ಭುಗಿಲೆದ್ದ ಪ್ರತಿಭಟನೆ: ಇರಾನ್‌ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ಸಲಹೆ

Date:

ಇರಾನ್‌ನಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸರ್ಕಾರದ ವಿರುದ್ಧ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಪ್ರಸ್ತುತ ಇರಾನ್‌ನಲ್ಲಿರುವ ಭಾರತದ ನಾಗರಿಕರು, ಭಾರತೀಯ ಮೂಲದವರಿಗೆ, ಇರಾನ್‌ಗೆ ಪ್ರಯಾಣಿಸಲು ಮುಂದಾಗಿರುವ ನಾಗರಿಕರಿಗೆ ವಿದೇಶಾಂಗ ಸಚಿವಾಲಯವು ಪ್ರಯಾಣ ಸಲಹೆಯನ್ನು ನೀಡಿದೆ. ಸೂಕ್ತ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

ಈ ಬಗ್ಗೆ ವಿದೇಶಾಂಗ ಸಚಿವಾಲಯವು ಅಧಿಸೂಚನೆ ಹೊರಡಿಸಿದ್ದು, “ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಸೂಚನೆ ಬರುವವರೆಗೂ ಭಾರತೀಯ ಪ್ರಜೆಗಳು ಇಸ್ಲಾಮಿಕ್ ಗಣರಾಜ್ಯ ಇರಾನ್‌ಗೆ ತೀರ ಅನಿವಾರ್ಯವಿಲ್ಲದೆ ಪ್ರಯಾಣಿಸುವುದನ್ನು ತಪ್ಪಿಸಬೇಕು” ಎಂದು ಸೂಚಿಸಿದೆ.

ಇದನ್ನು ಓದಿದ್ದೀರಾ? ಶರಣಾಗುವ ಪ್ರಶ್ನೆಯೇ ಇಲ್ಲ: ಇರಾನ್ ಪರಮೋಚ್ಚ ನಾಯಕ ಗುಡುಗು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದವರು ಎಚ್ಚರಿಕೆ ವಹಿಸಿ. ಪ್ರತಿಭಟನೆಗಳು ಅಥವಾ ಪ್ರದರ್ಶನಗಳು ನಡೆಯುವ ಸ್ಥಳಕ್ಕೆ ಹೋಗದಿರಿ. ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನೀಡುವ ಮಾಹಿತಿಯನ್ನು ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ಮೂಲಕ ಸೂಕ್ಷ್ಮವಾಗಿ ಗಮನಿಸಿ” ಎಂದು ತಿಳಿಸಿದೆ.

“ಇರಾನ್‌ನಲ್ಲಿ ನಿವಾಸ ವೀಸಾಗಳ ಹೊಂದಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸದಿದ್ದರೆ, ನೋಂದಾಯಿಸಿಕೊಳ್ಳಿ” ಎಂದೂ ಸೂಚಿಸಲಾಗಿದೆ.

ಇರಾನ್‌ನಲ್ಲಿ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿ, ಹಣದುಬ್ಬರ, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ನಿರುದ್ಯೋಗದ ವಿರುದ್ಧ ಜನರು ಆಕ್ರೋಶಗೊಂಡಿದ್ದು ವ್ಯಾಪಾರಸ್ಥರು ಮತ್ತು ಯುವಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇರಾನ್‌ನ 31 ಪ್ರಾಂತ್ಯಗಳ ಪೈಕಿ 26 ಪ್ರಾಂತ್ಯಗಳಲ್ಲಿ ಕಳೆದ 9 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದೆ.

ಪ್ರತಿಭಟನೆಗಳ ವೇಳೆ ಹಿಂಚಾಚಾರ ನಡೆದಿದ್ದು ಸುಮಾರು 20ರಿಂದ 31 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಭದ್ರತಾ ಪಡೆಗಳು ಸುಮಾರು 1,000ಕ್ಕೂ ಹೆಚ್ಚು ಜನರನ್ನು ಬಂಧಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...