ಟ್ರಂಪ್ ಆಡಳಿತದ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ ಹಾರ್ವರ್ಡ್ ವಿವಿ

Date:

ಅನುದಾನ ಸ್ಥಗಿತ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಆಡಳಿತ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವೆ ಸಂಘರ್ಷ ನಡೆಯುತ್ತಿದೆ. ಇದೀಗ, ಸಂಘರ್ಷವು ನ್ಯಾಯಾಲಯದ ಕಟಕಟೆಗೆ ಬಂದು ನಿಂತಿದೆ. ಟ್ರಂಪ್‌ ಆಡಳಿತದ ವಿರುದ್ಧ ಹಾರ್ವರ್ಡ್‌ ವಿಶ್ವವಿದ್ಯಾಲಯ ಮೊಕದಮೆ ದಾಖಲಿಸಿದೆ.

ವಿಶ್ವವಿದ್ಯಾಲಯದ ಕ್ಯಾಪಂಸ್‌ನಲ್ಲಿ ಕ್ರಿಯಾಶೀಲನೆಯನ್ನು ಮೊಟಗುಗೊಳಿಸಲು ಟ್ರಂಪ್‌ ಆಡಳಿತ ಹೇಳುತ್ತಿದೆ. ಟ್ರಂಪ್ ಅವರ ನಿರ್ದೇಶನವನ್ನು ಜಾರಿಗೊಳಿಸಲು ನಿರಾಕರಿಸಿದ್ದಕ್ಕಾಗಿ, ವಿಶ್ವವಿದ್ಯಾಲಯಕ್ಕೆ ಬರಬೇಕಿದ್ದ ಅನುದಾನದಲ್ಲಿ 2.2 ಶತಕೋಟಿ ಡಾಲರ್‌ಅನ್ನು ಸ್ಥಗಿತಗೊಳಿಸಿದೆ ಎಂದು ವಿಶ್ವವಿದ್ಯಾಲಯ ಆರೋಪಿಸಿದೆ. ಪೂರ್ಣ ಅನುದಾನದ ಬಿಡುಗಡೆಗಾಗಿ ಮ್ಯಾಸಚೂಸೆಟ್ಸ್ ನ್ಯಾಯಾಲಯ ಮೊಕದಮೆ ಹೂಡಿದೆ.

“ಟ್ರಂಪ್‌ ಆಡಳಿತವು ಶಿಕ್ಷಣಿಕ ನಿರ್ಧಾರಗಳ ಮೇಲೆ ನಿಯಂತ್ರಣ ಸಾಧಿಸಲು ಹವಣಿಸುತ್ತಿದೆ. ಅದಕ್ಕಾಗಿ ಫೆಡರಲ್ ನಿಧಿಯನ್ನು ತಡೆಹಿಡಿದಿದೆ. ಕೇವಲ ಹಾರ್ವರ್ಡ್‌ ವಿಶ್ವವಿದ್ಯಾಲಯ ಮಾತ್ರವಲ್ಲ, ಹಲವಾರು ಶಿಕ್ಷಣ ಸಂಸ್ಥೆಗಳನ್ನು ಟ್ರಂಪ್‌ ಆಡಳಿತ ಗುರಿಯಾಗಿಸಿಕೊಂಡಿದೆ. ಟ್ರಂಪ್ ಅವರ ಕ್ರಮಗಳು ಏಕಪಕ್ಷೀಯವಾಗಿವೆ. ಫೆಡರಲ್ ಕಾನೂನುಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿವೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ವೇತಭವನವು ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಹಲವಾರು ನಿಯಮಗಳನ್ನು ಹೊರಡಿಸಿದೆ. ಅವೆಲ್ಲವೂ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿ ಯೆಹೂದ್ಯ ವಿರೋಧಿ ಪ್ರತಿಭಟನೆಗಳನ್ನು ನಡೆಸುವುದಕ್ಕೆ ಸಂಬಂಧಿಸಿವೆ. ಆದರೆ, ಇಂತಹ ಪ್ರಚೋದನೆಗಳನ್ನು ವಿಶ್ವವಿದ್ಯಾನಿಲಯದ ಅಧ್ಯಕ್ಷ ಅಲನ್ ಗಾರ್ಬರ್ ವಿರೋಧಿಸುತ್ತಾರೆ” ಎಂದು ವಿಶ್ವವಿದ್ಯಾಲಯವು ಹೇಳಿದೆ.

“ಶ್ವೇತಭವನದ ಬೇಡಿಕೆಗಳಿಗೆ ನಾವು ಮಣಿಯುವುದಿಲ್ಲ. ಟ್ರಂಪ್‌ ಆಡಳಿತದ ಬೇಡಿಕೆಗಳನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದೇವೆ. ಹೀಗಾಗಿ, ಟ್ರಂಪ್ ಆಡಳಿತವು ಅನುದಾನ ಕಡಿತದ ಬೆದರಿಕೆ ಹಾಕುತ್ತಿದೆ” ಎಂದು ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...