ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

Date:

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ ಬಗ್ಗೆ ಚರ್ಚಿಸಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಗಾಝಾ, ಇಸ್ರೇಲ್ ಯುದ್ಧದಲ್ಲಿ ಈಗಾಗಲೇ 62 ಸಾವಿರಕ್ಕೂ ಅಧಿಕ ಪ್ಯಾಲೇಸ್ತಿನಿಯನ್ನರು ಬಲಿಯಾಗಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಹೊಸ ಪ್ರಸ್ತಾಪವನ್ನು ಈಜಿಪ್ಟ್‌ನಲ್ಲಿರುವ ಹಮಾಸ್ ಪ್ರತಿನಿಧಿಗಳು ಪಡೆದಿದ್ದಾರೆ ಎಂದು ವರದಿಯಾಗಿದೆ.

“ಹಮಾಸ್, ಪ್ಯಾಲೇಸ್ತೇನ್ ಬಣಕ್ಕೆ, ಕತಾರಿ ಮತ್ತು ಈಜಿಪ್ಟ್ ಮಧ್ಯವರ್ತಿಗಳು ನಿನ್ನೆ ಮಂಡಿಸಿದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ” ಎಂದು ಹಮಾಸ್ ಸೋಮವಾರ ಒಂದು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ಹಮಾಸ್‌ನ ಪ್ರತಿಕ್ರಿಯೆಯನ್ನು ಸ್ವೀಕರಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಮತ್ತು ಚಾನೆಲ್ 12 ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಗಾಝಾ ಕದನ ವಿರಾಮ ವಿರೋಧಿಸಿ ಇಸ್ರೇಲಿನ ಮೂವರು ಮಂತ್ರಿಗಳ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

60 ದಿನಗಳವರೆಗೆ ಮಿಲಿಟರಿ ಕಾರ್ಯಾಚರಣೆಗಳ ತಾತ್ಕಾಲಿಕ ಸ್ಥಗಿತದ ಪ್ರಸ್ತಾಪ ಇದಾಗಿದೆ. ಇದೇ ವೇಳೆಯಲ್ಲಿ ಪ್ಯಾಲೇಸ್ತಿನಿಯನ್ನರ ಬದಲಿಗೆ 50 ಇಸ್ರೇಲಿ ಸೆರೆಯಾಳುಗಳಲ್ಲಿ ಅರ್ಧದಷ್ಟು ಜನರನ್ನು ಹಸ್ತಾಂತರ ಮಾಡಲಾಗುವುದು ಎಂದು ವರದಿಯಾಗಿದೆ.

ಕತಾರ್ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಬಿನ್ ಜಾಸಿಮ್ ಅಲ್ ಥಾನಿ ಕೈರೋದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಹಮಾಸ್ ಕದನ ವಿರಾಮದ ಘೋಷಣೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...