ಮೊದಲು ಇರಾನ್‌ನ ಪರಮಾಣು ಕೇಂದ್ರಕ್ಕೆ ದಾಳಿ ನಡೆಸಿ: ಇಸ್ರೇಲ್‌ಗೆ ಡೊನಾಲ್ಡ್ ಟ್ರಂಪ್‌ ಸಲಹೆ

Date:

“ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಇರಾನ್‌ನ ಪರಮಾಣು ಕೇಂದ್ರಕ್ಕೆ ಮೊದಲು ದಾಳಿ ನಡೆಸಬೇಕು” ಎಂದು ಇಸ್ರೇಲ್‌ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಸಲಹೆ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಇಸ್ರೇಲ್ ಮೇಲೆ ಮಂಗಳವಾರ ರಾತ್ರಿ ಇರಾನ್ ಕ್ಷಿಪಣಿ ದಾಳಿ ಮಾಡಿದೆ.

ಈ ಬಗ್ಗೆ ಉತ್ತರ ಕೆರೊಲಿನಾದಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಇರಾನ್‌ನ ಪರಮಾಣು ಕೇಂದ್ರಗಳನ್ನು ಇಸ್ರೇಲ್ ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಈ ವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೇಳಿದ ಪ್ರಶ್ನೆಯನ್ನು ಉಲ್ಲೇಖಿಸಿದ್ದಾರೆ.

ಬೈಡನ್ ಅವರಿಗೆ ನೀವು ಇರಾನ್ ಬಗ್ಗೆ ಏನು ಯೋಚಿಸುತ್ತೀರಿ? ಇರಾನ್‌ ಮೇಲೆ ದಾಳಿ ಪರಮಾಣು ದಾಳಿಯನ್ನು ಬೆಂಬಲಿಸುತ್ತೀರಾ ಎಂದು ಪ್ರಶ್ನಿಸಿದಾಗ ಅವರು “ಇಲ್ಲ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಇದ್ದೀದಿರಾ? ಇಸ್ರೇಲಿ ನರಮೇಧಕ್ಕೆ ಪ್ರತೀಕಾರವಾಗಿ ಮಿಸೈಲ್ ದಾಳಿ ಮಾಡಿದ ಇರಾನ್

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟ್ರಂಪ್, “ಅವರು (ಬೈಡನ್) ಅದನ್ನು ತಪ್ಪಾಗಿ ಗ್ರಹಿಸಿದ್ದಾರೆಂದು ನಾನು ಭಾವಿಸುತ್ತೇನೆ. ನಿಜವಾಗಿ ಪರಮಾಣು ಕೇಂದ್ರದ ಮೇಲೆಯೇ ದಾಳಿ ನಡೆಸಬೇಕಾಲ್ಲವೇ? ಯಾಕೆಂದರೆ ಪರಮಾಣು ಶಸ್ತ್ರಾಸ್ತ್ರಗಳು ನಮಗಿರುವ ದೊಡ್ಡ ಅಪಾಯ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಬೈಡನ್ ಅವರಿಗೆ ಆ ಪ್ರಶ್ನೆಯನ್ನು ಕೇಳಿದಾಗ, ಉತ್ತರ ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಬೇಕು ಮತ್ತು ಉಳಿದವುಗಳ ಬಗ್ಗೆ ಬಳಿಕ ಚಿಂತಿಸಬೇಕು ಎಂಬುದು ಅವರ ಉತ್ತರ ಆಗಿರಬೇಕಿತ್ತು” ಎಂದು ಟ್ರಂಪ್ ಅಭಿಪ್ರಾಯಿಸಿದ್ದಾರೆ.

ಲೆಬನಾನ್‌ನಲ್ಲಿ ಹೆಜ್ಬೊಲ್ಲ ನಾಯಕ ಸೆಯ್ಯದ್ ಹಸನ್ ನಸ್ರಲ್ಲಾಹ್ ಮತ್ತು ಇರಾನಿ ಮಿಲಿಟರಿ ಅಧಿಕಾರಿಗಳನ್ನು ಇಸ್ರೇಲ್‌ ಹತ್ಯೆಗೈದ ಬಳಿಕ, ಪ್ರತಿಕಾರವಾಗಿ ಇರಾನ್‌, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಸ್ರೇಲ್ ಕಡೆಗೆ ಸುಮಾರು 200 ಇರಾನ್ ಕ್ಷಿಪಣಿಗಳನ್ನು ಹಾರಿಸಿದೆ. ಈ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸುವುದಕ್ಕೆ ಬುಧವಾರ ಬೈಡನ್ ವಿರೋಧ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...