ಇಸ್ರೇಲ್-ಇರಾನ್ ಸಂಘರ್ಷ | ಕದನ ವಿರಾಮ ಘೋಷಿಸಿದ ಟ್ರಂಪ್; ಯಾವುದೇ ಒಪ್ಪಂದ ನಡೆದಿಲ್ಲ ಎಂದ ಇರಾನ್

Date:

ಕಳೆದ 12 ದಿನಗಳಿಂದ ಇಸ್ರೇಲ್‌ ಮತ್ತು ಇರಾನ್‌ ನಡುವೆ ಸಂಘರ್ಷ ನಡೆಯುತ್ತಿದೆ. ಇಸ್ರೇಲ್ ಆರಂಭಿಸಿದ ದಾಳಿಗೆ ಇರಾನ್ ತೀವ್ರವಾಗಿ ಪ್ರತಿಕ್ರಿಯಿಸುತ್ತಾ ಬಂದಿದೆ. ಇರಾನ್‌ನ ಪ್ರತಿದಾಳಿಯಿಂದ ಇಸ್ರೇಲ್ ತತ್ತರಿಸಿದ್ದು, ಕದನ ವಿರಾಮಕ್ಕಾಗಿ ಎದುರು ನೋಡುತ್ತಿತ್ತು. ಈ ನಡುವೆ, ಉಭಯ ರಾಷ್ಟ್ರಗಳ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಿಸಿದ್ದಾರೆ. ಆದರೆ, ನಮ್ಮೊಂದಿಗೆ ಯಾವುದೇ ಮಾತುಕತೆ-ಒಪ್ಪಂದಗಳು ನಡೆದಿಲ್ಲ ಎಂದು ಇರಾನ್ ಹೇಳಿದೆ. ಕದನ ವಿರಾಮವನ್ನು ವಿರೋಧಿಸಿವ ಸಾಧ್ಯತೆ ಇದೆ.

ಶನಿವಾರ ಮುಂಜಾನೆ ಇರಾನ್‌ ಮೂರು ಪರಮಾಣು ಸೌಕರ್ಯಗಳ ಮೇಲೆ ಅಮೆರಿಕ ದಾಳಿ ಮಾಡಿದ ಬಳಿಕ, ಇಲ್ಲಿಗೆ ಯುದ್ಧ ಮುಗಿಯುತ್ತದೆ ಎಂದು ಟ್ರಂಪ್ ಹೇಳಿದ್ದರು. ಅಮೆರಿಕ ದಾಳಿ ಸೋಮವಾರ ರಾತ್ರಿ ಪ್ರತ್ಯುತ್ತರವಾಗಿ ಇರಾನ್ ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ದಾಳಿ ಮಾಡಿತು. ಇದಾದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಕದನ ವಿರಾಮ ಘೋಷಿಸಿದ್ದಾರೆ. ಆದರೆ, ಈ ಘೋಷಣೆಗೂ ಮುನ್ನ ಇರಾನ್ ಮೇಲೆ ಭಾರೀ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ.

ಕದನ ವಿರಾಮ ಘೋಷಿಸಿರುವ ಟ್ರಂಪ್, ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. 12 ನೇ ದಿನದ ಯುದ್ಧವು ಕೊನೆಗೊಂಡಿದೆ. ಇದನ್ನು ಜಗತ್ತು ಸ್ವಾಗತಿಸುತ್ತದೆ. ಕದನ ವಿರಾಮದ ಸಮಯದಲ್ಲಿ ಎರಡು ದೇಶಗಳು ಶಾಂತಿ ಮತ್ತು ಗೌರವದಿಂದ ಇರಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ ಇಸ್ರೇಲ್ ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಈ ಯುದ್ಧ ವರ್ಷಗಳ ಕಾಲ ನಡೆಯುತ್ತಿತ್ತು. ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು. ಆದರೆ, ಆ ರೀತಿ ಆಗುವುದಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ, ಟ್ರಂಪ್ ಹೇಳಿಕೆಗಳನ್ನು ಅಲ್ಲಗಳೆದಿರುವ ಇರಾನ್, “ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆ ನಿಲುಗಡೆ ಸಂಬಂಧ ನಮ್ಮೊಂದಿಗೆ ಯಾವುದೇ ಮಾತುಕತೆ-ಒಪ್ಪಂದಗಳು ನಡೆದಿಲ್ಲ. ಇಸ್ರೇಲ್ ತನ್ನ ದಾಳಿಯನ್ನು ನಿಲ್ಲಿಸಿದರೆ,ನಾವು ಯಾವುದೇ ದಾಳಿ ಮಾಡುವುದಿಲ್ಲ. ದಾಳಿ ಮಾಡುವ ಉದ್ದೇಶ ನಮಗಿಲ್ಲ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...