ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ನೀಡುವಂತೆ ಫ್ರಾನ್ಸ್ ಸೇರಿ 14 ರಾಷ್ಟ್ರಗಳ ಕರೆ

Date:

ಪ್ಯಾಲೆಸ್ತೀನ್ ಗೆ ರಾಷ್ಟ್ರದ ಮಾನ್ಯತೆಯನ್ನು ನೀಡುವಂತೆ ಫ್ರಾನ್ಸ್ ಹಾಗೂ ಇತರ 14 ಪಾಶ್ಚಾತ್ಯ ರಾಷ್ಟ್ರಗಳು ಜಗತ್ತಿನಾದ್ಯಂತದ ದೇಶಗಳಿಗೆ ಕರೆ ನೀಡಿವೆಯೆಂದು ಫ್ರಾನ್ಸ್‌ ನ ಉನ್ನತ ರಾಜತಾಂತ್ರಿಕರೊಬ್ಬರು ಬುಧವಾರ ತಿಳಿಸಿದ್ದಾರೆ.

ನ್ಯೂಯಾರ್ಕ್ ನಲ್ಲಿ ಮಂಗಳವಾರ ನಡೆದ ಸಮಾವೇಶವೊಂದರ ಬಳಿಕ 15 ದೇಶಗಳ ವಿದೇಶಾಂಗ ಸಚಿವರು ಹೊರಡಿಸಿದ ಜಂಟಿ ಹೇಳಿಕೆಯೊಂದರಲ್ಲಿ ಈ ಕರೆಯನ್ನು ನೀಡಲಾಗಿದೆ. ಫ್ರಾನ್ಸ್ ಹಾಗೂ ಸೌದಿ ಆರೇಬಿಯ ಸಹಅಧ್ಯಕ್ಷತೆಯ ಈ ಸಮಾವೇಶವು ಇಸ್ರೇಲಿಗರು ಹಾಗೂ ಪ್ಯಾಲೆಸ್ತೀನಿಯರ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ದ್ವಿರಾಷ್ಟ್ರ ಪರಿಹಾರ ಸೂತ್ರವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಈ ಸಮಾವೇಶವು ಹೊಂದಿದೆ.

ನ್ಯೂಯಾರ್ಕ್ ನಲ್ಲಿ , ಇತರ 14 ರಾಷ್ಟ್ರಗಳ ಜೊತೆಗೂಡಿ ಫ್ರಾನ್ಸ್ ಸಾಮೂಹಿಕವಾಗಿ ಮನವಿಯೊಂದನ್ನು ಹೊರಡಿಸಿದೆ. ‘‘ಪ್ಯಾಲೆಸ್ತೀನ್ ರಾಷ್ಟ್ರಕ್ಕೆ ಮಾನ್ಯತೆ ನೀಡುವ ನಮ್ಮ ಆಶಯವನ್ನು ನಾವು ವ್ಯಕ್ತಪಡಿಸುತ್ತೇವೆ. ಈ ವಿಚಾರವಾಗಿ ಇನ್ನೂ ಜೊತೆಗೂಡದ ಇತರರನ್ನು ಕೂಡಾ ನಮ್ಮೊಂದಿಗೆ ಕೈಜೋಡಿಸುವಂತೆ ಆಹ್ವಾನಿಸುತ್ತಿದ್ದೇವೆ’’ ಎಂದು ವಿದೇಶಾಂಗ ಸಚಿವ ಜೀನ್-ನೋಯಲ್ ಬ್ಯಾರೊಟ್ ಎಕ್ಸ್ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗಾಜಾ | 100 ಗಂಟೆಗಳಲ್ಲಿ ಇಸ್ರೇಲ್‌ನಿಂದ 59 ಹತ್ಯಾಕಾಂಡ; 288 ಪ್ಯಾಲೆಸ್ತೀನಿಯರ ನರಮೇಧ

ಮಂಗಳವಾರ ಪ್ರಕಟಿಸಿದ ಹೇಳಿಕೆಯಲ್ಲಿ ಸ್ಪೇನ್, ನಾರ್ವೆ ಹಾಗೂ ಫಿನ್ಲ್ಯಾಂಡ್ ಸೇರಿದಂತೆ 15 ರಾಷ್ಟ್ರಗಳು, ಇಸ್ರೇಲ್-ಪ್ಯಾಲೆಸ್ತೀನ್ ಬಿಕ್ಕಟ್ಟಿಗೆ ದ್ವಿರಾಷ್ಟ್ರ ಸೂತ್ರದ ಮೂಲಕ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ಅಚಲ ಬೆಂಬಲವನ್ನು ಘೋಷಿಸಿದ್ದಾರೆ.

ಫೆಲೆಸ್ತೀನ್ಗೆ ಅಧಿಕೃತವಾಗಿ ರಾಷ್ಟ್ರದ ಸ್ಥಾನಮಾನವನ್ನು ನೀಡುವುದಾಗಿ ಫ್ರೆಂಚ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೊನ್ ಕಳೆದ ವಾರ ಪ್ರಕಟಿಸಿದ್ದರು. ಇದಕ್ಕೆ ಇಸ್ರೇಲ್ ಹಾಗೂ ಅಮೆರಿಕದಿಂದ ಬಲವಾದ ವಿರೋಧ ವ್ಯಕ್ತವಾಗಿತ್ತು.

ಮಂಗಳವಾರ ಬ್ರಿಟಿಶ್ ಪ್ರಧಾನಿ ಕೀರ್ ಸ್ಟ್ರಾಮರ್ ಅವರು ಮಂಗಳವಾರ ಹೇಳಿಕೆಯೊಂದನ್ನು ನೀಡಿ, ಗಾಜಾದಲ್ಲಿ ಕದನವಿರಾಮಕ್ಕೆ ಸಮ್ಮತಿ ಸೇರಿದಂತೆ ಇಸ್ರೇಲ್ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಳ್ಳದೆ ಇದ್ದಲ್ಲಿ ಸೆಪ್ಟೆಂಬರ್‌ ನಲ್ಲಿ ಫೆಲೆಸ್ತೀನ್ ರಾಷ್ಟ್ರದ ಮಾನ್ಯತೆಯನ್ನು ನೀಡುವುದಾಗಿ ಘೋಷಿಸಿದ್ದರು.

ಇದರೊಂದಿಗೆ ಜಿ7 ಮೈತ್ರಿಕೂಟದ ಎರಡು ಯುರೋಪಿಯನ್ ಸದಸ್ಯ ರಾಷ್ಟ್ರಗಳು ಪ್ಯಾಲೆಸ್ತೀನ್ ರಾಷ್ಟ್ರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ. ಆಸ್ಟ್ರೇಲಿಯ, ಕೆನಡ ಹಾಗೂ ನ್ಯೂಝಿಲ್ಯಾಂಡ್ ಸೇರಿದಂತೆ ಹೇಳಿಕೆಗೆ ಸಹಿಹಾಕಿದ ಇತರ 9 ದೇಶಗಳು. ಫೆಲೆಸ್ತೀನ್ ಗೆ ಈವರೆಗೆ ರಾಷ್ಟ್ರದ ಮಾನ್ಯತೆಯನ್ನು ನೀಡಿರಲಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...