ಯುದ್ಧದ ಅವಶೇಷಗಳ ನಡುವೆಯೇ ರಮಝಾನ್ ಉಪವಾಸದ ಮೊದಲ ಇಫ್ತಾರ್ ಮುಗಿಸಿದ ಗಾಝಾದ ಜನ

Date:

ಸೌದಿ ಅರೇಬಿಯಾ, ಪ್ಯಾಲೆಸ್ತೀನ್ ಸೇರಿದಂತೆ ಹಲವು ದೇಶಗಳಲ್ಲಿ ಮಾ.1ರಂದೇ ಮುಸ್ಲಿಮರ ಪವಿತ್ರ ರಮಝಾನ್ ತಿಂಗಳ ಉಪವಾಸ ಆರಂಭಗೊಂಡಿದೆ.

ಹಮಾಸ್‌ನಿಂದ ರಾಕೆಟ್ ದಾಳಿಯ ಬಳಿಕ ಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ನಡುವೆ 2023ರ ಅಕ್ಟೋಬರ್ 7ರಂದು ಆರಂಭವಾಗಿದ್ದ ಕದನಕ್ಕೆ ಕಳೆದ ಜನವರಿಯಲ್ಲಿ ನಡೆದ ಮಾತುಕತೆಯ ನಂತರ ವಿರಾಮ ಘೋಷಿಸಲಾಗಿತ್ತು.

ಈ ಎಲ್ಲ ಬೆಳವಣಿಗೆಯ ನಡುವೆಯೇ ರಮಝಾನ್ ತಿಂಗಳ ಉಪವಾಸ ಕೂಡ ಆರಂಭಗೊಂಡಿದ್ದು, ಮಾ.1ರಂದು ಮೊದಲ ಇಫ್ತಾರ್ ಕೂಡ ಮುಗಿದಿದೆ. ಈ ನಡುವೆಯೇ ಯುದ್ಧದ ಅವಶೇಷಗಳ ಮಧ್ಯವೇ ಕೂತು ಗಾಝಾದ ಜನರು, 2025ರ ಮೊದಲ ಉಪವಾಸದ ಮೊದಲ ಇಫ್ತಾರ್ ಕೂಟ ನಡೆಸಿದ್ದು, ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ಇಫ್ತಾರ್ ಕೂಟವನ್ನು ಗಾಝಾದ ಜನರಿಗಾಗಿ ದಕ್ಷಿಣ ಗಾಝಾದ ರಫಾ‌ ಪ್ರದೇಶದಲ್ಲಿ ಕುವೈತ್ ದೇಶದ ವತಿಯಿಂದ ಆಯೋಜಿಸಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003635021

2025ರ ಜ.19ರಿಂದ 6 ವಾರಗಳ ಮೊದಲ ಹಂತದ ಕದನ ವಿರಾಮ ಜಾರಿಗೆ ಬಂದಿತ್ತು. ಎರಡನೇ ಹಂತದ ಮಾತುಕತೆ ಇನ್ನಷ್ಟೇ ಆರಂಭವಾಗಬೇಕಿದ್ದು, ರಮಝಾನ್ ಉಪವಾಸದ ತಿಂಗಳಾದ್ದರಿಂದ ಮುಂದಿನ ನಾಲ್ಕು ವಾರಗಳ ಕಾಲ ಕದನ ವಿರಾಮವನ್ನು ಮುಂದುವರಿಸುವ ಬಗ್ಗೆ ಹಮಾಸ್ ಹಾಗೂ ಇಸ್ರೇಲ್ ಒಲವು ತೋರಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಇನ್ನಿರುವ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ, ಕದನ ವಿರಾಮದ ಆಶ್ವಾಸನೆ ನೀಡಬೇಕು ಎಂದು ಹಮಾಸ್ ಈಗಾಗಲೇ ಹೇಳಿದ್ದು, ಗಾಜಾದಲ್ಲಿ ಕದನ ವಿರಾಮ ಸಂಬಂಧ ಎರಡನೇ ಹಂತದ ಮಾತುಕತೆಗೆ ಸಿದ್ದ ಎಂದು ಹೇಳಿದೆ.

ಇಸ್ರೇಲ್ ಜೈಲಿನಲ್ಲಿದ್ದ ಹಲವಾರು ಪ್ಯಾಲೆಸ್ಟೀನಿ ನಾಗರಿಕರನ್ನು ಇಸ್ರೇಲ್ ರಾತ್ರೋರಾತ್ರಿ ಬಿಡುಗಡೆ ಮಾಡಿದ ಬಳಿಕ ಹಮಾಸ್‌ನಿಂದ ಈ ಹೇಳಿಕೆ ಹೊರ ಬಿದ್ದಿದೆ. ಇದಕ್ಕೂ ಮುನ್ನ ನಾಲ್ವರು ಒತ್ತೆಯಾಳುಗಳ ಶವವನ್ನು ಇಸ್ರೇಲ್‌ಗೆ ಹಮಾಸ್ ಹಸ್ತಾಂತರಿಸಿತ್ತು.

‘ಉಳಿದ 59 ಒತ್ತೆಯಾಳುಗಳನ್ನು ಹಿಂದಿರುಗಿಸುವುದು ಪ್ರಮುಖ ಆದ್ಯತೆಯಾಗಿದೆ. ಆದರೆ ಗಾಝಾದಲ್ಲಿ ಹಮಾಸ್ ಅವರನ್ನು ಹಾಗೆಯೇ ಬಿಟ್ಟರೆ ಎರಡನೇ ಹಂತದ ಕದನ ವಿರಾಮದ ಬಗ್ಗೆ ಯಾವುದೇ ಒಪ್ಪಂದವಿರುವುದಿಲ್ಲ. ನಮ್ಮ ಬೇಡಿಕೆ ಸ್ಪಷ್ಟವಾಗಿದೆ ‘ ಎಂದು ಇಸ್ರೇಲ್‌ನ ಇಂಧನ ಸಚಿವ ಎಲಿ ಕೋಹೆನ್ ಹೇಳಿಕೆ ನೀಡಿದ್ದರು.

ಅಮೆರಿಕದ ಡೊನಾಲ್ಡ್ ಟ್ರಂಪ್‌ ಆಡಳಿತ ಭಾರಿ ಬಾಂಬ್‌ಗಳನ್ನು ಕಳುಹಿಸಿಕೊಟ್ಟಿದ್ದಾರೆ. ಆದರಿಂದಾಗಿ ನಾವು ಇನ್ನಷ್ಟು ಬಲಶಾಲಿಗಳಾಗಿದ್ದೇವೆ ಎಂದೂ ಅವರು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

1003635014
1003635020
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...