ಅಫ್ಘಾನ್‌ನಲ್ಲಿ ಭಾರೀ ಮಳೆ; 61 ಮಂದಿ ಸಾವು

Date:

ಕಳೆದ ಮೂರು ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಹಿಮಪಾತ ಮತ್ತು ಭಾರೀ ಮಳೆ ಸುರಿಯುತ್ತಿದ್ದು, 61 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ವಿಪತ್ತು ಅಧಿಕಾರಿಗಳು ತಿಳಿಸಿದ್ದಾರೆ. ಆಫ್ಘಾನ್‌ನ ಹಲವಾರು ಪ್ರಾಂತ್ಯಗಳಲ್ಲಿ ಪ್ರಮುಖ ರಸ್ತೆ ಮತ್ತು ವಿದ್ಯುತ್ ಕಡಿತಗೊಂಡಿದೆ ಎಂದು ವರದಿಯಾಗಿದೆ.

ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನ್ ತೀವ್ರ ವಿಪ್ಪತ್ತನ್ನು ಎದುರಿಸುತ್ತಿದೆ. ಅಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರ (ANDMA) ಹೇಳುವಂತೆ, ಅಫ್ಘಾನಿಸ್ತಾನದ ಮಧ್ಯ ಮತ್ತು ಉತ್ತರ ಪ್ರಾಂತ್ಯಗಳಲ್ಲಿ ಹೆಚ್ಚು ಸಾವುಗಳು ಸಂಭವಿಸಿವೆ. ಛಾವಣಿ ಕುಸಿತ ಮತ್ತು ಹಿಮಪಾತವು ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ. ಅಲ್ಲದೆ, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 450ಕ್ಕೂ ಹೆಚ್ಚು ಮನೆಗಳು ಹಾನಿಯಾಗಿವೆ.

ಅಫ್ಘಾನ್ ರಾಜಧಾನಿ ಕಾಬೂನ್‌ನ ಉತ್ತರದಲ್ಲಿರುವ ಪರ್ವಾನ್ ಮತ್ತು ಪಶ್ಚಿಮ ದಲ್ಲಿರುವ ಬಾಮಿಯಾನ್ ಪ್ರಾಂತ್ಯದ ಪರ್ವತ ಕಣಿವೆಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: eko | ಮುಗಿದ ನಂತರವೂ ಕಾಡುವ-ಕೆಣಕುವ ಚಿತ್ರ

ಇನ್ನು, ಉಜ್ಬೇಕಿಸ್ತಾನದಿಂದ ಅಫ್ಘಾನ್‌ಗೆ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ಪ್ರಸರಣ ಮಾರ್ಗವೂ ಹಾನಿಗೊಳಗಾಗಿದ್ದು, ಸುಮಾರು 12 ಪ್ರಾಂತ್ಯಗಳಲ್ಲಿ ವಿದ್ಯುತ್ ಕಡಿತವಾಗಿದೆ. ತಾಂತ್ರಿಕ ತಂಡಗಳು ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಫ್ಘಾನಿಸ್ತಾನದ ರಾಷ್ಟ್ರೀಯ ವಿದ್ಯುತ್ ಪ್ರಸರಣಾ ಸಂಸ್ಥೆ ತಿಳಿಸಿದೆ.

“ಸಾಕಷ್ಟು ಸಿದ್ಧತೆ ಮತ್ತು ಸಮಯೋಚಿತ ಹಸ್ತಕ್ಷೇಪವಿಲ್ಲದಿದ್ದರೆ, ನೈಸರ್ಗಿಕ ವಿದ್ಯಮಾನಗಳು ತೀವ್ರ ದುರಂತಕ್ಕೆ ಕಾರಣವಾಗುತ್ತವೆ. ಹಿಮ ಮತ್ತು ಮಳೆಯನ್ನು ಸರಿಯಾಗಿ ನಿರ್ವಹಿಸಿದರೆ, ಅಫ್ಘಾನಿಸ್ತಾನದ ಪರಿಸರ ಮತ್ತು ಜೀವನೋಪಾಯವು ಸುಧಾರಿಸುತ್ತದೆ” ಎಂದು ಕಾಬೂಲ್ ಟೈಮ್ಸ್ ದಿನಪತ್ರಿಕೆ ತನ್ನ ಸಂಪಾದಕೀಯದಲ್ಲಿ ಬರೆದಿದೆ.

ವಿಶ್ವಸಂಸ್ಥೆಯ ಪ್ರಕಾರ, ಅಫ್ಘಾನಿಸ್ತಾನದ 4 ಕೋಟಿಗೂ ಹೆಚ್ಚು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಜನರಿಗೆ ಈ ವರ್ಷ ಮಾನವೀಯ ನೆರವು ಬೇಕಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...