ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

Date:

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಭಾರೀ ಗುಡುಗು ಸಹಿತ ಮಳೆ ಮುಂದುವರಿದಿದ್ದು, ಹವಾಮಾನ ವೈಪರೀತ್ಯದಿಂದಾಗಿ ನಿವಾಸಿಗಳು ಮನೆಯೊಳಗೆ ಇರಲು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಯುಎಇ ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಹವಾಮಾನದಿಂದಾಗಿ ಎಮಿರೇಟ್ಸ್ ಮತ್ತು ಫ್ಲೈದುಬೈ ಸೇರಿ ಹಲವಾರು ವಿಮಾನಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 19 ರಂದು ಪೀಡಿತ ಪ್ರದೇಶಗಳಲ್ಲಿನ ಖಾಸಗಿ ವಲಯದ ಕಂಪನಿಗಳು ವರ್ಕ್ ಫ್ರಂ ಹೋಮ್‌ ನಡೆಸುವಂತೆ ಉದ್ಯೋಗಿಗಳಿಗೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಈ ನಡುವೆ 27 ವರ್ಷದ ಕೇರಳ ಮೂಲದ ಯುವಕ ಸಲ್ಮಾನ್ ಫಾರಿಝ್ ಎಂಬಾತ ಭಾರೀ ಮಳೆಯ ಸಮಯದಲ್ಲಿ ರಾಸ್ ಅಲ್ ಖೈಮಾ ಪ್ರದೇಶದಲ್ಲಿ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ದೇಶಾದ್ಯಂತ ಸುರಿಯುತ್ತಿರುವ ಗುಡುಗು ಸಹಿತ ಮಳೆ, ಆಲಿಕಲ್ಲು ಮಳೆ, ಪ್ರಬಲವಾದ ಗಾಳಿ, ಧೂಳು ಮತ್ತು ಸಮುದ್ರದ ಬಿರುಗಾಳಿಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಯುಎಇಯಾದ್ಯಂತ ಹವಾಮಾನ ವೈಪರೀತ್ಯ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಹಲವೆಡೆ ನೀರು ನಿಲ್ಲುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮತ್ತೆ ಮಳೆ ಸುರಿಯುತ್ತಿದ್ದು, ಇದು ಮುಂದುವರಿಯುವ ಸಾಧ್ಯತೆಗಳಿವೆ.

ಇದನ್ನು ಓದಿದ್ದೀರಾ? ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಕಾಯ್ದೆ ಸ್ವಾಗತಾರ್ಹ; ಆದರೆ…!

ಯುಎಇಯಿಂದ ಹೊರಡಬೇಕಿದ್ದ ಹಲವಾರು ವಿಮಾನಗಳು ರದ್ದಾಗಿವೆ. ದುಬೈನ ಹಲವಾರು ಭಾಗಗಳಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೀದಿಗಳು ಜಲಾವೃತಗೊಂಡಿವೆ. ದುಬೈನಿಂದ ಅಜ್ಮಾನ್, ಶಾರ್ಜಾಗೆ ಬಸ್ ಸೇವೆಗಳು ಸ್ಥಗಿತಗೊಂಡಿವೆ. ಹೊರಾಂಗಣ ಅಥವಾ ಕ್ಯಾಂಪಸ್ ಹೊರಗಿನ ಚಟುವಟಿಕೆಗಳಿಂದ ದೂರವಿರುವಂತೆ ಶಿಕ್ಷಣ ಸಂಸ್ಥೆಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಳೆ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಪ್ರವಾಸದ ಸ್ಥಳ ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳನ್ನು ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ. ಕಟ್ಟಡ, ಡೆಲಿವರಿ ಕೆಲಸ ಸೇರಿದಂತೆ ಹೊರಗಡೆ ದುಡಿಯುವ ಎಲ್ಲ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಯುಎಇಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...