ರಷ್ಯಾ ಪರ ಒತ್ತಾಯದಿಂದ ಯುದ್ಧದಲ್ಲಿ ಪಾಲ್ಗೊಂಡಿದ್ದ ಭಾರತದ ಯುವಕ ಸಾವು

Date:

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಹೈದರಾಬಾದಿನ ಯುವಕರೊಬ್ಬರು ಮೃತಪಟ್ಟಿದ್ದಾರೆ.

ಮೊಹಮ್ಮದ್ ಅಫ್ಸಾನ್ ಮೃತರು. ಜೀವನೋಪಾಯಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಮೊಹಮ್ಮದ್ ಅಫ್ಸಾನ್ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ರಷ್ಯಾ ಸರ್ಕಾರ ಬಲವಂತವಾಗಿ  ಕಳಿಸಲಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಅಫ್ಸಾನ್‌ ಅವರ ಹಿರಿಯ ಸಹೋದರ ಇಮ್ರಾನ್, “ ಏಜೆಂಟ್‌ ಒಬ್ಬರ ನಂಬಿಕೆಯ ಮೇಲೆ ಭಾಷೆ ಬಾರದ ಅಫ್ಸಾನ್‌ ಅವರನ್ನು ಒಂದು ವರ್ಷದ ಒಪ್ಪಂದದೊಂದಿಗೆ ನವೆಂಬರ್ 13ರಂದು ಚೆನ್ನೈ ಮತ್ತು ಶಾರ್ಜಾ ಮೂಲಕ ರಷ್ಯಾಕ್ಕೆ ತೆರಳಿದ್ದರು. ಅಲ್ಲಿಗೆ ತೆರಳಿದ ನಂತರ ಅವರನ್ನು ರಷ್ಯಾ ಪರವಾದ ಯುದ್ಧಕ್ಕೆ ನಿಯೋಜಿಸಲಾಗಿತ್ತು. ಈ ಬೆಳವಣಿಗೆಯ ಹೊರತಾಗಿಯೂ ಟ್ರಾವೆಲ್ ಏಜೆಂಟ್ ನಮ್ಮ ಸಹೋದರನನ್ನು ಯುದ್ಧದಲ್ಲಿ ತೊಡಗಿಸುಕೊಳ್ಳುವುದಿಲ್ಲ ಎಂದು ಮಾತು ಕೊಟ್ಟಿದ್ದ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸುದ್ದಿಗಾರರೊಂದಿಗೆ ಮಾತನಾಡಿ,ಹಲವು ಪ್ರಯತ್ನಗಳ ನಂತರ ಅಂತಿಮವಾಗಿ ಅಫ್ಸಾನ್ ಸಾವಿನ ಸುದ್ದಿ ಇಂದು(ಮಾ.06) ಸಂತ್ರಸ್ತರ ಕುಟುಂಬಕ್ಕೆ ತಲುಪಿದೆ. ಭಾರತೀಯ ರಾಯಭಾರಿ ಅಧಿಕಾರಿಯೊಬ್ಬರು ಅಫ್ಸಾನ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕಾಗಿ ಮೃತಪಟ್ಟಿದ್ದಾರೆ ಎಂಬ ವಿಷಯ ಸ್ಪಷ್ಟವಾಗಿಲ್ಲ” ಎಂದು ತಿಳಿಸಿದ್ದಾರೆ

ತೆಲಂಗಾಣದ ನಾರಾಯಣಪೇಟೆಯ ಮೊಹಮದ್ ಸುಫೈನ್ ಅವರು ರಷ್ಯಾದಲ್ಲಿ ಸಿಲುಕಿಕೊಂಡಿದ್ದು, ಸುಫೈನ್ ಸಂಕಷ್ಟದಲ್ಲಿರುವ ಬಗ್ಗೆ ಅವರ ಸಹೋದರ ಮಾಹಿತಿ ನೀಡಿದ್ದಾರೆ..

ಮೋಸ ಹಾಗೂ ಕಳ್ಳ ಸಾಗಣೆಯ ಮೂಲಕ ತಮ್ಮ ಮಕ್ಕಳನ್ನು ರಷ್ಯಕ್ಕೆ ಕಳುಹಿಸಲಾಗಿದ್ದು, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮಧ್ಯಸ್ಥಿಕೆಯಿಂದ ಭಾರತಕ್ಕೆ ವಾಪಸ್ ಕರೆ ತರಬೇಕೆಂದು ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.

ರಷ್ಯಾದಲ್ಲಿರುವ ಯುವಕರನ್ನು ವಾಪಸ್ ಕರೆತರಲು ಸಂಸದ ಓವೈಸಿ ಅವರು ಮಾಸ್ಕೋದಲ್ಲಿರುವ ಭಾರತದ ರಾಯಭಾರಿಗೆ ಪತ್ರ ಬರೆದಿದ್ದಾರೆ. ಹತಾಶಗೊಂಡಿರುವ ನಿರುದ್ಯೋಗಿ ಯುವಕರ ಲಾಭ ಪಡೆದುಕೊಂಡು ಟ್ರಾವೆಲ್ ಏಜೆಂಟರು ವಂಚನೆವೆಸಗುತ್ತಿದ್ದು, ಇಂತಹ ನಯವಂಚಕರನ್ನು ಜೈಲಿಗೆ ತಳ್ಳಬೇಕು ಎಂದು ಓವೈಸಿ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...