ಗಿನಿ | ಫುಟ್ಬಾಲ್ ಪಂದ್ಯದಲ್ಲಿ ಅಭಿಮಾನಿಗಳ ನಡುವೆ ಘರ್ಷಣೆ; 100ಕ್ಕೂ ಹೆಚ್ಚು ಮಂದಿ ಸಾವು

Date:

ಗಿನಿ ದೇಶದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಪಂದ್ಯ ನಡೆದ ಸ್ಥಳದ ಹೊರಗೆ ಜನರು ಓಡುವ ಮತ್ತು ಮೈದಾನದಲ್ಲಿಯೂ ಹಲವು ಮಂದಿಯ ಮೃತದೇಹಗಳಿರುವ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇನ್ನು ಪ್ರತಿಭಟನಾಕಾರರು ಎನ್‌ಜೆರೆಕೋರ್‌ನಲ್ಲಿನ ಪೊಲೀಸ್ ಠಾಣೆಯನ್ನು ಕೂಡಾ ಹಾನಿಗೊಳಿಸಿ, ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

“ರೆಫರಿಯ ವಿವಾದಿತ ನಿರ್ಧಾರದಿಂದ ಈ ಘರ್ಷಣೆ ಶುರುವಾಯಿತು. ಆಕ್ರೋಶಗೊಂಡ ಅಭಿಮಾನಿಗಳು ಮೈದಾನಕ್ಕೆ ಇಳಿದರು” ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಾಕಿಸ್ತಾನದಲ್ಲಿ ಹಿಂಸಾಚಾರ: 124 ಸಾವು

ಫುಟ್ಬಾಲ್ ಪಂದ್ಯವು 2021ರ ದಂಗೆಯ ಮೂಲಕ ಅಧಿಕಾರವನ್ನು ವಹಿಸಿಕೊಂಡ ಮತ್ತು ತನ್ನನ್ನು ತಾನು ಅಧ್ಯಕ್ಷ ಎಂದು ಘೋಷಿಸಿಕೊಂಡ ಗಿನಿಯ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಆಯೋಜಿಸಲಾಗಿದೆ ಎಂದು ವರದಿಯಾಗಿದೆ.

2021ರ ಸೆಪ್ಟೆಂಬರ್‌ನಲ್ಲಿ ಡೌಂಬೌಯಾ ಬಲವಂತವಾಗಿ ದೇಶದ ನಿಯಂತ್ರಣ ಪಡೆದರು. ಹಾಗೆಯೇ ಇಂತಹ ಸ್ವಾಧೀನವನ್ನು ತಪ್ಪಿಸಲು ಕರ್ನಲ್ ಅನ್ನು ನೇಮಿಸಿದ್ದ ಅಧ್ಯಕ್ಷ ಆಲ್ಫಾ ಕಾಂಡೆ ಅವರನ್ನು ಪದಚ್ಯುತಗೊಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ....

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...