ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

Date:

ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ.

ಗಾಜಾದ ಮೇಲೆ ನಡೆಸಿದ ವಾಯುದಾಳಿಯಿಂದ ಆಹಾರ ಮತ್ತು ಮಾನವೀಯ ನೆರವು ಒದಗಿಸುತ್ತಿದ್ದ ಅಮೆರಿಕ ಮತ್ತು ಕೆನಡಾದ ನಾಗರಿಕರು ಮೃತಪಟ್ಟ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಗಾಜಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಮಾರಾಣಾಂತಿಕ ಆಕ್ರಮಣದ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಕಳೆದ 7 ತಿಂಗಳಿನಿಂದ ನಡೆದ ಯುದ್ಧದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ತಕ್ಷಣವೇ ಯುದ್ಧ ವಿರಾಮ ಘೋಷಿಸಿ ಎರಡು ಕಡೆಯಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗೆ ತ್ವರಿತವಾಗಿ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ 30 ನಿಮಿಷಗಳ ಕಾಲ ನಡೆದ ದೂರವಾಣಿ ಮೂಲಕ ಸಂಭಾಷಣೆ ನಡೆಸಿರುವ ಬೈಡನ್‌, ಪ್ಯಾಲಿಸ್ತೇನ್‌ ನಾಗರಿಕರು ಹಾಗೂ ವಿದೇಶಿ ನೆರವು ಕಾರ್ಯಕರ್ತರ ರಕ್ಷಣೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ ಹಾಮಸ್‌ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ಯುದ್ಧಕ್ಕೆ ಇಸ್ರೇಲ್‌ಗೆ ಬೆಂಬಲ ಮುಂದುವರೆಸುವ ಬಗ್ಗೆ ಕೂಡ ಪುನರ್‌ ಪರಿಶೀಲಿಸುವುದಾಗಿ ಅಮೆರಿಕ ಅಧ್ಯಕ್ಷರು ತಿಳಿಸಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದಷ್ಟೆ ಗಾಜಾದಲ್ಲಿ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಮಾನವೀಯ ನೆರವು ಒದಗಿಸುತ್ತಿದ್ದ ಕಾರ್ಯಕರ್ತರು ಮೃತಪಟ್ಟ ನಂತರ ಆಸ್ಟ್ರೇಲಿಯಾ, ಕೆನಡಾ, ಅಮೆರಿಕಾ, ಪೋಲಾಂಡ್ ಹಾಗೂ ಇಂಗ್ಲೆಂಡ್‌ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...