ರಷ್ಯಾದ ತೈಲ ಆಮದು ಕಡಿತಗೊಳಿಸಿದ ಭಾರತ; ಟ್ರಂಪ್‌ಗೆ ಮಣಿದರಾ ಮೋದಿ?

Date:

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳ ಸಮಯದಲ್ಲಿ ಭಾರತವು ರಾಷ್ಯಾದ ಕಚ್ಚಾ ತೈಲ ಖರೀದಿಯ ಕುರಿತು ಉಲ್ಲೇಖಿಸಿದೆ. ಕಳೆದ ಕೆಲ ವಾರಗಳಲ್ಲಿ ರಷ್ಯಾದಿಂದ ಭಾರತವು ಖರೀದಿ ಮಾಡುತ್ತಿದ್ದ ಕಚ್ಚಾ ತೈಲದ ಪ್ರಮಾಣ ತೀವ್ರವಾಗಿ ಕುಸಿದಿದೆ ಎಂದು ಹೇಳಿಕೊಂಡಿದೆ ಎನ್ನಲಾಗಿದೆ. ಈ ಬೆನ್ನಲ್ಲೇ, ಟ್ರಂಪ್ ಆಡಳಿತವು ಭಾರತದ ಮೇಲೆ ಹೇರಿರುವ 25% ದಂಡದ ಸುಂಕವನ್ನು ಹಿಂಪಡೆಯುವ ಕುರಿತು ಪರಿಶೀಲಿಸಲಿದೆ ಎಂದು ಸೂಚಿಸಿದೆ.

ಟ್ರಂಪ್ ಆಡಳಿತಕ್ಕೆ ಮಣಿದು ಭಾರತವು ರಷ್ಯಾದ ತೈಲ ಖರೀದಿಯನ್ನು ಕಡಿತಗೊಳಿಸಿದೆ. ಹೆಚ್ಚುವರಿ ಸುಂಕ ಹೇರಿ ಒತ್ತಡ ಹಾಕುವ ಟ್ರಂಪ್ ತಂತ್ರವು ಫಲಿಸಿದೆ ಎಂದು ಅಮೆರಿಕ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ತೈಲ ಖರೀದಿಯ ಕಡಿತಕ್ಕೆ ಅಮೆರಿಕದ ಒತ್ತಡ ತಂತ್ರವೇ ಕಾರಣವೆಂದು ವಿಶ್ಲೇಷಕರೂ ಹೇಳುತ್ತಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಬೆಸೆಂಟ್, “ರಷ್ಯಾದೊಂದಿಗಿನ ತೈಲ ವ್ಯಾಪಾರಕ್ಕಾಗಿ ಭಾರತದ ಮೇಲೆ ಅಮೆರಿಕ 25% ಸುಂಕವನ್ನು ವಿಧಿಸಿದೆ. ಈ ಕ್ರಮವು ಫಲಿತಾಂಶಗಳನ್ನು ನೀಡಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ನಾವು ಭಾರತದ ಮೇಲೆ 25% ಸುಂಕಗಳನ್ನು ವಿಧಿಸಿದ್ದೆವು. ಈಗ ಭಾರತೀಯ ಸಂಸ್ಕರಣಾಗಾರಗಳು ರಷ್ಯಾದ ತೈಲವನ್ನು ಖರೀದಿಸುವಲ್ಲಿ ಕುಸಿತ ತೋರಿಸಿವೆ. ನಮ್ಮ ತಂತ್ರ ಯಶಸ್ವಿಯಾಗಿದೆ. ಅಮೆರಿಕ ಆಡಳಿತವು ಹೆಚ್ಚುವರಿ ಸುಂಕವನ್ನು ಅಡಿಲಿಸಲು ಮುಕ್ತವಾಗಿದೆ” ಎಂದು ಬೆಸೆಂಟ್ ಹೇಳಿದ್ದಾರೆ.

“ಭಾರತದ ಮೇಲೆ ಹೇರಲಾಗಿರುವ 25%+25%=50% ಸುಂಕಗಳು ಇನ್ನೂ ಜಾರಿಯಲ್ಲಿವೆ. ಈ ಪೈಕಿ, ದಂಡಾತ್ಮಕವಾಗಿ ಹೇರಲಾಗಿದ್ದ 25% ಸುಂಕವನ್ನು ತೆಗೆದುಹಾಕಲು ಅವಕಾಶವಿದೆ ಎಂಬುದಾಗಿ ನಾನು ಭಾವಿಸಿದ್ದೇನೆ” ಎಂದು ಹೇಳಿದ್ದಾರೆ.

ಕಳೆದ ವರ್ಷ (2025) ಆಗಸ್ಟ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಜೊತೆಗಿನ ತೈಲ ವ್ಯಾಪಾರವನ್ನು ಸ್ಥಗಿತಗೊಳಿಸುವಂತೆ ಭಾರತದ ಮೇಲೆ ನಿರಂತರ ಒತ್ತಡ ಹೇರಿದ್ದರು. ಆದಾಗ್ಯೂ, ಭಾರತವು ತೈಲ ಖರೀದಿಯನ್ನು ಮುಂದುವರೆಸಿತ್ತು. ಪರಿಣಾಮವಾಗಿ, ಭಾರತದ ಮೇಲಿನ ಸುಂಕವನ್ನು 50%ಗೆ ಹೆಚ್ಚಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...