ವಾಯುವ್ಯ ಚೀನಾದಲ್ಲಿ ಹಠಾತ್ ಪ್ರವಾಹ: ಕನಿಷ್ಠ 10 ಮಂದಿ ಸಾವು, 33 ಜನರು ನಾಪತ್ತೆ

Date:

ಚೀನಾದ ವಾಯುವ್ಯ ಭಾಗದಲ್ಲಿರುವ ಗನ್ಸು ಪ್ರಾಂತ್ಯದ ಯುಝಾಂಗ್ ಕೌಂಟಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಗುರುವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಲ್ಯಾನ್‌ಝೌ ನಗರದ ಸಮೀಪ ಇರುವ ಕ್ಸಿಂಗ್ಲಾಂಗ್ ಪರ್ವತ ಪ್ರದೇಶಗಳಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಪರಿಣಾಮ, ಪರ್ವತ ಪ್ರದೇಶದ ನಾಲ್ಕು ಹಳ್ಳಿಗಳಲ್ಲಿ ಸುಮಾರು 4,000ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ.

ಯುಝಾಂಗ್ ಕೌಂಟಿಯ ಮಾಲಿಯಂಟನ್ ಗ್ರಾಮದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಭೂಕುಸಿತದ ಬಳಿಕ, ಮೂವರು ಕಾಣೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಂಪೂರ್ಣ ರಕ್ಷಣಾ ಮತ್ತು ಪ್ರವಾಹ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಚೀನಾದ ಹಲವಾರು ಭಾಗಗಳು ಭಾರೀ ಮಳೆಯಿಂದ ತತ್ತರಿಸಿವೆ. ದಕ್ಷಿಣ ಮಹಾನಗರವಾದ ಗುವಾಂಗ್‌ಝೌದಲ್ಲಿ, ಬುಧವಾರ ಭಾರೀ ಮಳೆಯಾಗಿದ್ದು, ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಆ ಭಾಗದಲ್ಲಿ, ಏಳು ಜನರು ಸಾವನ್ನಪ್ಪಿದ್ದಾರೆ.

ಹೆನಾನ್ ಪ್ರಾಂತ್ಯದ ರಾಜಧಾನಿ ಝೆಂಗ್‌ಝೌನಲ್ಲಿ, ಸ್ಥಳೀಯ ಅಧಿಕಾರಿಗಳು ಶಾಲೆಗಳು, ಕಚೇರಿಗಳು ಮತ್ತು ಕಾರ್ಖಾನೆಗಳನ್ನು ಮುಚ್ಚಿಸಿದ್ದಾರೆ. ನಗರದ ಕೆಲವು ಭಾಗಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...