ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

Date:

ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.

ಹರಿಯಾಣದ ಕೈತಾಲ್ ಜಿಲ್ಲೆಯ ಮತ್ತೂರ್ ಗ್ರಾಮದ ಯುವಕ ರವಿಮೌನ್ ಸಾವನ್ನು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ರವಿಮೌನ್ ಸಹೋದರ ಅಜಯ್ ಮೌನ್ ಹೇಳಿದ್ದಾರೆ.

ರವಿ ಮೌನ್ ಜನವರಿ 13ರಂದು ಸಾರಿಗೆ ಕೆಲಸಕ್ಕಾಗಿ ನೇಮಕಗೊಂಡು ರಷ್ಯಾಕ್ಕೆ ಹೋಗಿದ್ದರು. ಆದರೆ ಅದಾದ ಬಳಿಕ ಬಲವಂತದಿಂದ ಮಿಲಿಟರಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ಸಹೋದರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಜುಲೈ 21ರಂದು ನನ್ನ ಸಹೋದರನ ಬಗ್ಗೆ ಮಾಹಿತಿ ಪಡೆಯಲು ರಾಯಭಾರ ಕಚೇರಿಗೆ ಪತ್ರ ಬರೆದೆ. ಆದರೆ ನನ್ನ ಸಹೋದರ ಸಾವನ್ನಪ್ಪಿದ್ದಾನೆ ಎಂದು ರಾಯಭಾರ ಕಚೇರಿ ನಮಗೆ ತಿಳಿಸಿದೆ. ಮೃತದೇಹವನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಯ ವರದಿಯನ್ನು ಕಳುಹಿಸುವಂತೆ ರಾಯಭಾರ ಕಚೇರಿಯು ರಷ್ಯಾಕ್ಕೆ ಮನವಿ ಮಾಡಿದೆ” ಎಂದು ಅಜಯ್ ಮೌನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

“ಸಾರಿಗೆ ಕೆಲಸಕ್ಕೆಂದು ಹೋಗಿದ್ದ ನನ್ನ ಸಹೋದರನನ್ನು ಉಕ್ರೇನ್ ಪಡೆಗಳ ವಿರುದ್ಧ ಹೋರಾಡಲು ಹೋಗುವಂತೆ ರಷ್ಯಾದ ಸೇನೆ ಹೇಳಿದೆ. ಉಕ್ರೇನ್ ವಿರುದ್ಧ ಯುದ್ಧ ಮಾಡದಿದ್ದರೆ ಹತ್ತು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ರಷ್ಯಾ ಸೇನೆ ಬೆದರಿಸಿದೆ” ಎಂದು ಮೃತ ಯುವಕನ ಸಹೋದರ ಆರೋಪಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧವು 2022ರ ಫೆಬ್ರವರಿಯಿಂದ ನಡೆಯುತ್ತಿದೆ. ರಷ್ಯಾದ ಮಿಲಿಟರಿಗೆ ಸೇರ್ಪಡೆಗೊಂಡ ಭಾರತೀಯ ಪ್ರಜೆಗಳನ್ನು ಶೀಘ್ರ ಬಿಡುಗಡೆ ಮಾಡುವಂತೆ ಮತ್ತು ವಾಪಾಸ್ ಭಾರತಕ್ಕೆ ಕಳುಹಿಸುವ ಭಾರತದ ಬೇಡಿಕೆಯನ್ನು ರಷ್ಯಾ ಒಪ್ಪಿಕೊಂಡ ಕೆಲವು ದಿನಗಳ ನಂತರ ರಷ್ಯಾ ಸೇನೆಯಲ್ಲಿದ್ದ ಹರಿಯಾಣದ ಯುವಕ ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...