ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ ಎಂಬ ಪ್ರಶ್ನೆಗೆ ಸುನಿತಾ ವಿಲಿಯಮ್ಸ್‌ ಹೇಳಿದ್ದೇನು?

Date:

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳು ಸಿಲುಕಿಕೊಂಡು ನಂತರ ಭೂಮಿಗೆ ಮರಳಿದ ಬಳಿಕ ಗಗನಯಾತ್ರಿ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಬಾಹ್ಯಾಕಾಶದಲ್ಲಿನ ಹಲವಾರು ಕೌತುಕಗಳು, ಸಂಶೋಧನೆಗಳು ಹಾಗೂ ಭೂಮಿ ಕುರಿತ ಅನುಭವಗಳನ್ನು ಸುನೀತಾ ಅವರು ಹಂಚಿಕೊಂಡಿದ್ದಾರೆ. ಈ ವೇಳೆ, ಭಾರತದ ಬಗ್ಗೆಯೂ ಸುನಿತಾ ವಿಲಿಯಮ್ಸ್‌ ಮಾತನಾಡಿದರು.

ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡಲಿದ್ದೇನೆ. ಮುಂದಿನ ಆಕ್ಸಿಯಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿರುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ನಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದೆಂದು ನಾನು ಭಾವಿಸುತ್ತೇನೆ ಎಂದು ಸುನಿತಾ ವಿಲಿಯಮ್ಸ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಹಿಂಜರಿಯುವುದಿಲ್ಲ. ಬಾಹ್ಯಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ನಾವು ಇರುವ ಕಕ್ಷೆಯಿಂದ ಅತ್ಯಂತ ರಂಗು ರಂಗಾಗಿ ಭಾರತ ಗೋಚರಿಸುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲ ಅದ್ಬುತ ಚಿತ್ರಗಳು ಸಿಕ್ಕವು. ಗುಜರಾತ್ ಮತ್ತು ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್‌, ಬುಚ್‌ ವಿಲ್ಮೋರ್‌: ಹೇಗಿತ್ತು 286 ದಿನಗಳ ರೋಚಕ ಪಯಣ!

ಭಾರತವು ಒಂದು ಮಹಾನ್, ಅದ್ಭುತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅದು ಬಾಹ್ಯಾಕಾಶದಲ್ಲಿ ತನ್ನ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಇಸ್ರೋ 2026 ರ ವೇಳೆಗೆ ಗಗನಯಾತ್ರಿಗಳನ್ನು ಕಕ್ಷೆಗೆ ಕಳುಹಿಸಲು ಸಜ್ಜಾಗಿದೆ. ಇದರಲ್ಲಿ ಭಾಗವಾಗುವ ಮೂಲಕ ನಾವು ಭಾರತಕ್ಕೆ ನೆರವಾಗಲು ಬಯಸುತ್ತೇವೆ. ಶೀಘ್ರ ಭಾರತಕ್ಕೆ ಭೇಟಿ ನೀಡುತ್ತೇನೆ, ಅಲ್ಲಿಯ ಜನರೊಂದಿಗೆ ಸಾಧ್ಯವಾದಷ್ಟು ಅನುಭವವನ್ನು ಹಂಚಿಕೊಳ್ಳುತ್ತೇನೆ ಎಂದು ಸುನಿತಾ ಹೇಳಿದ್ದಾರೆ.

ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ದೀರ್ಘಕಾಲ ಉಳಿಯುವುದರಿಂದ ದೈಹಿಕ ಸವಾಲುಗಳನ್ನು ಎದುರಿಸುತ್ತಾರೆ ಎಂದು ಸುನಿತಾ ವಿಲಿಯಮ್ಸ್ ಹೇಳಿದರು. ವಿಲ್ಮರ್ ಅವರನ್ನು ಭಾರತಕ್ಕೆ ಕರೆದುಕೊಂಡು ಹೋಗುತ್ತಿರಾ ಎಂಬ ಪ್ರಶ್ನೆಗೆ ಖಂಡಿತವಾಗಿ ಕರೆದುಕೊಂಡು ಹೋಗುತ್ತೇನೆ ಎಂದು ನಗುತ್ತಾ ಸುನೀತಾ ವಿಲಿಯಮ್ಸ್ ಉತ್ತರಿಸಿದರು.

ಸ್ನಾಯು ದೌರ್ಬಲ್ಯ ಮತ್ತು ಮೂಳೆ ನಷ್ಟವನ್ನು ಕಡಿಮೆ ಮಾಡಲು ತಜ್ಞರ ತಂಡವಿದೆ ಎಂದು ಮತ್ತೊಬ್ಬ ಗಗನಯಾತ್ರಿ ಬುಚ್‌ ವಿಲ್ಮೋರ್ ವಿವರಿಸಿದರು.

ಪ್ರಸ್ತುತ ಯಾತ್ರೆಯಲ್ಲಿ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ತಮ್ಮ ಕಾರ್ಯಾಚರಣೆಯ ಸಮಯದಲ್ಲಿ 121,347,491 ಮೈಲುಗಳಷ್ಟು ಪ್ರಯಾಣಿಸಿದ್ದರು. ಬಾಹ್ಯಾಕಾಶದಲ್ಲಿ 286 ದಿನಗಳನ್ನು ಕಳೆದ ಇವರು ಭೂಮಿಯ ಸುತ್ತ 4,576 ಕಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...