‘ಕೊನೆಗೂ ಯಾರೋ ಭಾರತವನ್ನು ಬಯಲುಗೊಳಿಸುತ್ತಿದ್ದಾರೆ’: ಟ್ರಂಪ್

Date:

ಭಾರತವು ‘ಭಾರೀ ಸುಂಕ’ಗಳನ್ನು ವಿಧಿಸುತ್ತದೆ ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ನೀವು ಆ (ಭಾರತ) ದೇಶದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ’ ಎಂದು ಶುಕ್ರವಾರ ಹೇಳಿದ್ದಾರೆ. ಭಾರತವು ತನ್ನ ಸುಂಕಗಳನ್ನು ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದೂ ಹೇಳಿದ್ದಾರೆ.

ಅಮೆರಿಕದ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಭಾರತವು ನಮಗೆ ಭಾರೀ ಸುಂಕಗಳನ್ನು ವಿಧಿಸುತ್ತದೆ. ನೀವು ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಹ ಸಾಧ್ಯವಿಲ್ಲ. ಈ ಅವರು (ಭಾರತ) ತಾವು ವಿಧಿಸುವ ಸುಂಕಗಳನ್ನು ಕಡಿತಗೊಳಿಸಲು ಬಯಸುತ್ತಿದ್ದಾರೆ. ಏಕೆಂದರೆ, ಕೊನೆಗೂ ಯಾರೋ ಅವರನ್ನು ಅವರ ಧೋರಣೆಳನ್ನು ಬಹಿರಂಗಪಡಿಸುತ್ತಿದ್ದಾರೆ” ಎಂದಿದ್ದಾರೆ.

ಇದೇ ವರ್ಷದ ಜನವರಿ 20ರಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟ್ರಂಪ್, ಭಾರತ ಮತ್ತು ಇತರ ದೇಶಗಳು ಹೆಚ್ಚಿನ ಸುಂಕ ವಿಧಿಸುತ್ತಿರುವ ಕಾರಣಕ್ಕಾಗಿ ಭಾರತವನ್ನು ನಿರಂತರವಾಗಿ ಟೀಕಿಸಿದ್ದಾರೆ. ಇತ್ತೀಚೆಗೆ ಅವರು, ‘ಭಾರತ ವಿಧಿಸುವ ಹೆಚ್ಚಿನ ಸುಂಕಗಳು ಬಹಳ ಅನ್ಯಾಯ. ಭಾರತವು ವಾಹನಗಳ ಮೇಲೆ ನಮಗೆ ಶೇಕಡಾ 100ಕ್ಕಿಂತ ಹೆಚ್ಚು ಸುಂಕಗಳನ್ನು ವಿಧಿಸುತ್ತದೆ’ ಎಂದೂ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತರ ದೇಶಗಳು ದಶಕಗಳಿಂದ ನಮ್ಮ ವಿರುದ್ಧ ಸುಂಕಗಳನ್ನು ಹೇರುತ್ತಿವೆ. ಈಗ ಆ ದೇಶಗಳ ವಿರುದ್ಧ ಸುಂಕಗಳನ್ನು ವಿಧಿಸುವ ಸರದಿ ನಮ್ಮದು” ಎಂದು ಅಧ್ಯಕ್ಷರಾಗಿ ಮೊದಲ ಭಾಷಣದಲ್ಲೇ ಹೇಳಿದ್ದರು.

ಇನ್ನು, ಅಮೆರಿಕ ಸೆನೆಟ್‌ನಲ್ಲಿ ತಮ್ಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಟ್ರಂಪ್, “ಯುರೋಪಿಯನ್ ಒಕ್ಕೂಟ, ಚೀನಾ, ಬ್ರೆಜಿಲ್, ಭಾರತ, ಮೆಕ್ಸಿಕೊ ಹಾಗೂ ಕೆನಡಾ – ನೀವು ಈ ರಾಷ್ಟ್ರಗಳ ಬಗ್ಗೆ ಕೇಳಿದ್ದೀರಾ? ಈ ರಾಷ್ಟ್ರಗಳು ಮತ್ತು ಇತರ ರಾಷ್ಟ್ರಗಳು ನಾವು ವಿಧಿಸುವುದಕ್ಕಿಂತ ಹೆಚ್ಚಿನ ಸುಂಕಗಳನ್ನು ನಮಗೆ ವಿಧಿಸುತ್ತವೆ. ಇದು ತುಂಬಾ ಅನ್ಯಾಯ” ಎಂದಿದ್ದರು.

ಕಳೆದ ತಿಂಗಳು ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ, “ಭಾರತವು ಸುಂಕ ವಿಧಿಸುವಲ್ಲಿ ಭಾರೀ ಬಲಶಾಲಿಯಾಗಿದೆ. ನಾನು ಅವರನ್ನು ದೂಷಿಸುವುದಿಲ್ಲ. ಆದರೆ ಇದು ವ್ಯವಹಾರ ಮಾಡುವ ವಿಭಿನ್ನ ಮಾರ್ಗವಾಗಿದೆ. ಭಾರತಕ್ಕೆ ಮಾರಾಟ ಮಾಡುವುದು ತುಂಬಾ ಕಷ್ಟ. ಏಕೆಂದರೆ ಅಲ್ಲಿ ವ್ಯಾಪಾರ ಅಡೆತಡೆಗಳು, ಹೆಚ್ಚಿನ ಸುಂಕಗಳು ಇವೆ” ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದರು.

ವರದಿಗಳ ಪ್ರಕಾರ, ಭಾರತದ ಜೊತೆ ಅಮೆರಿಕದ ಒಟ್ಟು ಸರಕುಗಳ ವ್ಯಾಪಾರವು 2024ರಲ್ಲಿ ಅಂದಾಜು 129.2 ಬಿಲಿಯನ್ ಡಾಲರ್ ಆಗಿತ್ತು. 2024ರಲ್ಲಿ ಭಾರತಕ್ಕೆ ಅಮೆರಿಕದ ಸರಕುಗಳ ರಫ್ತು ಮೌಲ್ಯ 41.8 ಬಿಲಿಯನ್ ಯುಎಸ್ ಡಾಲರ್ ಆಗಿದ್ದರೆ, ಭಾರತದ ಜೊತೆಗಿನ ಅಮೆರಿಕದ ಸರಕುಗಳ ವ್ಯಾಪಾರ ಕೊರತೆಯು 45.7 ಬಿಲಿಯನ್ ಯುಎಸ್ ಡಾಲರ್ ಆಗಿತ್ತು. ಇದು 2023 ಕ್ಕಿಂತ 5.4% ಅಂದರೆ, 2.4 ಬಿಲಿಯನ್ ಡಾಲರ್ ಹೆಚ್ಚಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...