ಲಾಸ್ ಏಂಜಲೀಸ್‌ನಲ್ಲಿ ಮತ್ತೆ ಹಬ್ಬಿದ ಕಾಡ್ಗಿಚ್ಚು: 50 ಸಾವಿರ ಜನರ ಸ್ಥಳಾಂತರ

Date:

ಲಾಸ್ ಏಂಜಲೀಸ್‌ನಲ್ಲಿ ಬುಧವಾರ ಹೊಸ ಕಾಡ್ಗಿಚ್ಚು ಭುಗಿಲೆದ್ದಿದ್ದು, ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿದೆ. ಎರಡು ಮಾರಕ ಕಾಡ್ಗಿಚ್ಚಿನಿಂದ ಜರ್ಜರಿತವಾಗಿರುವ ಪ್ರದೇಶದಲ್ಲಿ ಮತ್ತೆ 50 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಕಾಸ್ಟಾಯಿಕ್ ಸರೋವರದ ಪಕ್ಕದ ಬೆಟ್ಟದಲ್ಲಿ ಕಾಣಿಸಿಕೊಂಡಿರುವ ಭೀಕರ ಕಾಡ್ಗಿಚ್ಚು, ಕೆಲವೇ ಗಂಟೆಗಳಲ್ಲಿ 8000 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ.

ಒಣ ಹಾಗೂ ಪ್ರಬಲ ಸ್ಯಾಂಟಾ ಅನಾ ಗಾಳಿಯಿಂದಾಗಿ ಕಾಡ್ಗಿಚ್ಚು ಕ್ಷಿಪ್ರವಾಗಿ ಹರಡುತ್ತಿದೆ. ದಟ್ಟ ಹೊಗೆ ಇಡೀ ಪ್ರದೇಶದಲ್ಲಿ ಮುಸುಕಿದ್ದು, ಅಪಾಯಕಾರಿ ಬೆಂಕಿಯ ಕೆನ್ನಾಲಿಗೆ ಆತಂಕಕಾರಿಯಾಗಿ ವ್ಯಾಪಿಸುತ್ತಿದೆ. ಉತ್ತರ ಲಾಸ್ ಏಂಜಲೀಸ್‌ನ 56 ಕಿಲೋಮೀಟರ್ ಸರಹದ್ದಿನಲ್ಲಿ ಬೆಂಕಿ ವ್ಯಾಪಿಸುವ ಭೀತಿಯ ಹಿನ್ನೆಲೆಯಲ್ಲಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

ಕಾಡ್ಗಿಚ್ಚು ಪುನಃ ಹೆಚ್ಚಾದ ನಂತರ ಲಾಸ್‌ ಏಂಜಲಿಸ್‌ನ ಅರಣ್ಯ ಪ್ರದೇಶದ ಸನಿಹದ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುರ್ತು ಸಂದೇಶಗಳನ್ನು ಸ್ಥಳೀಯ ಆಡಳಿತದಿಂದ ರವಾನಿಸಲಾಗಿದೆ.ಇತ್ತೀಚೆಗೆ ಸಂಭವಿಸಿದ ಎರಡು ಭೀಕರ ಕಾಡ್ಗಿಚ್ಚಿನಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಸಾವಿರಾರು ಕಟ್ಟಡಗಳು ಭಸ್ಮವಾಗಿದ್ದವು.

ಹೆಲಿಕಾಪ್ಟರ್‌ ಹಾಗೂ ವಿಮಾನಗಳ ಮೂಲಕ ಬೆಂಕಿ ನಂದಿಸುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...