ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ: ಇಸ್ರೇಲ್ ಸೇನೆ

Date:

ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆಯು ತಿಖಿಸಿದೆ.

ಶುಕ್ರವಾರ ರಾತ್ರಿಯಿಂದ 64 ವರ್ಷದ ನಸ್ರಲ್ಲಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹಿಜ್ಬುಲ್ಲಾ ಸಂಸ್ಥೆಯು ತಿಳಿಸಿರುವುದಾಗಿ ಎಎಫ್‌ಪಿ ವರದಿ ಮಾಡಿದೆ.

“ಹಸನ್ ನಸ್ರಲ್ಲಾ ಅವರು ನಿಧನರಾಗಿದ್ದಾರೆ” ಎಂದು ಇಸ್ರೇಲ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಶಾನಿ ಎಕ್ಸ್‌ನಲ್ಲಿ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು “ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಾಗುವುದಿಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಲೆಬನಾನ್‌ ಮೇಲೆ ಇಸ್ರೇಲ್ ದಾಳಿ: ಪೇಜರ್ ಅಂದರೇನು, ಏಕಕಾಲದಲ್ಲಿ ಸ್ಫೋಟಗೊಂಡಿದ್ದೇಕೆ?

ಇಸ್ರೇಲ್‌ನ ಮೇಲೆ ರಾಕೆಟ್ ದಾಳಿಯ ಬಳಿಕ ಪೂರ್ವ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ತಾಣವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಹಲವಾರು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿದೆ.

“ಇದು ಅಂತ್ಯವೇನಲ್ಲ. ಸಂದೇಶ ಸರಳವಾಗಿದೆ. ಇಸ್ರೇಲ್ ನಾಗರಿಕರನ್ನು ಬೆದರಿಸುವ ಯಾರಾದರೂ ಆಗಿರಲಿ ಅವರನ್ನು ಹೇಗೆ ತಲುಪಬೇಕು ಎಂದು ನಮಗೆ ತಿಳಿದಿದೆ” ಎಂದು ಲೆಫ್ಟಿನೆಂಟ್ ಜನರಲ್ ಹೆರ್ಜಿ ಹಲೆವಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉತ್ತರ ಇಸ್ರೇಲ್‌ಗೆ ರಾಕೆಟ್‌ ದಾಳಿ ನಡೆಸಿದ ಹೊಣೆಯನ್ನು ಹಿಜ್ಬುಲ್ಲಾ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಪ್ರತೀಕಾರದ ದಾಳಿ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...