ಪಾಕಿಸ್ತಾನದಲ್ಲಿ ಬಂದೂಕುದಾರಿಗಳ ಅಟ್ಟಹಾಸ; 20 ಕಾರ್ಮಿಕರು ಸಾವು – ಹಲವರ ಸ್ಥಿತಿ ಗಂಭೀರ

Date:

ಬಂದೂಕುದಾರಿಗಳು ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, 20 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.

ಘಟನೆಯು ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರಕ್ಷುಬ್ದ ವಾತಾವರಣವನ್ನು ಸೃಷ್ಠಿಸಿದೆ. ಪಾಕ್ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭದ್ರತಾ ಶೃಂಗಸಭೆ ನಡೆಯಲಿದ್ದು, ಅದಕ್ಕೂ ಕೆಲವೇ ದಿನಗಳ ಮುನ್ನ ಈ ದಾಳಿ ನಡೆದಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.

ಗುರುವಾರ ತಡರಾತ್ರಿ, ದುಕಿ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿನ ವಸತಿಗೃಹಗಳಿಗೆ ನುಗ್ಗಿದ ಬಂದೂಕುಧಾರಿಗಳು ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹಮಾಯುನ್ ಖಾನ್ ನಾಸಿರ್ ತಿಳಿಸಿದ್ದಾರೆ. ದಾಳಿಯ ಹಿಂದೆ ಇರುವವರನ್ನು ಗುರುತಿಸಿ, ಬಂಧಿಸಲು ಪೊಲೀಸರಿಗೆ ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯ ಬಳಿಕ, ಯಾವುದೇ ಗುಂಪು ದಾಳಿ ಕುರಿತು ಹೇಳಿಕೆಗಳನ್ನು ನೀಡಿದೆ. ಆದಾಗ್ಯೂ, ಕಾನೂನುಬಾಹಿರ ಸಂಘಟನೆಯೆಂದು ಘೋಷಿಸಲಾಗಿರುವ ‘ಬಲೂಚ್ ಲಿಬರೇಶನ್ ಆರ್ಮಿ’ ಈ ದಾಳಿ ನಡೆಸಿರುವ ಸಾಧ್ಯತೆ ಎಂದು ಅನುಮಾನ ವ್ಯಕ್ತವಾಗಿದೆ. ಈ ಗುಂಪು ಸಾಮಾನ್ಯವಾಗಿ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸುತ್ತದೆ.

ಈ ಸಂಘಟನೆ ಈ ಹಿಂದೆಯೂ ಹಲವಾರು ದಾಳಿಗಳನ್ನು ನಡೆಸಿದೆ. ಕಳೆದ ಆಗಸ್ಟ್‌ನಲ್ಲಿ ನಡೆಸಿದ್ದ ದಾಳಿಯಲ್ಲಿ 50ಕ್ಕೂ ಹೆಚ್ಚು ಜನರನ್ನು ಕೊಂದಿತ್ತು. ಅದಕ್ಕೆ ಪ್ರತಿಯಾಗಿ ಅಧಿಕಾರಿಗಳು 21 ದಾಳಿಕೋರರನ್ನು ಹತ್ಯೆ ಮಾಡಿತ್ತು.

ನಿನ್ನೆ ನಡೆದಿರುವ ದಾಳಿಯ ಬಗ್ಗೆ ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. “ಭಯೋತ್ಪಾದಕರು ಮತ್ತೊಮ್ಮೆ ಬಡ ಕಾರ್ಮಿಕರನ್ನು ಗುರಿಯಾಗಿಸಿದ್ದಾರೆ. ಹತ್ಯೆಗೈದಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ದಾಳಿಕೋರರು ಕ್ರೂರಿಗಳು. ಅವರು ಪಾಕಿಸ್ತಾನವನ್ನು ಅಸ್ಥಿರಗೊಳಿಸುವ ಅಜೆಂಡಾವನ್ನು ಹೊಂದಿದ್ದಾರೆ. ಅಮಾಯಕ ಕಾರ್ಮಿಕರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ಬಲೂಚಿಸ್ತಾನ ಈ ಪ್ರಾಂತ್ಯವು ಸ್ವಾತಂತ್ರ್ಯ ದೇಶವನ್ನು ಬಯಸುವ ಹಲವಾರು ಪ್ರತ್ಯೇಕತಾವಾದಿ ಗುಂಪುಗಳಿಗೆ ನೆಲೆಯಾಗಿದೆ. ಪಾಕಿಸ್ತಾನದ ಫೆಡರಲ್ ಸರ್ಕಾರವು ತನ್ನ ಲಾಭಕ್ಕಾಗಿ ತೈಲ ಮತ್ತು ಖನಿಜವನ್ನು ಹೆಚ್ಚಾಗಿ ಹೊಂದಿರುವ ಬಲೂಚಿಸ್ತಾನವನ್ನು ಅನ್ಯಾಯವಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರತ್ಯೇಕತಾವಾದಿಗಳು ಆರೋಪಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...