ಪಾಕಿಸ್ತಾನ : ಇಮ್ರಾನ್ ಖಾನ್ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗ

Date:

ಪಾಕಿಸ್ತಾನ ಚುನಾವಣಾ ಆಯೋಗ 2024ರ ರಾಷ್ಟ್ರೀಯ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರವನ್ನು ತಿರಸ್ಕರಿಸಿದೆ.

ಇಮ್ರಾನ್ ಖಾನ್ ಅವರು ತಮ್ಮ ಪಾಕಿಸ್ತಾನ್‌ ತಹ್ರೀಕ್‌ ಎ ಇನ್ಸಾಫ್ ಪಕ್ಷದಿಂದ(ಪಿಟಿಐ) ಸ್ವಕ್ಷೇತ್ರ ಮೈನ್‌ವಾಲಿಯಿಂದ ಸ್ಪರ್ಧಿಸಿದ್ದರು.

ಸೈಪರ್ ಪ್ರಕರಣದಲ್ಲಿ ಅಧಿಕೃತ ರಹಸ್ಯ ಕಾಯಿದೆ ಉಲ್ಲಂಘನೆಯ ಆರೋಪದಲ್ಲಿ ಈ ವರ್ಷದ ಆಗಸ್ಟ್‌ನಲ್ಲಿ ಇಮ್ರಾನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈಪರ್ ಪ್ರಕರಣದಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ರಹಸ್ಯವನ್ನು ಅಮೆರಿಕದಲ್ಲಿನ ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಿದ್ದ ಆರೋಪ ಇಮ್ರಾನ್‌ ಖಾನ್ ಮೇಲಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಸೈಪರ್ ಪ್ರಕರಣವು ವಿದೇಶಗಳಿಂದ ರಾಜಕೀಯ ಲಾಭ ಗಳಿಕೆಯ ಉದ್ದೇಶಕ್ಕಾಗಿ ಪಾಕಿಸ್ತಾನದ ರಾಜತಾಂತ್ರಿಕ ರಹಸ್ಯವನ್ನು ಅಮೆರಿಕದಲ್ಲಿನ ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಕೂಡ ಮಾಜಿ ಪ್ರಧಾನಿಯ ವಿರುದ್ಧ ಸಾಕಷ್ಟು ಪುರಾವೆಗಳಿಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿಗಳಿಗೆ ತಿಳಿಸಿತ್ತು.

ಇಮ್ರಾನ್‌ ಖಾನ್ 2022ರ ಏಪ್ರಿಲ್‌ನಲ್ಲಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದ್ದಾರೆ. ಸದ್ಯ ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಸೆರೆಮನೆಯಲ್ಲಿದ್ದಾರೆ.

ಫೆಬ್ರವರಿ 8ರಂದು ಪಾಕ್‌ನಲ್ಲಿ ರಾಷ್ಟ್ರೀಯ ಚುನಾವಣೆಗಳು ನಡೆಯಲಿದೆ. ಚುನಾವಣೆಗೂ ಮೊದಲು ಇಮ್ರಾನ್ ಅವರನ್ನುಬಿಡುಗಡೆಗೊಳಿಸುವ ಸಾಧ್ಯತೆ ಕಡಿಮೆ ಎಂದು ಪಿಟಿಐ ನಾಯಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...