ಕೆನಡಾದ 6 ರಾಜತಾಂತ್ರಿಕರನ್ನು ಉಚ್ಚಾಟಿಸಿದ ಭಾರತ

Date:

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನಡಾದ 6 ಮಂದಿ ರಾಜತಾಂತ್ರಿಕರನ್ನು ಭಾರತ ಉಚ್ಚಾಟಿಸಿದೆ. ಅ.19ರೊಳಗೆ ದೇಶದಿಂದ ನಿರ್ಗಮಿಸುವಂತೆ ಅವರಿಗೆ ಸೂಚಿಸಿದೆ.

ಕೆನಡಾ ರಾಯಭಾರಿ ಕಚೇರಿಯ ಚಾರ್ಜ್ ಡಿ ಅಫೇರ್ಸ್ ಸ್ಟಿವರ್ಟ್ ವ್ಹೀಲರ್, ಉಪ ರಾಯಭಾರಿ ಪ್ಯಾಟ್ರಿಕ್ ಹೆಬರ್ಟ್, ಪ್ರಥಮ ಕಾರ್ಯದರ್ಶಿಗಳಾದ ಮಾರೀ ಕ್ಯಾಥರಿನ್ ಜೊಲಿ, ಇಯಾನ್ ರಾಸ್ ಡೇವಿಡ್, ಆ್ಯಡಂ ಜೇಮ್ಸ್ ಚಿಪ್ಕಾ ಮತ್ತು ಪೌಲಾ ಒರ್ಜುವೇಲಾ ಉಚ್ಛಾಟಿತ ರಾಜತಾಂತ್ರಿಕರಾಗಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸುರ್ರೆ ನಗರದ ಗುರುದ್ವಾರದ ಬಳಿ ಖಲಿಸ್ತಾನಿ ಉಗ್ರ ನಿಜ್ಜಾರ್‌ ಆಗುಂತಕರ ಗುಂಡೇಟಿಗೆ ಬಲಿಯಾಗಿದ್ದ. ಕೃತ್ಯದಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಆರೋಪ ಮಾಡಿದ ಬಳಿಕ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಸರಿಯಾಗಿ ಒಂದು ವರ್ಷದ ಬಳಿಕ ಪ್ರಕರಣಕ್ಕೆ ಮತ್ತೆ ಜೀವ ನೀಡಿರುವ ಕೆನಡಾ ಸರ್ಕಾರ, ಹತ್ಯೆಯ ಹಿಂದೆ ಭಾರತೀಯ ರಾಯಭಾರಿ ಸಂಜಯ್‌ಕುಮಾರ್‌ ವರ್ಮಾ ಅವರ ಪಾತ್ರವಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹೇಳಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾ ಸರ್ಕಾರದ ನಡೆಗೆ ಸೋಮವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ,ಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರ ವಿರುದ್ಧ ಆರೋಪ ಅಸಂಬದ್ಧ ಎಂದು ತಳ್ಳಿ ಹಾಕಿದೆ. ಹಾಗೆಯೇ ಭಾರತೀಯ ಹೈಕಮಿಷನರ್‌ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನು ತನಿಖೆಯ ವ್ಯಾಪ್ತಿಗೆ ತರಬೇಕು ಎಂಬ ಕೆನಡಾ ಮನವಿಯನ್ನು ತಿರಸ್ಕರಿಸಿದೆ.

ನಿಜ್ಜಾರ್‌ ಹತ್ಯೆಯಲ್ಲಿ ಭಾರತದ ಪಾತ್ರ ಎಳ್ಳಷ್ಟೂ ಇಲ್ಲ. ಕಾನೂನುಬಾಹಿರವಾಗಿ ಕೆಲವು ಕ್ರಿಮಿನಲ್‌ಗಳಿಗೆ ಕೆನಡಾ ಸರ್ಕಾರ ಪೌರತ್ವ ನೀಡಿದೆ. ಪ್ರತ್ಯೇಕತಾವಾದಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ. ಭಾರತದ ಅತೀ ಮುಣ್ಯ ಅಪರಾಧಿಗಳನ್ನು ಹಸ್ತಾಂತರಿಸುವ ಮನವಿಗೂ ಸ್ಪಂದಿಸದೆ ಪ್ರಧಾನಿ ಜಸ್ಟಿನ್‌ ಟ್ರುಡೊ ಸರ್ಕಾರ ಆಶ್ರಯ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರುಗೇಟು ನೀಡಿದೆ.

ಸಂಜಯ್‌ಕುಮಾರ್‌ ವರ್ಮಾ ಭಾರತ ಸರ್ಕಾರದ ಹಿರಿಯ ರಾಜತಾಂತ್ರಿಕ ಅಧಿಕಾರಿ. ಕಳೆದ 36 ವರ್ಷಗಳಿಂದ ವಿದೇಶಾಂಗ ಇಲಾಖೆಯಲ್ಲಿಕೆಲಸ ನಿರ್ವಹಿಸುತ್ತಿದ್ದಾರೆ. ಜಪಾನ್‌, ಸುಡಾನ್‌, ಟರ್ಕಿ, ವಿಯೆಟ್ನಾಂ, ಚೀನಾದಲ್ಲಿ ರಾಯಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕೆನಡಾದಲ್ಲಿ ಭಾರತೀಯ ರಾಯಭಾರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...