ಪಾಕ್‌ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ 14 ವರ್ಷ ಜೈಲು

Date:

ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಹಾಗೂ ಪತ್ನಿ ಬುಶ್ರಾ ಬೀಬಿ ಅವರನ್ನು ದೋಷಿ ಎಂದು ಪಾಕಿಸ್ತಾನ ನ್ಯಾಯಾಲಯ ಘೋಷಿಸಿದೆ. ಇಬ್ಬರಿಗೂ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ಖಾನ್‌ ಅವರಿಗೆ 10 ಲಕ್ಷ ರೂ. ಮತ್ತು ಬುಶ್ರಾ ಬೀಬಿ ಅವರಿಗೆ 7 ಲಕ್ಷ ರೂ. ದಂಡ ವಿಧಿಸಿದೆ.

ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಖಾನ್‌ ದಂಪತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿದೆ. ಶುಕ್ರವಾರ ಅಂತಿಮ ತೀರ್ಪು ಪ್ರಕಟಿಸಿದೆ.

ಪ್ರಕರಣದಲ್ಲಿ ಇಮ್ರಾನ್ ಖಾನ್‌ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಬೀತಾಗಿದೆ. ಖಾನ್ ಅವರು ಈಗಾಗಲೇ ಜೈಲಿನಲ್ಲಿದ್ದಾರೆ. ತೀರ್ಪು ಪ್ರಕಟವಾದ ಬಳಿಕ ಬುಶ್ರಾ ಬೀಬಿ ಅವರನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ 2023ರ ಆಗಸ್ಟ್‌ನಲ್ಲಿ ಖಾನ್‌ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದಿನಿಂದಲೂ ಅವರು ಜೈಲಿನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...