಣ ಜಾಮೀನಿಗೆ ಅರ್ಹನಲ್ಲ: ರಾಜ್ಯ ಸರ್ಕಾರದ ವಾದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ವಿಮಾನಗಳ ಸಂಚಾರವನ್ನು ವಿಮುಖಗೊಳಿಸಲಾಗಿದೆ ಅಥವಾ ರದ್ದುಪಡಿಸಲಾಗಿದೆ ಎಂದು ಅಕಾಸಾ ಏರ್ ಮತ್ತು ಇಂಡಿಗೊ ಹೇಳಿವೆ. ಮಸ್ಕತ್ ವಿಮಾನ ಮಾಹಿತಿ ಪ್ರದೇಶದಲ್ಲಿ ಈ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತದ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಎಲ್ಲ ವಿಮಾನಗಳಿಗೆ ಈ ಸಂಬಂಧ ಸಲಹೆ ಬಿಡುಗಡೆ ಮಾಡಿದ್ದಾರೆ. ಸಂಜೆ 6.30ರ ವೇಳೆಗೆ ರಾಜಸ್ಥಾನದಲ್ಲಿ ಈ ಹೊಗೆಯುಕ್ತ ಮೋಡ ಕಾಣಿಸಿಕೊಂಡಿದ್ದು, 100 ರಿಂದ 120 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ.

ಈ ಹೊಗೆಮೋಡ ಚಲಿಸುತ್ತಿರುವ ಎತ್ತರ ಮತ್ತು ಪ್ರದೇಶದಲ್ಲಿ ವಿಮಾನ ಸಂಚಾರ ಕೈಗೊಳ್ಳದಂತೆ ಡಿಜಿಸಿಎ ಸಲಹೆ ಮಾಡಿದೆ. ಜ್ವಾಲಾಮುಖಿ ಬೂದಿಯ ಸಲಹೆ ಜತೆಗೆ ವಿಮಾನಯಾನಿಗಳಿಗೆ ವಿಶೇಷ ವಿಮಾನಯಾನ ಮುನ್ನೆಚ್ಚರಿಕೆಯನ್ಣೂ ನೀಡಲಾಗಿದೆ. ವಿಮಾನಯಾನ ಸಂಸ್ಥೆಗಳು ಸಿಬ್ಬಂದಿಗೆ ಜ್ವಾಲಾಮುಖಿ ಬೂದಿಗೆ ಸಂಬಂಧಿಸಿದಂತೆ ಕಾರ್ಯಾಚರಣೆಯ ಮಾರ್ಗಸೂಚಿ ನೀಡಬೇಕು ಹಾಗೂ ಸೂಕ್ತ ವಿಧಿವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...