ಟರ್ಕಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ; 76 ಮಂದಿ ದುರ್ಮರಣ

Date:

ವಾಯವ್ಯ ಟರ್ಕಿಯಲ್ಲಿರುವ ‘ಗ್ರ್ಯಾಂಡ್ ಕಾರ್ತಾಲ್’ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈವರೆಗೆ 76 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾದಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಗೆ ಪ್ರಮುಖ ಕಾರಣವೇನು ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಹೋಟೆಲ್‌ನಲ್ಲಿ ಸುಮಾರು 234 ಮಂದಿ ಇದ್ದರು. ಅವರಲ್ಲಿ, ಈವರೆಗೆ 76 ಮಂದಿ ಸಾವನ್ನಪ್ಪಿದ್ದಾರೆ. 51ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಗಢದಿಂದಾಗಿ ಕಟ್ಟಡವು ಶಿಥಿಲಗೊಂಡಿದ್ದು, ಕುಸಿದು ಬೀಳುವ ಸಾಧ್ಯತೆಯೂ ಇದೆ ಎಂದ ಅಧಿಕಾರಿಗಳು ಹೇಳಿದ್ದಾರೆ. ಹೋಟೆಲ್‌ನಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸುತ್ತಿದ್ದಾರೆ.

ದುರಂತದ ಕುರಿತು ತನಿಖೆಗಾಗಿ 6 ಪ್ರಾಸಿಕ್ಯೂಟರ್‌ಗಳ ತಂಡವನ್ನು ಟರ್ಕಿ ಸರ್ಕಾರ ನೇಮಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...