ಸ್ಪೇನ್‌ನಲ್ಲಿ ಭಾರಿ ಮಳೆ; 210 ಮಂದಿ ಸಾವು

Date:

ಸ್ಪೇನ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಭೂಕುಸಿತಗಳೂ ಸಂಭವಿಸಿವೆ. ಈವರೆಗೆ 210ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಗುರುವಾರಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಸ್ಪೇನ್‌ನ ವೆಲೆನ್ಸಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಪ್ರವಾಹವಾಗುತ್ತಿದೆ. ವೆಲೆನ್ಸಿ ಪ್ರದೇಶದಲ್ಲಿಯೇ ಬರೋಬ್ಬರಿ 202 ಮಂದಿ ಮೃತಪಟ್ಟಿಟ್ಟಿದ್ದಾರೆ. ಈ ಪ್ರದೇಶದ ಸುಮಾರು 75 ಸಾವಿರ ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ. ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ವರದಿಯಾಗಿದೆ.

ಅಂಡಲೂಸಿಯಾ, ಹುಯೆಲ್ವಾ ಪ್ರಾಂತ್ಯಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ. ಹಲವೆಡೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಹದಿಂದ ಜಲಾವೃತಗೊಂಡಿರುವ ಪ್ರದೇಶಗಳಿಂದ ಜನರನ್ನು ರಕ್ಷಿಸಲು ರಾಷ್ಟ್ರೀಯ ಪೊಲೀಸ್ ಪಡೆ, ಸಿವಿಲ್ ಗಾರ್ಡ್ ಹಾಗೂ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...