ಇಂಧನ ಟ್ಯಾಂಕರ್ ಸ್ಫೋಟ – 70 ಮಂದಿ ದುರ್ಮರಣ

Date:

ಉತ್ತರ ನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಕನಿಷ್ಠ 70 ಜನ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ ಎಂಉ ವರದಿಯಾಗಿದೆ.

ನೈಜೀರಿಯಾದ ಸುಲೇಜಾ ಪ್ರದೇಶದ ಬಳಿ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ, ಕೆಲವರು ಜನರೇಟರ್ ಮೂಲಕ ಒಂದು ಟ್ಯಾಂಕರ್‌ನಿಂದ ಇನ್ನೊಂದು ಟ್ಯಾಂಕರ್‌ಗೆ ಪೆಟ್ರೋಲ್ ಸಾಗಿಸಲು ಯತ್ನಿಸುತ್ತಿದ್ದರು. ಆದರೆ, ಟ್ಯಾಂಕರ್ ಸ್ಫೋಟಗೊಂಡು ಬೆಂಕಿಹೊತ್ತಿಕೊಂಡಿದೆ. ಟ್ಯಾಂಕರ್ ಬಳಿ ಇದ್ದವರು ಜೀವಂತವಾಗಿ ಸುಟ್ಟುಹೋಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಪೋಟದ ಬಗ್ಗೆ ನೈಜೀರಿಯಾದ ರಾಷ್ಟ್ರೀಯ ತುರ್ತು ಏಜೆನ್ಸಿ ಮಾಹಿತಿ ನೀಡಿದ್ದು, “ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪರಿಹಾರ ಕಾರ್ಯಗಳು ಜಾರಿಯಲ್ಲಿವೆ” ಎಂದು ಹೇಳಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನೈಜೀರಿಯಾ ಗವರ್ನರ್ ಮೊಹಮ್ಮದ್ ಬಾಗೊ, “ದುರ್ಘಟನೆಯಲ್ಲಿ ಸುಮಾರು 70 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳದಲ್ಲಿ ಉಂಟಾದ ಗೊಂದಲವನ್ನು ಪೊಲೀಸರು ನಿಯಂತ್ರಿಸಿದ್ದಾರೆ” ಎಂದು ಹೇಳಿದ್ದಾರೆ.

2024ರ ಅಕ್ಟೋಬರ್‌ನಲ್ಲಿ ಜಿಗಾವಾ ರಾಜ್ಯದಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿತ್ತು. ಆ ಘಟನೆಯಲ್ಲಿ 147 ಮಂದಿ ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...