ಗಾಜಾ-ಇಸ್ರೇಲ್ ಸಂಘರ್ಷ | ಟ್ರಂಪ್ ಮಧ್ಯಸ್ತಿಕೆ; ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಸಮ್ಮತಿ!

Date:

ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯ ಮತ್ತು ಆಕ್ರಮಣವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಾರೆ. ಶುಕ್ರವಾರ ನಡೆದ ಕದನ ವಿರಾಮ ಮಾತುಕತೆಯಲ್ಲಿ ಟ್ರಂಪ್ ಅವರು 20 ಅಂಶಗಳ ಯೋಜನೆಯನ್ನು ಮಂಡಿಸಿದ್ದಾರೆ. ಆ ಯೋಜನೆಗಳಲ್ಲಿ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಮ್ಮತಿಸಿದ್ದು, ಉಳಿದ ಅಂಶಗಳ ಕುರಿತು ಚರ್ಚೆ ನಡೆಸಬೇಕೆಂದು ಹೇಳಿರುವುದಾಗಿ ವರದಿಯಾಗಿದೆ.

ತಾವು ಮಂಡಿಸಿರುವ ಅಂಶಗಳನ್ನು ಸ್ವೀಕರಿಸಲು ಅಥವಾ ತಿರಸ್ಕರಿಸಲು ಹಮಾಸ್‌ಗೆ ಭಾನುವಾರದವರೆಗೆ ಗಡುವು ನೀಡಿರುವುದಾಗಿ ಟ್ರಂಪ್ ಹೇಳಿದ್ದಾರೆ. ಅಲ್ಲದೆ, ಈ ಯೋಜನೆಯನ್ನು ಒಪ್ಪಿಕೊಳ್ಳದಿದ್ದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಟ್ರಂಪ್ ಮಂಡಿಸಿದ 20 ಅಂಶಗಳಲ್ಲಿ ಹಮಾಸ್‌ ನಿಶಸ್ತ್ರೀಕರಣಕ್ಕೆ ಒಪ್ಪಿಕೊಳ್ಳಬೇಕು ಎಂಬ ಷರತ್ತು ಕೂಡ ಇದೆ. ಆದರೆ, ಈ ಷರತ್ತಿಗೆ ಹಮಾಸ್‌ ಸ್ಪಷ್ಟ ಉತ್ತರ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು, ಒತ್ತೆಯಾಳುಗಳ ವಿನಿಮಯವನ್ನು ಜಾರಿಗೆ ತರಲು ಹಾಗೂ ಮಾನವೀಯ ನೆರವು ಒದಗಿಸಲು ಅರಬ್, ಇಸ್ಲಾಮಿಕ್ ಹಾಗೂ ಅಂತಾರಾಷ್ಟ್ರೀಯ ಪ್ರಯತ್ನಗಳು ನಡೆಯುತ್ತಿವೆ. ಜೊತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಪ್ರಯತ್ನಿಸುತ್ತಿದ್ದಾರೆ. ಈ ಎಲ್ಲ ಪ್ರಯತ್ನಗಳನ್ನು ನಾವು ಶ್ಲಾಘಿಸುತ್ತೇವೆ” ಎಂದು ಹಮಾಸ್ ಹೇಳಿದೆ.

ಹಮಾಸ್‌-ಇಸ್ರೇಲ್‌ ಅಧೀನದಲ್ಲಿರುವ ಪರಸ್ಪರರ ಒತ್ತೆಯಾಳುಗಳನ್ನು ವಿನಿಯಮ ಮಾಡಿಕೊಳ್ಳುವ ವಿಚಾರವಾಗಿ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಲು ನಾವು ಸಿದ್ದವಿದ್ದೇವೆ. ಫ್ಯಾಲೆಸ್ತೀನ್‌ನ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅರಬ್-ಇಸ್ಲಾಮಿಕ್ ಬೆಂಬಲದೊಂದಿಗೆ ಗಾಝಾದ ಆಡಳಿತವನ್ನು ಪ್ಯಾಲೆಸ್ತೀನ್‌ನ ಸ್ವತಂತ್ರ ಸಂಸ್ಥೆಗೆ ವರ್ಗಾಯಿಸಲು ನಾವು ಸಿದ್ದ ಎಂದು ಹಮಾಸ್ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...