ಇಮ್ರಾನ್ ಖಾನ್‌ಗೆ ಮಾನಸಿಕವಾಗಿ ಚಿತ್ರಹಿಂಸೆ: ಭೇಟಿ ಬಳಿಕ ಸಹೋದರಿ ಹೇಳಿಕೆ

Date:

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಬಂಧಿತರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಂದು ಅವರ ಸಹೋದರಿ ಡಾ. ಉಜ್ಮಾ ಖಾನಮ್ ಭೇಟಿಯಾದರು.

20 ನಿಮಿಷಗಳ ಕಾಲ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಜ್ಮಾ ಖಾನಮ್, “ಇಮ್ರಾನ್‌ ಅವರು ದೈಹಿಕವಾಗಿ ಆರಾಮಾಗಿದ್ದಾರೆ. ಆದರೆ ಮಾನಸಿಕವಾಗಿ ತೀವ್ರ ಚಿತ್ರಹಿಂಸೆಗೊಳಗಾಗುತ್ತಿದ್ದಾರೆ. ದಿನವಿಡೀ ಸೆರೆಮನೆಯಲ್ಲಿ ಒಂಟಿಯಾಗಿ ಕೂಡಿಹಾಕಲಾಗಿದ್ದು, ಯಾರೊಂದಿಗೂ ಮಾತುಕತೆ ನಡೆಸಲು ಅವಕಾಶವಿಲ್ಲ” ಎಂದು ತಿಳಿಸಿದ್ದಾರೆ.

ಇಮ್ರಾನ್ ಖಾನ್ ಅವರ ಬಂಧನ ಮತ್ತು ಪ್ರಸ್ತುತ ಸ್ಥಿತಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಅವರೇ ಕಾರಣ ಎಂದು ಇಮ್ರಾನ್‌ ತಿಳಿಸಿರುವುದಾಗಿ ಉಜ್ಮಾ ಖಾನಮ್ ಈ ಸಂದರ್ಭದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಕೆಲವು ವಾರಗಳಿಂದ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಗಂಭೀರ ಊಹಾಪೋಹಗಳು ಹರಡಿದ್ದವು. ಕುಟುಂಬ ಸದಸ್ಯರನ್ನು ಭೇಟಿಗೆ ಅವಕಾಶ ನೀಡದೇ ತಡೆಯಲಾಗಿತ್ತು. ಅವರ ಮಕ್ಕಳು “ತಂದೆಯ ಸ್ಥಿತಿ ಗಂಭೀರವಾಗಿದ್ದು, ಅದನ್ನು ಮರೆಮಾಚುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ಕಳೆದ 25 ದಿನಗಳಲ್ಲಿ ಕುಟುಂಬ ಅಥವಾ ಪಾಕಿಸ್ತಾನ ಪಿಟಿಐ ನಾಯಕರೊಂದಿಗೆ ಯಾವುದೇ ಭೇಟಿ ನಡೆದಿರಲಿಲ್ಲ. ಇದರಿಂದ “ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ, ಅದನ್ನು ಮರೆಮಾಚಲಾಗುತ್ತಿದೆ” ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ್ದವು.

ಪಿಟಿಐ ನಾಯಕ ಸೆನೆಟರ್ ಖುರ್ರಮ್ ಝೀಷಾನ್ ಅವರು “ಇಮ್ರಾನ್ ಖಾನ್ ಅವರ ಜನಪ್ರಿಯತೆಯಿಂದ ಹೆದರಿರುವ ಶೆಹಬಾಝ್ ಷರೀಫ್ ಸರ್ಕಾರ ಅವರನ್ನು ಒಂಟಿಯಾಗಿ ಇರಿಸಿ ಒತ್ತಡ ಹೇರುತ್ತಿದೆ. ಅವರು ದೇಶ ತೊರೆಯುವಂತೆ ಮಾಡಲು ಇದೊಂದು ತಂತ್ರ” ಎಂದು ಆರೋಪಿಸಿದ್ದಾರೆ.

72 ವರ್ಷದ ಇಮ್ರಾನ್ ಖಾನ್ 2023ರ ಆಗಸ್ಟ್‌ನಿಂದ ಜೈಲಿನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...